Sun,May19,2024
ಕನ್ನಡ / English

ಕೇರಳ ಮುಖ್ಯಮಂತ್ರಿಯ ರೈಲ್ವೆ ಯೋಜನೆ ಪ್ರಸ್ತಾಪಗಳನ್ನು ತಿರಸ್ಕರಿಸಿದ ಸಿಎಂ ಬೊಮ್ಮಾಯಿ | JANATA NEWS

18 Sep 2022
2226

ಬೆಂಗಳೂರು : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರೈಲ್ವೆ ಯೋಜನೆಗಳ ಕುರಿತಾಗಿ ಚರ್ಚೆ ನಡೆಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪಿಣರಾಯ್ ವಿಜಯನ್ ಭಾನುವಾರ ಭೇಟಿಯಾಗಿ ಚರ್ಚಿಸಿದ ನಂತರ ಸಿಎಂ ಬೊಮ್ಮಾಯಿ‌ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 2-3 ವಿಚಾರಗಳನ್ನು ಮುಂದಿಟ್ಟು ಚರ್ಚಿಸಿದರು.

ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಗಮಿಸಿದ್ದರು. ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೇ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಹಮತಿ ನೀಡುವಂತೆ ಕೇರಳ ಸರ್ಕಾರ ಕೋರಿತು.

ಪ್ರಸ್ತಾಪಿತ ಕಾಞಂಗಾಡ್-ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ. ಮಾರ್ಗ ಹೊಂದಿದ್ದು, ರಾಜ್ಯಕ್ಕೆ ಇದರಿಂದ ಹೆಚ್ಚಿನ ಅನುಕೂಲಗಳಿಲ್ಲ. ಅಲ್ಲದೆ ಪಶ್ಚಿಮ ಘಟ್ಟದ ಜೀವ ವೈವಿಧ್ಯ ಸೂಕ್ಷ್ಮ ಪ್ರದೇಶದಲ್ಲಿ ಹಾದು ಹೋಗುವ ಕಾರಣ ಸಹಮತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಅಲ್ಲದೆ ಇದೇ ವೇಳೆ ಹಳೆಯ ಯೋಜನೆಯಾದ ತಲಚೇರಿ- ಮೈಸೂರು ರೈಲು ಯೋಜನೆಯನ್ನೂ ಪ್ರಸ್ತಾಪಿಸಿದರು. ಆದರೆ ಈ ಯೋಜನೆಯ ರೈಲು ಮಾರ್ಗವು ಬಂಡಿಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮಧ್ಯಭಾಗದಲ್ಲಿ ಹಾದುಹೋಗುವುದರಿಂದ ಅಲ್ಲಿನ ವನ್ಯ ಜೀವಿ ಸಂಪತ್ತು ಹಾಗೂ ಅರಣ್ಯ ಸಂಪತ್ತಿಗೆ ಹಾನಿಯಾಗುತ್ತದೆ. ಆದ್ದರಿಂದ ಇದಕ್ಕೆ ಸಮ್ಮತಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ತಿಳಿಸಿದೆ. ಆಗ ಭೂಗತ ರೈಲು ಮಾರ್ಗ ನಿರ್ಮಿಸುವ ಕುರಿತು ಕೇರಳ ಸರ್ಕಾರವು ಪ್ರಸ್ತಾಪಿಸಿದ್ದು, ಆದರೆ ಇದರಿಂದಲೂ ನಿರ್ಮಾಣ ಚಟುವಟಿಕೆ ಸಂದರ್ಭದಲ್ಲಿ ಪರಿಸರ ಹಾನಿಯಾಗುವುದು. ಆದ್ದರಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಯಿತು.

ಇದೀಗ ಕೇರಳಕ್ಕೆ ಬಂಡಿಪುರ ರಾಷ್ಟ್ರೀಯ ಉದ್ಯಾನದ ಮೂಲಕ ರಾತ್ರಿ ವೇಳೆ ಎರಡು ಬಸ್ ಗಳು ಸಂಚರಿಸುತ್ತಿದ್ದು, ನಾಲ್ಕು ಬಸ್ ಗಳಿಗೆ ಅನುಮತಿ ನೀಡುವಂತೆ ಕೋರಿದರು. ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

RELATED TOPICS:
English summary :CM Bommai rejected Kerala Chief Minister railway project proposals

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...