Wed,May08,2024
ಕನ್ನಡ / English

ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ವಿಧಿವಶ :ಒಂದು ದಿನ ಶೋಕಾಚರಣೆ ಘೋಷಣೆ | JANATA NEWS

07 Sep 2022
1811

ಬೆಂಗಳೂರು : ಹೃದಯಾಘಾತದಿಂದ ನಿನ್ನೆ ರಾತ್ರಿ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ವಿಧಿವಶರಾಗಿದ್ದಾರೆ. ಕತ್ತಿ ನಿಧನಕ್ಕೆ ಸರ್ಕಾರ ರಾಜ್ಯಾದ್ಯಂತ ಇಂದು ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ಕತ್ತಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತಿದೆ ಎಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಮಂಗಳವಾರ ರಾತ್ರಿ ಸುಮಾರು 10.30ಕ್ಕೆ ಬಚ್ಚಲು ಕೋಣೆಯಲ್ಲಿ ಉಮೇಶ್ ಕತ್ತಿ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದ್ದು, ಬಾಗಿಲು ತೆಗೆದು ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಉಮೇಶ್ ಕತ್ತಿ ಅವರನ್ನು ಕೂಡಲೇ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಉಮೇಶ್​ ಕತ್ತಿ ಅವರಿಗೆ ಈ ಹಿಂದೆ ಎರಡು ಬಾರಿ ಹೃದಯಾಘಾತ ಆಗಿದ್ದು, ಉಮೇಶ್​ ಕತ್ತಿ ಅವರಿಗೆ ಹೃದಯಕ್ಕೆ ಸ್ಟಂಟ್​ ಅಳವಡಿಸಲಾಗಿತ್ತು, ಎನ್ನಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದುಃಖ ವ್ಯಕ್ತಪಡಿಸಿದ್ದು, ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಎಂದಿದ್ದಾರೆ. ಅವರು ನಿನ್ನೆ ತಡರಾತ್ರಿ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ತಿಳಿಸಿದ್ದಾರೆ.

English summary : Minister Umesh Katthi passes away due to heart attack: One day mourning announced

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...