Sun,May05,2024
ಕನ್ನಡ / English

ಹಿಂದೂ ಯುವಕನಿಗೆ ಬಲವಂತದ ಮತಾಂತರ: ಮಾಜಿ ಕಾರ್ಪೋರೇಟರ್ ಸೇರಿ ಮೂವರ ಬಂಧನ | JANATA NEWS

13 Oct 2022
1787

ಮಂಡ್ಯ : ಮಂಡ್ಯ ಮೂಲದ ಯುವಕನೊಬ್ಬನನ್ನು ಬಲವಂತವಾಗಿ ಮತಾಂತರ ಮಾಡಿದ ಪ್ರಕರಣದ ಪ್ರಮುಖ ಆರೋಪಿ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಅನ್ಸರ್ ಪಾಷಾ ಎಂಬುವರನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.

ಇತ್ತೀಚಿಗೆ ಮಂಡ್ಯ ಮೂಲದ ಯುವಕನೊಬ್ಬ ಮತಾಂತರ ಕೂಪಕ್ಕೆ ಸಿಲುಕಿ ಅನುಭವಿಸಿದ್ದ ನೋವನ್ನು ವಿಡಿಯೋ ಮೂಲಕ ಎಳೆಎಳೆಯಾಗಿ ಬಿಚ್ಚಿಟ್ಟಿದ್ದ. ಈ ವಿಡಿಯೋ ವೈರಲ್​ ಆಗಿತ್ತು.

ಬನಶಂಕರಿ ವಾರ್ಡ್ ಮಾಜಿ ಕಾರ್ಪೊರೇಟರ್ ಅನ್ಸರ್ ಪಾಷಾ, ನಯಾಜ್ ಖಾನ್ ಹಾಗೂ ಅಜೀಸಾಬ್ ಬಂಧಿತ ಆರೋಪಿಗಳಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕನ ಶ್ರೀಧರ್ / ಸಲ್ಮಾನ್ ಎಂಬಾತನನ್ನ ಮತಾಂತರ ಹಾಗೂ ಕತ್ನಾ ಮಾಡಲಾಗಿತ್ತು. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು.

ಹಣಕಾಸಿನ ನೆರವಿನ ನೆಪದಲ್ಲಿ ಪ್ರಕರಣದ ಮೊದಲ ಆರೋಪಿ ಅತ್ತಾವರ್ ರೆಹಮಾನ್ ಕಳೆದ ಒಂದು ವರ್ಷದ ಹಿಂದೆ ಬನಶಂಕರಿ‌ ಮಸೀದಿಗೆ ಸಂತ್ರಸ್ತ ಶ್ರೀಧರ್​​ನನ್ನು ಕರೆತಂದು‌ ಎಲ್ಲ ಆರೋಪಿಗಳನ್ನು ಪರಿಚಯಿಸಿದ್ದ. ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಹಂತ - ಹಂತವಾಗಿ ಇಸ್ಲಾಂ ಧರ್ಮಕ್ಕೆ‌ ಮತಾಂತರವಾಗಲು ಒತ್ತಡ ಹೇರಿದ್ದರು.

ಶ್ರೀಧರನಿಗೆ ಮೊಹಮ್ಮದ್ ಸಲ್ಮಾನ್ ಎಂದು ನಾಮಕರಣ ಮಾಡಿ ಬಾಂಡ್ ಪೇಪರ್ ಬರೆಸಿಕೊಂಡಿದ್ದರು. ಬಳಿಕ ಅವನ ಮೊಬೈಲನ್ನ ಪಡೆದು ಒಂದು ವಾರಗಳ ಕಾಲ ಅಕ್ರಮ ಬಂಧನದಲ್ಲಿಟ್ಟಿದ್ದರಂತೆ. ಇದೆಲ್ಲ ಆದ ಮೇಲೆ ಬಲವಂತವಾಗಿ ಕತ್ನಾ ಮಾಡಿಸಿದ್ದಾರೆ, ಬಲವಂತವಾಗಿ ಗೋಮಾಂಸ ತಿನ್ನಿಸಿದ್ದಾರೆ. ಇದರೊಂದಿಗೆ ಜೊತೆಗೆ ವರ್ಷಕ್ಕೆ ಮೂರು ಜನರನ್ನು ಕರೆತಂದು ಮತಾಂತರ ಮಾಡಿಸಬೇಕೆಂದು ಒತ್ತಡ ಹೇರಿದ್ದರು‌ ಎಂದು ಶ್ರೀಧರ್ ಆರೋಪಿಸಿದ್ದಾರೆ.

RELATED TOPICS:
English summary :Forced conversion of Hindu youth: Former corporator and three arrested

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...