Sat,May04,2024
ಕನ್ನಡ / English

ಇನ್​ಸ್ಪೆಕ್ಟರ್ ನಂದೀಶ್ ಸತ್ತದ್ದು ಬರೀ ಹೃದಯಾಘಾತದಿಂದಲ್ಲ, ಬಿಜೆಪಿ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ! | JANATA NEWS

28 Oct 2022
1914

ಬೆಂಗಳೂರು : ಅಮಾನತುಗೊಂಡಿದ್ದ ಕೆ.ಆರ್​​.ಪುರ ಇನ್ಸ್​ಪೆಕ್ಟರ್ ನಂದೀಶ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕೆ.ಆರ್.ಪುರ ಪೊಲೀಸ್ ಠಾಣೆ ಇನ್​ಸ್ಪೆಕ್ಟರ್ ನಂದೀಶ್ ಅವರ ಸಾವು ಬರೀ ಹೃದಯಾಘಾತದಿಂದ ಸಂಭವಿಸಿಲ್ಲ. ಇದು ಉತ್ತರ ಭಾರತದ ಅಧಿಕಾರಿಗಳ ದರ್ಪದಿಂದ ಹಾಗೂ ಸರ್ಕಾರದಿಂದಲೇ ನಡೆದ ಕಗ್ಗೊಲೆ ಎಂದು ಗಭೀರ ಆರೋಪ ಮಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ನಂದೀಶ್​ರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್​ ಮಾಡಿದ ಅವರು 'ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಅವರ ಹೃದಯಾಘಾತಕ್ಕೆ ಕಾರಣವೇನು? ಎಂದು ಇಡೀ ರಾಜ್ಯ ಪ್ರಶ್ನೆ ಮಾಡುತ್ತಿದೆ. ಈಗ ಸರಕಾರವೇ ಸತ್ಯ ಹೇಳಿದೆ! ಸದ್ಯ, ಸರಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!! ಶ್ರೀ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸಚಿವರೇ ವಿಷಯ ಬಹಿರಂಗ ಪಡಿಸಿದ್ದಾರೆ' ಎಂದು ಹೇಳಿದ್ದಾರೆ.

ಅಮಾನತು ಶಿಕ್ಷೆಗೆ ಗುರಿಯಾಗಿ ಧಾರುಣ ಸಾವಿಗೆ ತುತ್ತಾದ ಕೆ.ಆರ್.ಪುರ ಠಾಣೆ ಇನ್ಸಪೆಕ್ಟರ್ ನಂದೀಶ್ ಅವರ ಹೃದಯಾಘಾತಕ್ಕೆ ಕಾರಣವೇನು? ಇದು ಇಡೀ ರಾಜ್ಯದ ಪ್ರಶ್ನೆ. ಈಗ ಸರಕಾರವೇ ಸತ್ಯ ಹೇಳಿದೆ! ಸದ್ಯ, ಸರಕಾರವು ಸಾವಿನಲ್ಲೂ ಸತ್ಯ ಹೇಳುವ ಧೈರ್ಯ ಮಾಡಿದೆ!. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಚಿವರೇ ವಿಷಯ ಬಹಿರಂಗ ಮಾಡಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ ಎನುವುದನ್ನು ಸ್ವತಃ ಸರಕಾರವೇ ಒಪ್ಪಿಕೊಂಡಂತೆ ಆಗಿದೆ. ಪೋಸ್ಟಿಂಗ್ ಗೆ 70-80 ಲಕ್ಷ ರೂ. ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತದೆ ಎಂದು ಹೇಳಿರುವ ಸಚಿವ ಎಂಟಿಬಿ ನಾಗರಾಜ್ ಅವರ ಹೇಳಿಕೆಯು ಈ ಸರಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ ಎಂದು ಅವರು ಟೀಕಿಸಿದ್ದಾರೆ.

ಸಚಿವರೇ ಹೇಳಿದಂತೆ 70-80 ಲಕ್ಷ ರೂ.ಗಳನ್ನು ನಂದೀಶ್ ಅವರು ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪರ್ಸೆಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯವುದಾದರೂ ಇದೆಯಾ? ಸಚಿವರಂತೆ ನೀವೂ ಸತ್ಯ ಹೇಳಿ ಸಿಎಂ ಸಾಹೇಬರೇ ಎಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.

