Sat,May18,2024
ಕನ್ನಡ / English

ಅಪ್ಪು ಪ್ರಥಮ ವರ್ಷದ ಪುಣ್ಯತಿಥಿ : ಕಂಠೀರವ ಸ್ಟುಡಿಯೊದಲ್ಲಿ ಜನಸಾಗರ | JANATA NEWS

29 Oct 2022
3825

ಬೆಂಗಳೂರು : ಗಡಿ ಮಿತಿಯಿಲ್ಲದ ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಮನೆಮಗನಾಗಿದ್ದ "ಅಪ್ಪು" ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅನಿರೀಕ್ಷಿತವಾಗಿ ಈ ಲೋಕತ್ಯಜಿಸಿ ಇಂದು ಅಕ್ಟೋಬರ್ 29ಕ್ಕೆ ಒಂದು ವರ್ಷ. ಪ್ರಥಮ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಪುನೀತ್ ಸಮಾಧಿ ಸ್ಥಳ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಮಗಳು ಹಾಗೂ ಡಾ.ರಾಜ್ ಕುಟುಂಬಸ್ಥರು ಪೂಜೆ, ಊಟ ಬಡಿಸುವ ಶಾಸ್ತ್ರ ನೆರವೇರಿಸಿದ್ದಾರೆ.

ಪುನೀತ್ ಅವರ ಪುಣ್ಯಸ್ಮರಣೆ ಅಂಗವಾಗಿ ರಾಜ್ಯದ ವಿವಿಧ ಕಡೆ ಅನ್ನದಾನ, ರಕ್ತದಾನ ಏರ್ಪಡಿಸಲಾಗಿತ್ತು. ಅಪ್ಪು ತಮ್ಮ ಅಭಿಮಾನಿಗಳನ್ನು ಆಗಲಿ ಒಂದು ವರ್ಷವಾದರೂ ರಾಜ್ಯ, ನೆರೆರಾಜ್ಯದ ಜನತೆಗೆ ದುಃಖ, ಕಣ್ಣೀರು ಮಾತ್ರ ಕಡಿಮೆಯಾಗಿಲ್ಲ. ಕಳೆದ ಒಂದು ವರ್ಷದಿಂದ ಕಣ್ಣೀರಿನಲ್ಲಿಯೇ ಸಾಗುತ್ತಿದ್ದಾರೆ. ನಟನೆಗಿಂತ ಹೆಚ್ಚಾಗಿ ಪುನೀತ್ ತಮ್ಮ ನಡವಳಿಕೆ ಹಾಗೂ ಸಾಮಾಜಿಕ ಕಳಕಳಿಯಿಂದ ಜನತೆಗೆ ತುಂಬಾ ಹತ್ತಿರವಾಗಿದ್ದರು.

ಇಂದು ಮುಂಜಾನೆ ಕಂಠೀರವ ಸ್ಟುಡಿಯೊ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೊದಲು ಕೇವಲ ಕುಟುಂಬಸ್ಥರು ಅಪ್ಪುಗೆ ಇಷ್ಟವಾದ ತಿಂಡಿ, ತಿನಿಸುಗಳನ್ನು ಇಟ್ಟು ಸಮಾಧಿ ಮುಂದೆ ಪೂಜೆ ಮಾಡಿದ್ದಾರೆ. ಇಂದು ಪುಣ್ಯಸ್ಥಳಕ್ಕೆ ಜನಸಾಗರವೇ ಹರಿದುಬಂದಿದ್ದು ಪುಣ್ಯತಿಥಿಗೆ ಆಗಮಿಸುವವರಿಗೆ ಉಪಹಾರ, ಊಟ, ನೀರಿನ ವ್ಯವಸ್ಥೆ ಏರ್ಪಡಿಸಲಾಗಿತ್ತು.

ಅಪ್ಪು ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೊ ಬಳಿ ಇಂದು ದಿನವಿಡೀ ಗೀತ ನಮನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಸೇರಿದಂತೆ ಅನೇಕ ಕನ್ನಡ ಚಿತ್ರರಂಗದ ಕಲಾವಿದರು, ಅಪ್ಪು ಅಭಿಮಾನಿಗಳು ಇದರಲ್ಲಿ ಭಾಗಿಯಾಗುತ್ತಿದ್ದಾರೆ. ಸಾಧುಕೋಕಿಲ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿದ್ದಾರೆ.

ಇತ್ತ ಪುನೀತ್ ನಿವಾಸವಿರುವ ಬೆಂಗಳೂರಿನ ಸದಾಶಿವನಗರದಲ್ಲಿ ಪೆಂಡಾಲ್ ಹಾಕಲಾಗಿದ್ದು ಅಲ್ಲಿ ಕೂಡ ಆಗಮಿಸುವವರಿಗೆ ಊಟ-ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ಇನ್ನು ಡಾ.ರಾಜ್ ಕುಮಾರ್ ಕುಟುಂಬದ ಕೂಸು ಮೈಸೂರಿನ ಶಕ್ತಿದಾಮದ ಮಕ್ಕಳು ಅಪ್ಪು ಪುಣ್ಯಸ್ಮರಣೆ ಅಂಗವಾಗಿ ಕಾರ್ಯಕ್ರಮ ಏರ್ಪಡಿಸಲಿದ್ದಾರೆ. ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಗಣ್ಯರಿಂದ ಸ್ಮರಣೆ: ಪುನೀತ್ ರಾಜ್ ಕುಮಾರ್ ಮೊದಲ ವರ್ಷದ ಪುಣ್ಯತಿಥಿ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಗಣ್ಯರು, ಕಲಾವಿದರು ಅವರನ್ನು ಸ್ಮರಿಸುತ್ತಿದ್ದಾರೆ.

English summary :Appu first year anniversary: ​Lakhs of people visiting Kantheerava studio

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...