Sun,May05,2024
ಕನ್ನಡ / English

ಹಬ್ಬವೆಂದು ದರ ಏರಿಸಿದರೆ ಪರ್ಮಿಟ್ ರದ್ದು, ಹೆಚ್ಚು ಟಿಕೆಟ್ ದರ ಕೇಳಿದರೆ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ! | JANATA NEWS

30 Sep 2022
1664

ಬೆಂಗಳೂರು : ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಂದ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗದಿತ ದರ ಮಾತ್ರವೇ ಪಡೆಯಬೇಕು. ಇಲ್ಲವಾದರೆ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸುತ್ತೇವೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಅಧಿಕೃತ ಟ್ವೀಟ್ ಮಾಡಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಕೀಳುವ ಸಾರಿಗೆ ಸಂಸ್ಥೆಗಳ‌ ಪರ್ಮಿಟ್ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ ಕೊಡದೆ, ಯಾವ ಯಾವ ರೂಟ್‍ಗಳಿಗೆ ಎಷ್ಟು ದರ ನಿಗಧಿ ಪಡಿಸಿದೆಯೋ ಅಷ್ಟನ್ನು ಮಾತ್ರ ತೆಗೆದು ಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ.

ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ಹೇಳಿದ್ದಾರೆ.

ಒಂದು ವೇಳೆ ಹೆಚ್ಚು ಟಿಕೆಟ್ ದರ ಕೇಳಿದರೆ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ ಬಸ್ ನಂಬರ್, ಮಾರ್ಗ ತಿಳಿಸಿ ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕಾಗಿ ಸಾರಿಗೆ ಇಲಾಖೆಯು ಸಹಾಯವಾಣಿ ಆರಂಭಿಸಿದ್ದು ಪ್ರಯಾಣಿಕರು (94498 63429/ 94498 63426) ಈ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಚಿವರು ಪ್ರಯಾಣಿಕರಲ್ಲಿ ಮನವಿ ಮಾಡಿದರು.

RELATED TOPICS:
English summary :Ramulu warns transport companies if fares are hiked during festivals, permit will be cancelled

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...