Sat,May04,2024
ಕನ್ನಡ / English

ಗಂಡ-ಹೆಂಡತಿ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯ! | JANATA NEWS

07 Sep 2022
4259

ಶಿವಮೊಗ್ಗ : ಪತಿ-ಪತ್ನಿ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಪ್ರಿಯಾಂಕಾ ಲೇಔಟ್‌ನಲ್ಲಿ ಸಂಭವಿಸಿದೆ.

ಮೃತರನ್ನು ಮಂಜುಳಾ (35) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಮೆಸ್ಕಾಂ ನೌಕರ ದಿನೇಶ್ ಎಂಬಾತ 12 ವರ್ಷದ ಹಿಂದೆ ಶಿವಮೊಗ್ಗ ತಾಲೂಕಿನ ಮತ್ತಿಘಟ್ಟ ಗ್ರಾಮದ ಮಂಜುಳಾ ಅವರೊಂದಿಗೆ ಮದುವೆಯಾಗಿದ್ದ. ದಂಪತಿಗೆ 10 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಚಾಕುವಿನಿಂದ ಕತ್ತಿಗೆ ಚುಚ್ಚಿದ ಸ್ಥಿತಿಯಲ್ಲಿ ಮಂಜುಳಾ ಶವ ಪತ್ತೆಯಾಗಿದೆ. ಪತ್ನಿಯನ್ನು ಕೊಂದ ಬಳಿಕ ಪತಿ ದಿನೇಶ್ ತನ್ನ ಕೈಯನ್ನೂ ಚಾಕುವಿನಿಂದ ಕತ್ತರಿಸಿ ಕೊಂಡಿದ್ದಾನೆ. ಮಕ್ಕಳು ಬೆಳಿಗ್ಗೆ ಎದ್ದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ತಂದೆ ಪ್ರಜ್ಞೆ ತಪ್ಪಿ ಬಿದ್ದಿರುವುದನ್ನು ಕಂಡಿದ್ದಾರೆ.

ಕೂಡಲೇ ಮಕ್ಕಳು ಸಂಬಂಧಿಕರಿಗೆ ವಿಷಯ ತಿಳಿಸಿದ್ದಾರೆ. ಸಂಬಂಧಿಕರು ಬಂದು ದಿನೇಶ್‌ನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ದಿನೇಶ್ ಪ್ರತಿದಿನ ಮನೆಗೆ ತಡವಾಗಿ ಬರುತ್ತಿದ್ದ. ಇದೇ ಕಾರಣಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು. ಮಂಗಳವಾರ ರಾತ್ರಿಯೂ ಇದೇ ವಿಚಾರಕ್ಕೆ ದಂಪತಿ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ದಿನೇಶ್ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪತ್ನಿ ಮಂಜುಳಾ ಅವರ ಕುತ್ತಿಗೆ ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುಳಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಟ್ಟಿನಿಂದ ಕೊಲೆ ಮಾಡಿದ ದಿನೇಶ್, ಹೆದರಿ ತಾನೂ ಬ್ಲೇಡ್‌ನಿಂದ ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ

ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Husband-wife fight ends in wife murder!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...