Mon,May13,2024
ಕನ್ನಡ / English

ಸೋಶಿಯಲ್ ಮೀಡಿಯಾ ಮೂಲಕ 40 ಲಕ್ಷ ರೂ. ವಂಚನೆ! ಗಂಡನೂ ಸಾಥ್! | JANATA NEWS

01 Dec 2022
3082

ವಿಜಯಪುರ : ಯುವಕನೊಬ್ಬನಿಗೆ ಹಾಸನದ ಫೇಸ್‌ಬುಕ್‌ ಗೆಳತಿಯಿಂದ ಉಂಟಾಗಿದ್ದ 40 ಲಕ್ಷ ರೂ. ಪಂಗನಾಮ ಪ್ರಕರಣದ ಆರೋಪಿ ಮಹಿಳೆಯನ್ನು ವಿಜಯಪುರ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ.

ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಹಾಸನ ಮೂಲದ ಹುಡುಗಿ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮದ ಯುವಕ ಪರಶುರಾಮ.

ಪರಶುರಾಮ‌ ಎಂಬಾತ ಹೈದ್ರಾಬಾದ್ ನಲ್ಲಿ ಕಟ್ಟಡ ಕಾರ್ಮಿಕರ ಸೂಪರ್ ವೈಸರ್ ಆಗಿದ್ದ, ಅವನಿಗೆ 30 ಸಾವಿರ ಸಂಬಳ ಬರುತ್ತಿತ್ತು. ಈತನಿಗೆ ಫೇಸ್‌ಬುಕ್‌ ಮೂಲಕ ಫ್ರೆಂಡ್‌ಶಿಪ್‌ ರಿಕ್ವೆಸ್ಟ್‌ ಕಳುಹಿಸಿ ಪರಿಚಯ ಮಾಡಿಕೊಂಡ ಹಾಸನ ಮೂಲದ ಮಂಜುಳಾ ಪ್ರೀತಿಯ ನಾಟಕವಾಡಿ, ತಾನು ಐಎಎಸ್‌ ಓದುತ್ತಿರುವುದಾಗಿ ತಿಳಿಸಿ ಲಕ್ಷ ಲಕ್ಷ ಹಣವನ್ನು ಯುವಕನಿಂದ ಪಡೆದಿದ್ದಳು.

ಅವಳ ಓದಿಗಾಗಿ ಮನೆಯಲ್ಲಿ ಕೂಡಿಟ್ಟಿದ್ದ 5 ಲಕ್ಷ ರೂ. ಹಣ, ಒಂದು ಪ್ಲಾಟ್ ಸೇರಿ ಎಲ್ಲವನ್ನು ಮಾರಿ ಹಣ ಕಳುಹಿಸಿದ್ದನು. ಆದರೆ ಸುಮಾರು 40 ಲಕ್ಷ ದಷ್ಟು ‌ಹಣ ಕಳಿಸಿದರೂ ಅವಳಿಗೆ ಆತ ಭೇಟಿ ಆಗಿರಲಿಲ್ಲ.

ಈ ನಡುವೆ ಸಲುಗೆ ಬೆಳೆದಿತ್ತು. ಈ ಸಲುಗೆ ಪ್ರೀತಿಗೆ ತಿರುಗಿತ್ತು. ಇಬ್ಬರೂ ಒಬ್ಬರನೊಬ್ಬರು ನೋಡದೆಯೇ ಮನಸಾರೆ ಪ್ರೀತಿಸುತ್ತಿದ್ದರು. ಅವಳ ಫೇಸ್ ಬುಕ್ ಡಿಪಿ ನೋಡಿ ಮಾರುಹೋಗಿದ್ದ. ಅಂದಹಾಗೆ ಅಲ್ಲಿ ಇದ್ದಿದ್ದು ನಟಿ ಕೀರ್ತಿ ಸುರೇಶ್ ಅವರ ಫೋಟೋ.

ಈತ ಸ್ನಾನ ಮಾಡುವ ಸಂದರ್ಭದಲ್ಲಿ ವಿಡಿಯೋ ಕಾಲ್ ಮಾಡಿ ಅದನ್ನು ರಿಕಾರ್ಡ ಮಾಡಿಕೊಂಡಿದ್ದಳು. ಬಳಿಕ ಆ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೆಲ್ ಮಾಡಿ, ಹಣಕ್ಕಾಗಿ ಡಿಮ್ಯಾಂಡ್ ಇಟ್ಟು ಹಂತ ಹಂತವಾಗಿ ಲಕ್ಷಾಂತರ ರೂ. ಹಣವನ್ನು ಕಿತ್ತುಕೊಂಡಿದ್ದಾರೆ.

ಇದರಿಂದ ರೋಸಿ ಹೋದ ಯುವಕ ವಿಜಯಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದನು. ಪೊಲೀಸರು ಆರೋಪಿ ಮಂಜುಳಾಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ತನ್ನ ಗಂಡನೂ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಹಿಳೆ ಬಾಯಿ ಬಿಟ್ಟಿದ್ದಾರೆ. ಪೋಲಿಸರು ಬಂದ ಮಾಹಿತಿ ತಿಳಿದ ಮಂಜುಳಾ ಗಂಡ ಎಸ್ಕೇಪ್ ಆಗಿದ್ದಾನೆ.

ಈತನ‌ ಹಣದಲ್ಲಿ ಮಂಜುಳಾ 100 ಗ್ರಾಂ ಬಂಗಾರ, ಒಂದು ಹುಂಡೈ ಕಾರ್, ಬೈಕ್ ಖರೀದಿ ಮಾಡಿದ್ದಾಳೆ, ಜೊತೆಗೆ ಊರಲ್ಲಿ ಮನೆಯನ್ನು ಕೂಡಾ ಕಟ್ಟುತ್ತಿದ್ದಲು ಎನ್ನಲಾಗಿದೆ.

RELATED TOPICS:
English summary :40 lakh through social media. Fraud! Husband too!

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...