Mon,May06,2024
ಕನ್ನಡ / English

ಎಷ್ಟೇ ದೊಡ್ಡವರಾದ್ರೂ ಬಿಡಲ್ಲ, ನೋಯ್ಡಾ ಮಾದರಿಯಲ್ಲಿ ಸ್ಫೋಟಕ ಇಟ್ಟು ನೆಲಸಮ ಮಾಡ್ತೀವಿ | JANATA NEWS

13 Sep 2022
2101

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಮುಂದುವರಿದಿದೆ. ಎಷ್ಟೇ ದೊಡ್ಡವರು ಇದ್ದರೂ ತೆರವು ಮಾಡುತ್ತೇವೆ. ನೋಯ್ಡಾ ಮಾದರಿಯಲ್ಲಿ ಅಕ್ರಮ ಕಟ್ಟಡಗಳಿಗೆ ಸ್ಫೋಟಕ​ ಇಟ್ಟು ನೆಲಸಮಗೊಳಿಸುತ್ತೇವೆ ಎಂದು ಕಂದಾಯ ಸಚಿವ ಆರ್​ ಅಶೋಕ್​ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

ಐಟಿಯ 30 ಕಂಪನಿಗಳು ಒತ್ತುವರಿ ಮಾಡಿವೆ. ಪ್ರತಿ ಸರ್ಕಾರಗಳು ಬಹಳ ನಾಟಕ ಮಾಡ್ತಾ ಇದ್ದವು. ಮಳೆ ನಿಂತ ಬಳಿಕ ಡೆಮಾಲಿಶ್ ನಿಂತು ಹೋಗುತ್ತಿತ್ತು. ನಮ್ಮ ಇಲಾಖೆ ಪಟ್ಟಿ ರೆಡಿ ಮಾಡಿ, ಬಿಬಿಎಂಪಿಗೆ ಕೊಟ್ಟಿದೆ. ಮುಲಾಜಿಲ್ಲದೆ ಒತ್ತುವರಿ ತೆರವು ಮಾಡುತ್ತೇವೆ ಎಂದು ಹೇಳಿದರು.

ಐಟಿ-ಬಿಟಿ ಕಂಪನಿಗಳಿಗೆ ಯಾವ ವಿನಾಯಿತಿಯೂ ಇಲ್ಲ, ದೊಡ್ಡವರು ಚಿಕ್ಕವರು ಅಂತ ನೋಡಲ್ಲ. ಕಂದಾಯ ಇಲಾಖೆ, ಬಿಬಿಎಂಪಿ, ಬಿಡಿಎ ಜಂಟಿ ಕಾರ್ಯಾಚರಣೆ ಮಾಡುತ್ತಿವೆ. ನೆರೆ ನಮಗೆ ಪಾಠ ಕಲಿಸಿದೆ. ಬಾಗಮನೆ ಪಾರ್ಕ್​ಗೆ ಯಾವುದೇ ವಿನಾಯಿತಿ ಕೊಟ್ಟಿಲ್ಲ. ದೊಡ್ಡವರು ಚಿಕ್ಕವರು ಅಂತ ನೋಡಲ್ಲ ಎಂದು ಸಚಿವರು ಹೇಳಿದ್ದಾರೆ.

ಐಟಿ ಕಂಪನಿಗಳು ಒತ್ತುವರಿ ಮಾಡಿವೆ, ಬಿಲ್ಡರ್​ಗಳು ಒತ್ತುವರಿ ಮಾಡಿದ್ದಾರೆ. ಬಡವರು, ಶ್ರೀಮಂತರು, ಸಾಹುಕಾರ, ಮಧ್ಯಮ ವರ್ಗ ಅಂತ ನೋಡಲ್ಲ. ಬಿಬಿಎಂಪಿ ಆಯುಕ್ತರ ಜೊತೆ ಮಾತಾಡಿದ್ದೀನಿ. ಯಾರಿಗೂ ಕಾಲಾವಕಾಶ ನೀಡಲ್ಲ. ಕೋರ್ಟ್​ಗೂ ನಾವು ವಿನಂತಿ ಮಾಡ್ತೀವಿ. ಕೋರ್ಟ್ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚಿಸಿದೆ. ಕೆವಿಯಟ್ ಹಾಕುವುದರ ಕುರಿತು ಸಿಎಂ ಜೊತೆ ಚರ್ಚೆ ಮಾಡ್ತೀವಿ. ಎಜಿ ಬಳಿಯೂ ಈ ಬಗ್ಗೆ ಚರ್ಚೆ ಮಾಡ್ತೇನೆ ಎಂದು ಎಂದರು.

ಮುಂದಿನ ವರ್ಷ ಮಳೆಗಾಲ ಬರುವುದರೊಳಗೆ ನಾವು ಬಾಕಿ ಇರುವ ಎಲ್ಲಾ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗುವುದು. ಅಧಿಕಾರಿಗಳು ಮತ್ತು ಬಿಲ್ಡರ್‌ಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದರು.

ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡಗಳ ಬಗ್ಗೆ ಬಿಬಿಎಂಪಿ ಪಟ್ಟಿ ಮಾಡಿದ್ದು, 600 ಒತ್ತುವರಿ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದೆ. ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ. ಪ್ರತಿಷ್ಠಿತ ವಿಲ್ಲಾಗಳು, ಶಿಕ್ಷಣ ಸಂಸ್ಥೆ, ಮನೆಗಳು ಒತ್ತುವರಿ ಕಾರ್ಯಾಚರಣೆಗೆ ನೆಲಸಮವಾಗುತ್ತಿವೆ.

RELATED TOPICS:
English summary :No matter how big they are, they will raze the ground with explosives like Noida

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...