Mon,May06,2024
ಕನ್ನಡ / English

ಪ್ರೇಯಸಿಯ ಅಶ್ಲೀಲ ವಿಡಿಯೋ ಸೆರೆಹಿಡಿದು ಶೇರ್, ಪ್ರಿಯಕರನ ಕೊಲೆ! | JANATA NEWS

19 Sep 2022
3276

ಬೆಂಗಳೂರು : ಪ್ರೇಮಿಯೊಬ್ಬ ತನ್ನ ಪ್ರೇಯಸಿಯ ಅಶ್ಲೀಲ ವಿಡಿಯೋ ಸೆರೆಹಿಡಿದು ಶೇರ್ ಮಾಡಿ ಕೊಲೆಯಾಗಿದ್ದಾನೆ. ಪ್ರಿಯಕರನ ಕೃತ್ಯದಿಂದ ಬೇಸತ್ತಿದ್ದ ಪ್ರಿಯತಮೆ ತನ್ನ ಸ್ನೇಹಿತರ ಜೊತೆ ಸೇರಿ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟಿನಲ್ಲಿ ನಡೆದಿದೆ.

ವಿಕಾಸ್ (27) ಕೊಲೆಯಾದ ವೈದ್ಯ. ಪ್ರತಿಭಾ,ಸುಶೀಲ್, ಗೌತಮ್ ಮತ್ತು ಸೂರ್ಯ ಕೊಲೆಗೈದಿರುವ ಆರೋಪಿಗಳಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಾ ಹಾಗೂ ಕೊಲೆಯಾದ ವಿಕಾಸ್ ಪ್ರೀತಿಸುತ್ತಿದ್ದರು. ಡಾ. ವಿಕಾಸ್ ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿದ್ದ ವಿಕಾಸ್ ಚೆನ್ನೈ ನಲ್ಲಿ ವೈದ್ಯನಾಗಿ ಕೆಲಸ ಮಾಡಿಕೊಂಡಿದ್ದ. ಪ್ರತಿಭಾ ಹಾಗೂ ವಿಕಾಸ್ ಪರಸ್ಪರ ಪ್ರೀತಿಸುತ್ತಿದ್ದು ಕೆಲದಿನಗಳ ಹಿಂದೆ ಎರಡೂ ಕುಟುಂಬದಿಂದಲೂ ನವೆಂಬರ್‌ನಲ್ಲಿ ಮದುವೆಗೆ ಸಮ್ಮತಿ ಸಿಕ್ಕಿತ್ತು.

ಈ ನಡುವೆ ಪ್ರತಿಭಾ ಹಾಗೂ ಆಕೆಯ ತಾಯಿಯ ಅಶ್ಲೀಲ ಫೋಟೊ ಮತ್ತು ವಿಡಿಯೋಗಳನ್ನ ಸೆರೆಹಿಡಿದಿದ್ದ ವಿಕಾಸ್ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ನೋಡಿ ದಿಗಿಲುಗೊಂಡ ಪ್ರತಿಭಾ ಇದನ್ನು ಪ್ರಶ್ನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಭಾರಿ ಗಲಾಟೆ ನಡೆದಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಬೇಕಿದೆ ಎಂದು ಹೇಳಿ ಪ್ರತಿಭಾ ಡಾ. ವಿಕಾಸ್ ನನ್ನು ಕರೆಸಿಕೊಂಡಿದ್ದಾಳೆ. ಆರೋಪಿಗಳು ವಿಕಾಸ್ ಮೇಲೆ ಮನಸೋ ಇಚ್ಛೆ ಹಲ್ಲೆಯನ್ನು ಮಾಡಿದ್ದರು. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿಕಾಸ್ ಮೂರು ದಿನಗಳಿಂದ ಚಿಕಿತ್ಸೆಯನ್ನು ಪಡೆಯುತ್ತಾ ಸಾವು ಬದುಕಿನ ನಡುವೆ ಹೋರಾಟವನ್ನು ನಡೆಸುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಡಾ. ವಿಕಾಸ್ ಸಾವನ್ನಪ್ಪಿದ್ದ.

ಈ ಸಂಬಂಧ ಆರೋಪಿಗಳ ವಿರುದ್ಧ ಎಫ್‌ಐಆರ್​ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

RELATED TOPICS:
English summary :Captured and shared the obscene video of the lover, the murder of the lover!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...