ಬಿಜೆಪಿ ಸರಕಾರವು ಕರ್ನಾಟಕ ಪೊಲೀಸ್ ವ್ಯವಸ್ಥೆಯ ನೈತಿಕಸ್ಥೈರ್ಯ ಕುಗ್ಗಿಸಿದೆ. ಬಿಜೆಪಿ ಹೈಕಮಾಂಡ್ ಏಜೆಂಟ್​​ರಂತೆ ವರ್ತಿಸುತ್ತಿರುವ ಉತ್ತರ ಭಾರತದ ಕೆಲ ಹಿರಿಯ ಹಿಂದಿ ಪೊಲೀಸ್ ಅಧಿಕಾರಿಗಳು, ಕನ್ನಡ ಅಧಿಕಾರಿಗಳನ್ನು ಗುಲಾಮರಂತೆ ನೋಡುತ್ತಿದ್ದಾರೆ. ನಮ್ಮ ಕಿರಿಯ ಮಟ್ಟದ ಅಧಿಕಾರಿಗಳು ಅವರಿಗೆ ಊಳಿಗ ಮಾಡುವಂಥ ಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಂಟಿಬಿ ನಾಗರಾಜ್ ಅವರು ಹೇಳಿದ್ದು ನಿಜ ಎನ್ನುವುದಕ್ಕೆ ನಾನು ಟ್ಯಾಗ್ ಮಾಡಿರುವ ವಿಡಿಯೋ ತುಣುಕೇ ಸಾಕ್ಷಿ. ನನ್ನ ಪ್ರಶ್ನೆ ಇಷ್ಟೇ, ಈ ಬಗ್ಗೆ ಸಿಎಂ ಏನು ಹೇಳುತ್ತಾರೆ? ಸಂಘ ಸಂಸ್ಕಾರದ ಗೃಹ ಸಚಿವರು ಉತ್ತರ ನೀಡಲೇಬೇಕು. ಧಮ್ಮಿದ್ರೆ, ತಾಕತ್ತಿದ್ರೆ ಎನ್ನುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯುವ ತಾಕತ್ತು ತೋರಬೇಕು ಎಂದು ಅವರು ವ್ಯಂಗ್ಯವಾಡಿದ್ದಾರೆ.

ನೇಮಕಾತಿ, ವರ್ಗಾವಣೆ ಹೆಸರಲ್ಲಿ ಸರ್ಕಾರ ಲಕ್ಷಾಂತರ ಹಣ ವಸೂಲಿ ಮಾಡುತ್ತಿದೆ. ಅದೇ ರೀತಿ ಒತ್ತಡ ತಂದು ನಂದೀಶ್ ಅವರಿಂದ ಹಣ ವಸೂಲಿ ಮಾಡಲಾಗಿದೆ. ಅವರಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ರಕ್ಷಣೆ ಇದೆ ಅಂತ ಹೀಗೆ ಮಾಡುತ್ತಿದ್ದಾರೆ ಹಿರಿಯ ಅಧಿಕಾರಿಗಳು. ಹಲವಾರು ಪ್ರಕರಣಗಳಲ್ಲಿ ಐಎಎಸ್ ಸೇರಿ ಕೆಲ ಅಧಿಕಾರಿಗಳ ಮನೆಗಳಲ್ಲಿ ಕೋಟಿ ಕೋಟಿ ಹಣ ಸಿಗುತ್ತದೆ. ನಂತರ ನೋಡಿದರೆ ಅಂತಹ ಅಧಿಕಾರಿಗಳು ಆಯಕಟ್ಟಿನ ಜಾಗಕ್ಕೆ ಬರುತ್ತಾರೆ. ಇವರೇ ದಾಳಿ ಮಾಡ್ತಾರೆ. ಅಂತಹ ವ್ಯಕ್ತಿಗಳಿಗೆ ಒಳ್ಳೊಳ್ಳೆ ಪೋಸ್ಟಿಂಗ್ ಕೊಡ್ತಾರೆ ಎಂದು ವಾಗ್ದಾಳಿ ನಡೆಸಿದರು.

RELATED TOPICS:
English summary :Inspector Nandish died not only due to heart attack, posting is going on for money in BJP government!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...