Sun,May19,2024
ಕನ್ನಡ / English

ಟಿಪ್ಪು ಹೆಸರು ತೆಗೆದು, ಒಡೆಯರ್ ಹೆಸರು ರೈಲಿಗೆ ಇಟ್ಟಿದ್ದಕ್ಕೆ ಆಕ್ಷೇಪ: ಹೆಚ್.ಡಿ. ರೇವಣ್ಣ | JANATA NEWS

08 Oct 2022
2708

ಹಾಸನ : ರೈಲಿಗೆ ಇಟ್ಟಿದ್ದ ಟಿಪ್ಪು ಹೆಸರನ್ನು ಏಕೆ ತೆಗೆಯಬೇಕಿತ್ತು, ಟಿಪ್ಪು ಕೂಡ ಈ ರಾಜ್ಯಕ್ಕೆ ಕೊಡುಗೆ ಕೊಟ್ಟಿದ್ದಾರೆ. ಬೇರೆ ರೈಲುಗಳಿಗೆ ಒಡೆಯರ್ ಹೆಸರಿಡಲಿ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ದುಡ್ಡು ಹೊಡೆಯೋದು, ಸಮಾಜವನ್ನು ಗುರಿಯಾಗಿಟ್ಟು ಕೆಲಸ ಮಾಡೋದನ್ನು ಮಾಡುತ್ತಿದೆ. ಇಷ್ಟು ವರ್ಷ ಟಿಪ್ಪು ಹೆಸರನ್ನು ರೈಲಿಗೆ ಇಡಲಾಗಿತ್ತು. ಯಾರಾದ್ರೂ ಆಕ್ಷೇಪ ವ್ಯಕ್ತ ಪಡಿಸಿದ್ದರಾ.? ಇದು ಕೇವಲ ಚುನಾವಣೆ ಗಿಮಿಕ್ಸ್ ಎಂದು ಕಿಡಿಕಾರಿದರು.

ಒಡೆಯರ ಹೆಸರು ಇಡಲಿ ನಾವು ಬೇಡ ಅನ್ನುವುದಿಲ್ಲ. ಆದ್ರೇ ಯಾರೋ ಈ ಹಿಂದೆ ಪುಣ್ಯಾತ್ಮರು ಟಿಪ್ಪು ಹೆಸರು ಇಟ್ಟಿದ್ದರು, ಆ ಹೆಸರು ಹಾಗೇ ಬಿಟ್ಟು, ಮೈಸೂರಿಗೆ ಎಷ್ಟೊಂದು ರೈಲು ಓಡಾಡುತ್ತವೆ. ಆ ಯಾವುದಾದರೂ ರೈಲಿಗೆ ಒಡೆಯರ್ ಹೆಸರು ಇಡಬಹುದಾಗಿತ್ತು ಎಂದು ಹೇಳಿದರು.

ಮೂರು ವರ್ಷದ ಹಿಂದೆನೇ ಒಡೆಯರ್ ಹೆಸರು ಇಡಬೇಕಿತ್ತು, ಏನು ಮಾಡುತ್ತಿದ್ದರು. ಈಗ ಕುವೆಂಪು, ಒಡೆಯರ್, ಎಸ್‍ಸಿ, ಎಸ್‍ಟಿ ಸಮಾಜ ನೆನಪಾಗಿದೆ. ದೇವೇಗೌಡರು ಒಳಮೀಸಲಾತಿ ಕೊಡಬೇಕೆಂದು ಎಷ್ಟು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಬಿಜೆಪಿಗೆ ಸಾಬ್ರು ಓಟು ಹಾಕಲ್ಲ ಎಂದು ಗುರಿಯಾಗಿಟ್ಟು ಕೊಂಡಿದ್ದಾರೆ.

ವೋಟಿಗೋಸ್ಕರ ಈ ಕೆಳಮಟ್ಟದ, ದ್ವೇಷದ ರಾಜಕಾರಣ ಮಾಡಬಾರದು. ಇಂತಹ ಭ್ರಷ್ಟ ಸರ್ಕಾರವನ್ನು ನಾನು ಐವತ್ತು ವರ್ಷದಲ್ಲಿ ನೋಡಿರಲಿಲ್ಲ. ಯಾವ ಮುಖ ಇಟ್ಟುಕೊಂಡು ವೋಟು ಕೇಳುತ್ತಾರೆ, ಯಾವ ನೈತಿಕತೆ ಇವರಿಗಿದೆ, ರಾಜ್ಯ, ಜಿಲ್ಲೆಗಳಲ್ಲಿ ಬಿಜೆಪಿಯವರು ಲೂಟಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :Objection to removing Tipu name and putting Wodeyar name on the train: H.D. Revanna

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...