Tue,May07,2024
ಕನ್ನಡ / English

ಪಿಎಸ್​ಐ ನೇಮಕಾತಿ ಅಕ್ರಮ: ಮೈಸೂರು ಸಂಚಾರಿ ಪೊಲೀಸ್​​ ಠಾಣೆಯ ಪಿಎಸ್​​ಐ ಅಶ್ವಿನಿ ಅಮಾನತು | JANATA NEWS

19 Sep 2022
3197

ಮೈಸೂರು : ಪಿಎಸ್​ಐ ನೇಮಕಾತಿಗೆ ಕುರಿತು ನಡೆದ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪ ಹೊತ್ತ ಮೈಸೂರಿನ ಎನ್.ಆರ್.ಸಂಚಾರ ವಿಭಾಗದ ಇನ್​ಸ್ಪೆಕ್ಟರ್ ಅಶ್ವಿನಿ ಅನಂತಪೂರ ಅವರನ್ನು ಅಮಾನತು ಮಾಡಲಾಗಿದೆ.

ಕೆಪಿಎಸ್​ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಎಫ್‌ಡಿಎ ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಆಡಿಯೋ, ವಾಟ್ಸ್​ಆಯಪ್​ ಸಂದೇಹ ಮತ್ತು ಹಣ ವರ್ಗಾವಣೆ ದಾಖಲೆಗಳು ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಪಿಎಸ್​​ಐ ಅಶ್ವಿನಿ ಮೂಲತಃ ಜಮಖಂಡಿ ತಾಲೂಕಿನ ಆಲಗೂರು ನಿವಾಸಿಯಾಗಿದ್ದಾರೆ. ಇವರು ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್​​ ಠಾಣೆಯlಲ್ಲಿ ಪಿಎಸ್​​ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪಿಎಸ್​ಐ ಅಶ್ವಿನಿ 2020ರಲ್ಲಿ ನಡೆದಿದ್ದ ಪರೀಕ್ಷೆ ವೇಳೆ, ಎಫ್​ಡಿಎ ಕೆಲಸ ಕೊಡಿಸುವುದಾಗಿ, ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ಬಸವರಾಜ ಝಳಕಿ ಎಂಬುವನಿಗೆ ಹೇಳಿದ್ದರು.

ಕೆಲಸ ಕೊಡಿಸಲು ಬಸವರಾಜ ಸೋದರ ಸಂಗಮೇಶ್ ಜೊತೆಗೆ 15 ಲಕ್ಷಕ್ಕೆ ಡೀಲ್​ ಮಾಡಿಕೊಂಡಿದ್ದರು. ಮುಂಗಡವಾಗಿ ಅಶ್ವಿನಿ ತಮ್ಮ ತಂದೆಯ ಅಕೌಂಟ್​ ಮೂಲಕ 2 ಲಕ್ಷ ಪಡೆದಿದ್ದರು. ಈ ಸಂಬಂಧ ಹಣಕಾಸಿನ ವ್ಯವಹಾರದ ಬಗ್ಗೆ ಮಾತಾಡಿರುವ ಆಡಿಯೋ ವೈರಲ್ ಆಗಿತ್ತು.

RELATED TOPICS:
English summary :PSI Recruitment Illegal: Mysore Traffic Police Station PSI Ashwini Suspended

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...