Sun,Apr28,2024
ಕನ್ನಡ / English

ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ: ಕೇಂದ್ರದ ಮಾರ್ಗಸೂಚಿಯಂತೆ ಪರಿಹಾರ ನೀಡಲು ಸಿಎಂ ಮನವಿ | JANATA NEWS

07 Sep 2022
2892

ಬೆಂಗಳೂರು : ಮಳೆಹಾನಿಗೆ ಕೇಂದ್ರ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರಕ್ಕೆ ಶಿಫಾರಸು ಮಾಡಬೇಕು ಕೇಂದ್ರ ತಂಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಕರ್ನಾಟಕದಲ್ಲಿ ನಿರಂತರ ಭಾರಿ ಮಳೆಗೆ ಉಂಟಾದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದರು.

ಈ ವೇಳೆ, ರಾಜ್ಯದಲ್ಲಿ ಪ್ರವಾಹದಿಂದ ಜುಲೈ, ಆಗಸ್ಟ್ ಹಾಗೂ ಈ ತಿಂಗಳು ಸಂಭವಿಸಿದ ಹಾನಿಯ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ಸಂಭವಿಸಿದ ಹಾನಿಯ ಕುರಿತು ಹಾಗೂ ರಾಜ್ಯ ಸರ್ಕಾರ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಸಭೆಯಲ್ಲಿ ವಿವರವಾದ ಮಾಹಿತಿ ಒದಗಿಸಲಾಯಿತು. ತಂಡವು ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ರೂಪಿಸಲಾಗಿತ್ತು. ಇದರೊಂದಿಗೆ ಅತಿ ಹೆಚ್ಚು ಭೂಕುಸಿತ, ಸಮುದ್ರ ಕೊರೆತ ಸಂಭವಿಸಿರುವ ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೂ ಭೇಟಿ ನೀಡುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಬೆಂಗಳೂರು ನಗರ, ನೆರೆಯ ಮಂಡ್ಯ, ರಾಮನಗರ ಜಿಲ್ಲೆಗಳ ಪ್ರವಾಹ ಪರಿಸ್ಥಿತಿಯನ್ನು ಸಹ ಅವಲೋಕಿಸುವಂತೆ ತಿಳಿಸಲಾಯಿತು. ಈ ವರ್ಷ ಭಾರಿ ಸಂಖ್ಯೆಯಲ್ಲಿ ಮೀನುಗಾರಿಕಾ ದೋಣಿಗಳಿಗೆ, ಅಂಗಡಿ ಮುಂಗಟ್ಟುಗಳಿಗೆ ಸಂಭವಿಸಿದ ಹಾನಿ ಹಾಗೂ ರಾಮನಗರದ ರೇಷ್ಮೆ ರೀಲಿಂಗ್ ಘಟಕ ಹಾಗೂ ಟ್ವಿಸ್ಟಿಂಗ್ ಘಟಕಗಳಿಗೆ ಸಂಭವಿಸಿದ ನಷ್ಟವನ್ನು ಕೇಂದ್ರ ತಂಡದ ಗಮನಕ್ಕೆ ತರಲಾಯಿತು. ಮೊದಲ ಬಾರಿಗೆ ಇಂತಹ ಹಾನಿ ಸಂಭವಿಸಿದೆ. ಮೀನುಗಾರರ ಜೀವನೋಪಾಯಕ್ಕೆ ತೊಂದರೆಯಾಗಿದೆ. ಆದ್ದರಿಂದ ಮಾನವೀಯ ದೃಷ್ಟಿಯಿಂದ ಅವರಿಗೆ ನೆರವು ನೀಡಲು ಪರಿಶೀಲನೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಕೋರಿದರು.

ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶದ ರಕ್ಷಣೆಗೆ ಕೇಂದ್ರದ ನೆರವಿನ ಅಗತ್ಯವಿದೆ. ರಾಜ್ಯವು 330 ಕಿ.ಮೀ. ಕರಾವಳಿ ಪ್ರದೇಶವನ್ನು ಹೊಂದಿದ್ದು, ಸಮುದ್ರ ಕೊರೆತ ತಡೆಗಟ್ಟಲು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ, ಹೊಸ ಜಾಗಗಳಲ್ಲಿ ಕಡಲಕೊರೆತ ಉಂಟಾಗಿದ್ದು, ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶದ ರಕ್ಷಣೆಗೆ ಕೇಂದ್ರದ ನೆರವಿನ ಅಗತ್ಯವಿದೆ ಎಂದು ತಿಳಿಸಿದರು.

ಜತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಹಿಂದೆಂದೂ ಪ್ರವಾಹ ಕಾಣಿಸಿಕೊಳ್ಳದ ಕಲಬುರಗಿ, ಗದಗ, ಬೀದರ್, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಈ ಬಾರಿ ಪ್ರವಾಹ ಉಂಟಾಗಿದೆ ಎಂದು ತಿಳಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಬಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ವಿಪತ್ತು ನಿರ್ವಹಣೆ ಆಯುಕ್ತ ಮನೋಜ್ ರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

RELATED TOPICS:
English summary :Meeting with central study team: CM appeals to provide relief as per central guidelines

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...