Sat,May18,2024
ಕನ್ನಡ / English

ಕೆಎಸ್ ಆರ್ ಟಿಸಿ ಸಿಬ್ಬಂದಿಗೆ 50 ಲಕ್ಷ ರೂ. ಅಪಘಾತ ವಿಮಾ ಯೋಜನೆ ಜಾರಿ | JANATA NEWS

19 Oct 2022
1803

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ಕೆಎಸ್‌ಆರ್‌ಟಿಸಿ ಮೊದಲ ಬಾರಿಗೆ 50 ಲಕ್ಷ ರೂ. ಅಪಘಾತ ವಿಮಾ ಯೋಜನೆ ಸೌಲಭ್ಯವನ್ನು ಸಿಬ್ಬಂದಿಗಾಗಿ ನಿಗಮ ಜಾರಿಗೊಳಿಸಿದೆ.

ಇದುವರೆಗೂ ಸಾರಿಗೆ ನಿಗಮದ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಅಥವಾ ಶಾಶ್ವತ / ಭಾಗಶಃ ಅಂಗವೈಕಲ್ಯತೆಗೆ ತುತ್ತಾದರೆ ಯಾವುದೇ ದೊಡ್ಡ ಮೊತ್ತದ ಪರಿಹಾರದ ಹಣ ಅವರ ಅವಲಂಬಿತರಿಗಾಗಲಿ ಅಥವಾ ಅವರಿಗಾಗಲಿ ಲಭಿಸುತ್ತಿರಲಿಲ್ಲ.

ಸಿಬ್ಬಂದಿ ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ. ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು ಎಂಬ ಕಾರಣಕ್ಕೆ ಅವರ ಅವಲಂಬಿತರ ಹಿತ ಕಾಪಾಡಲು ದೊಡ್ಡ ಮೊತ್ತದ ಅಪಘಾತ ವಿಮಾ ಯೋಜನೆ ಜಾರಿಗೊಳಿಸಿದೆ.

ಸಿಬ್ಬಂದಿ ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಶಾಸಕ, ಕೆಎಸ್ ಆರ್ ಟಿಸಿ ಅಧ್ಯಕ್ಷರಾದ ಎಂ. ಚಂದ್ರಪ್ಪರವರ ಸಮ್ಮುಖದಲ್ಲಿ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿಜಿಎಂ ಪಂಕಜ್ ತಪ್ಲಿಯಾಲ್ ಅವರು ಸಹಿ ಹಾಕಿದರು.

ಈ ಸಿಬಂದಿಗಳ ವೇತನ ಪ್ಯಾಕೇಜ್ ಅಪಘಾತ ವಿಮಾ ಯೋಜನೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಮ್ಮ ವೇತನ ಖಾತೆಯನ್ನು ಹೊಂದಿರುವ ನಿಗಮದ ನೌಕರರಿಗೆ ” ಪ್ರೀಮಿಯಂ ರಹಿತ” ವೈಯುಕ್ತಿಕ ಅಪಘಾತ ವಿಮೆಯನ್ನು ಒಳಗೊಂಡಿದೆ. ಈಗಾಗಲೇ ನಿಗಮದ ಶೇ55 ರಷ್ಷು ಸಿಬಂದಿಗಳು ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾತೆಗಳನ್ನು ಹೊಂದಿರುತ್ತಾರೆ.

ಈ ವೈಯುಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ.50 ಲಕ್ಷಗಳ ಪರಿಹಾರದ ಹಣ ಕೂಡಲೇ ದೊರೆಯಲಿದೆ.

ಅಪಘಾತದಲ್ಲಿ ಸಿಬಂದಿಗಳು ಶಾಶ್ವತವಾಗಿ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದಲ್ಲಿ ರೂ.20 ಲಕ್ಷಗಳ ಹ಼ಣ ಹಾಗೂ ಶಾಶ್ವತ ಭಾಗಶ: ಅಂಗವೈಕಲ್ಯ ಉಂಟಾದಲ್ಲಿ ರೂ.10 ಲಕ್ಷಗಳ ವಿಮಾ ಪರಿಹಾರ ದೊರೆಯಲಿದೆ. ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.

RELATED TOPICS:
English summary :50 lakhs for KSRTC staff. Implementation of accident insurance scheme

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...