Sat,May18,2024
ಕನ್ನಡ / English

ಉಮೇಶ್ ಕತ್ತಿ ನಿಧನ ಹಿನ್ನಲೆ: ನಾಳೆ ನಡೆಯಬೇಕಿದ್ದ ಬಿಜೆಪಿಯ ಜನೋತ್ಸವ ಭಾನುವಾರಕ್ಕೆ ಮುಂದೂಡಿಕೆ | JANATA NEWS

07 Sep 2022
2533

ಬೆಂಗಳೂರು : ಸಚಿವ ಉಮೇಶ್ ಕತ್ತಿ ಅವರ ಮರಣದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.

ನಾಳೆ ರಂದು ನಡೆಯಬೇಕಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ಭಾನುವಾರ ಕ್ಕೆ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಹೇಳಿದ್ದಾರೆ. ದೊಡ್ಡಬಳ್ಳಾಪುರ ಪಟ್ಟಣದಲ್ಲಿ ನಿಗದಿಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಅರಣ್ಯ ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನೆಲೆ ಮುಂದೂಡಲಾಗಿದೆ ಎಂದು ಹೇಳಿದರು.

ಕತ್ತಿಯವರು ನಮ್ಮನ್ನೆಲ್ಲ ಅಗಲಿದ್ದಾರೆ. ಕತ್ತಿಯವರ ಕುಟುಂಬದ ದು:ಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಬಹಳ ನೋವಿನ ಸಂಗತಿ ಇದು.ನಾವೆಲ್ಲ ಶೋಕದಲ್ಲಿದ್ದೇವೆ, ರಾಜ್ಯದಲ್ಲಿ ಶೋಕಾಚರಣೆ ಇದೆ. ಈ‌ ಕಾರಣದಿಂದ ನಾಳೆ ಜನೋತ್ಸವ ನಡೆಸುವುದಿಲ್ಲ ಎಂದು ಹೇಳಿದ್ದಾರೆ.

ಆತ್ಮೀಯ ಸ್ನೇಹಿತರು ಹಾಗೂ ಸಂಪುಟಗ ಹಿರಿಯ ಸಹೋದ್ಯೋಗಿಗಳು ಆದ ಉಮೇಶ್ ಕತ್ತಿ ಅವರು ಅಕಾಲಿಕ ನಿಧನ ಅತೀವ ನೋವು ತಂದಿದೆ. ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆದಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಅಂತೆಯೇ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ಈ ಸಂಬಂಧ ಎಲ್ಲ ರೀತಿಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದರು.

ಶೋಕಾಚರಣೆ ಹಿನ್ನೆಲೆ ಯಾವುದೇ ಸರ್ಕಾರ ಕಾರ್ಯಕ್ರಮವಿರುವುದಿಲ್ಲ. ತುರ್ತಾಗಿ ಪ್ರವಾಹ ನಿರ್ವಹಣೆ ಬಿಟ್ಟರೆ ಸರ್ಕಾರದ ಕಾರ್ಯಕ್ರಮವಿಲ್ಲ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬಿಜೆಪಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಯಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್​ 8 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ಅರಣ್ಯ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ ಹೊಂದಿದ ಹಿನ್ನೆಲೆ ಜನೋತ್ಸವ ಕಾರ್ಯಕ್ರಮವನ್ನು ಸೆ. 11 ಭಾನುವಾರಕ್ಕೆ ಮುಂದೂಡಲಾಗಿದೆ.

RELATED TOPICS:
English summary :Background of Umesh Kattis death: BJP s Janotsava, which was supposed to be held tomorrow, has been postponed to Sunday

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...