Thu,May02,2024
ಕನ್ನಡ / English

ಸರ್ಕಾರಿ ಆಸ್ಪತ್ರೆ ಯಲ್ಲಿ ತುರ್ತು ಸಂದರ್ಭದಲ್ಲಿ ಯಾವುದೇ ದಾಖಲೆ ಕೇಳುವಂತಿಲ್ಲ: ರಾಜ್ಯ ಸರ್ಕಾರ ಮಹತ್ವದ ಆದೇಶ | JANATA NEWS

04 Nov 2022
2599

ಬೆಂಗಳೂರು : ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ ಎಂದು ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದರು.

ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸಂಭವಿಸಿದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ವೈದ್ಯರು ಮತ್ತು ಶುಕ್ರೂಷಕರ ಕರ್ತವ್ಯ ಲೋಪ, ನಿರ್ಲಕ್ಷತೆಯು ಗಂಭೀರ ಸ್ವರೂಪದ್ದಾಗಿರುವುದರಿಂದ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರು ಸಂಬಂಧಪಟ್ಟ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು ಹಾಗೂ ಕರ್ತವ್ಯ ನಿರತ 3 ಶುಶೂಷಾಧಿಕಾರಿಗಳನ್ನು ತನಿಖೆ ಹಾಗೂ ಶಿಸ್ತುಕ್ರಮ ಬಾಕಿ ಇರಿಸಿ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿರುತ್ತಾರೆ.

ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್​​ಗೆ ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್‌ ನೋಟಿಸ್‌ ನೀಡಿ 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ ಎಂದರು.

ಈ ಕುಟುಂಬದ ಸಂಬಂಧಿಕರನ್ನು ಪತ್ತೆ ಮಾಡಲು 36 ಗಂಟೆಗಳಿಂದ ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಯಾರೂ ಇನ್ನೂ ಮುಂದೆ ಬಂದಿಲ್ಲ. ಇಂತಹ ಪರಿಸ್ಥಿತಿ ಇದ್ದರೂ, ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದರು.

ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು. ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

RELATED TOPICS:
English summary :No record can be asked in case of emergency in government hospital: State government important order

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...