Tue,May07,2024
ಕನ್ನಡ / English

ಸರ್ಕಾರಿ ಆಸ್ತಿ ಪರಭಾರೆ ಬಗ್ಗೆ ದಾಖಲೆ ಬಿಡುಗಡೆ ಮಾಡ್ತೇನೆ, ಅತಿದೊಡ್ಡ ಹಗರಣ ಬಯಲು ಮಾಡುತ್ತೇನೆ | JANATA NEWS

12 Sep 2022
2510

ಬೆಂಗಳೂರು : ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಆಸ್ತಿ ಪರಭಾರೆ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ. ರಾಜ್ಯ ಸರಕಾರದ ಅತಿದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಅವರು ಮಾತನಾಡಿ, ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ ಎಂದು ಹಲವು ಬಾರಿ ಕೆಣಕಿದ್ದಾರೆ. ಸಾವಿರಾರು ಕೋಟಿ ಬೆಲೆಬಾಳುವ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು‌ ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕುಮಾರಸ್ವಾಮಿ ಗುಡುಗಿದರು.

ನಾನು ಸುಖಾಸುಮ್ಮನೆ ಸದನದ ಸಮಯ ಹಾಳು ಮಾಡುವುದಿಲ್ಲ. ಇವತ್ತಿನ ಜೆಡಿಎಸ್‍ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಈ ವಿಷಯ ಸೇರಿ ಹಲವಾರು ವಿಚಾರವಾಗಿ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದೆ. ಇದರಿಂದ ದೊಡ್ಡ ಮಟ್ಟದ ನಷ್ಟವಾಗಿದೆ ಎಂದು ಹೇಳಿದರು.

ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ನೆರೆಯಿಂದ ಹಾನಿಯಾಗಿದೆ. ನೆರೆಯಿಂದ ಹಾನಿಯಾದ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುತ್ತೇನೆ. 40% ಕಮಿಷನ್ ಬಗ್ಗೆ ಚರ್ಚೆ ಮಾಡಬೇಕಾ? ಬೇಡ್ವಾ? ಎಂದು ಚರ್ಚೆ ಮಾಡುತ್ತೇನೆ ಎಂದರು.

ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಯಾರೂ ಸಹ ಯಾವುದೇ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತಿಲ್ಲ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡುತ್ತಿದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ. ಇಂತಹದೊಂದು ದಾಖಲೆ ಸದನದಲ್ಲಿ‌ ಇಡಬೇಕಿದೆ. ನಾಡಿನ‌ ಜನತೆಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಂದು ಸಂದೇಶ ಹೋಗಬೇಕು‌ ಎಂದರು.

ಅದಕ್ಕೆ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರೂಪಾಯಿ ಕಬಳಿಸುವ ಹುನ್ನಾರ ನಡೆದಿದೆ. ಈ ಸರಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

RELATED TOPICS:
English summary :I will release the document about misappropriation of government property, I will expose the biggest scam

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...