Mon,May06,2024
ಕನ್ನಡ / English

ಮೀಸಲಾತಿ ನೀಡದಿದ್ದರೆ 25 ಲಕ್ಷ ಪಂಚಮಸಾಲಿ ಲಿಂಗಾಯತರನ್ನು ಸೇರಿಸಿ ಹೋರಾಟ ನಡೆಸಲಾಗುವುದು: ಬಸವ ಮೃತ್ಯುಂಜಯ ಸ್ವಾಮೀಜಿ | JANATA NEWS

13 Oct 2022
9814

ಬೆಳಗಾವಿ : ವಿಧಾನಸೌಧದ ಮುಂದೆ 25 ಲಕ್ಷ ಪಂಚಮಸಾಲಿ ಲಿಂಗಾಯತರಿಂದ ಪ್ರತಿಭಟನೆ ನಡೆಸಲು ಮುಂದಾಗುತ್ತೇವೆ ಎಂದು ಬಸವ ಮೃತ್ಯುಂಜಯ ಸ್ವಾಮೀಜಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಯುವಜನರ ಉದ್ಯೋಗಕ್ಕಾಗಿ ಮೀಸಲಾತಿ ಹೋರಾಟ ಒಂದೇ ಮಾರ್ಗವಾಗಿ ಉಳಿದಿದೆ. ಪಂಚಮಸಾಲಿ, ಗೌಡ ಲಿಂಗಾಯತ, ಮಲೆಗೌಡ, ದೀಕ್ಷ ಲಿಂಗಾಯತರುಗಳಿಗೆ 2ಎ ಹಾಗೂ ಚತುರ್ಥ ಲಿಂಗಾಯತರು ಸೇರಿದಂತೆ ಲಿಂಗಾಯತ ಎಲ್ಲಾ ಒಳಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರ್ಪಡೆಗೊಳಿಸುವಂತೆ ಹಕ್ಕೊತಾಯಿಸಿ ನಾವು ಪಂಚ ಹಂತದ ಚಳವಳಿ ಆರಂಭಿಸಿದ್ದು, ಕಡೆಯ ಹಂತದ ಹೋರಾಟ ಅಕ್ಟೋಬರ್ 21ರಂದು ಹುಕ್ಕೇರಿಯ ಬೈಪಾಸ್ ರಸ್ತೆ ಸಮೀಪ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಹುಕ್ಕೇರಿಯಲ್ಲಿ ಅ.21 ರಂದು ಲಿಂಗಾಯಿತ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲ್ಲಿದ್ದು ಅಷ್ಟರೊಳಗೆ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳಬೇಕು. ಇಲ್ಲದೆ ಇದ್ದರೆ ಹುಕ್ಕೇರಿ ಸಮಾವೇಶದಲ್ಲಿ ವಿಧಾನಸೌಧ ಮುತ್ತಿಗೆಗೆ ಕರೆ ನೀಡುವುದಾಗಿ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ

2ಎ ಮೀಸಲಾತಿಗೆ ಕಳೆದ 2 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಈವರೆಗೆ ನಮ್ಮ ಹೋರಾಟಕ್ಕೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಸೆ.15ರೊಳಗೆ ಮೀಸಲಾತಿ ಘೋಷಿಸಲಾಗುತ್ತೆ ಅಂತ ಬಿಎಸ್​ವೈ ಹೇಳಿದ್ರು. ಆದ್ರೆ ಈ ಸಮಯದವರೆಗೆ ಯಡಿಯೂರಪ್ಪನವರು ಇರಲಿಲ್ಲ. ಅದಾದ ಬಳಿಕ ಬೊಮ್ಮಾಯಿಯವರಿಗೆ ಹಲವು ಭಾರೀ ಮನವಿ ನೀಡಿದ್ದೇವೆ. ಆದರೆ ಯಾವುದೇ ಪ್ರತಿಕ್ರಿಯೆ ಬೊಮ್ಮಾಯಿ ಸರ್ಕಾರದಿಂದ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ ಕೈಗೊಳ್ಳುವ ಸಂಬಂಧ ಹುಕ್ಕೇರಿಯ ಸಮಾವೇಶದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. 2ಎ‌ ಮೀಸಲಾತಿ ನೀಡದಿದ್ದರೆ 25 ಲಕ್ಷ ಪಂಚಮಸಾಲಿ ಸಮುದಾಯದ ಜನ ವಿಧಾನಸೌಧದ ಮುಂದೆ ಧರಣಿ ಕೂರಲಾಗುವುದು. ಅಂತಿಮ ಹೋರಾಟವಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಹೋರಾಟದ ದಿನಾಂಕವನ್ನ ಅ.21ರಂದೇ ತಿಳಿಸುತ್ತೇವೆ ಎಂದರು.

ಮೀಸಲಾತಿ ಕೊಡುತ್ತೀರಾ ಅಥವಾ ಇಲ್ಲವೊ ಎಂಬುದನ್ನು ಸಿಎಂ ಸ್ಪಷ್ಟ ನಿಲುವು ಪಡಿಸಬೇಕು ಎಂದು ಆಗ್ರಹಿಸಿದರು. ಬೇರೆ ಸಮುದಾಯದ ಮೀಸಲಾತಿ ಕಿತ್ತು ಕೊಡಿ ಎಂದು ನಾವು ಕೇಳುತ್ತಿಲ್ಲ. ನಮ್ಮ‌ಬೇಡಿಕೆ ಸ್ಪಷ್ಟವಾಗಿದೆ. ಬೇರೆ ಸಮುದಾಯದ ಮೀಸಲಾತಿ ಬಗ್ಗೆ ಮಾತನಾಡಲ್ಲ. ಎಸ್ಸಿ ಎಸ್ಟಿ ಗೆ‌ಮೀಸಲಾತಿ ಹೆಚ್ಚಳ ನೀಡಿದ್ದನ್ನು ಸ್ವಾಗತಿಸುತ್ತೇನೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

RELATED TOPICS:
English summary :If reservation is not given, 25 lakh Panchamasali Lingayats will be included in the struggle: Basava Mrityunjaya Swamiji

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...