Tue,May07,2024
ಕನ್ನಡ / English

ವೃದ್ಧೆಯನ್ನು ಕೊಂದು ಕಬೋರ್ಡ್​​ನಲ್ಲಿಟ್ಟು ಪರಾರಿಯಾದ ಮಹಿಳೆ! | JANATA NEWS

04 Dec 2022
1492

ಬೆಂಗಳೂರು : ಅನೇಕಲ್​ ತಾಲೂಕಿನ ನೆರಳೂರು ಬಳಿ ವೃದ್ಧೆಯನ್ನು ಕೊಂದು ಶವವನ್ನು ಬೀರುವಿನಲ್ಲಿಟ್ಟು ಪಾತಕಿ ಪರಾರಿಯಾಗಿರುವ ಘಟನೆ ನಡೆದಿದೆ.

ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ವೃದ್ಧೆ ಇಂದು ಕೊಲೆಯಾಗಿರುವ ಸ್ಥಿತಿಯಲ್ಲಿ ನೆರಳೂರಿನ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದ್ದಾರೆ.

ಮನೆಯೊಂದರ ಮೂರನೇ ಮಹಡಿಯಲ್ಲಿ ಅಜ್ಜಿ ಹಾಗೂ ಕುಟುಂಬಸ್ಥರು ವಾಸವಾಗಿದ್ದರು. ನಾಲ್ಕನೇ ಮಹಡಿಯಲ್ಲಿ ಮುಸ್ಲಿಂ ಮಹಿಳೆ ಬಾಡಿಗೆಗೆ ಇದ್ದಳು. ಕಳೆದ ಮೂರು ದಿನಗಳ ಹಿಂದೆ ಟ್ಯೂಷನ್ ನಿಂದ ಮಕ್ಕಳನ್ನು ಕರೆದುಕೊಂಡು ಬರಲು ಸೊಸೆ ಜ್ಯೋತಿ ತೆರಳಿದ್ದರು. ಸೊಸೆ ಹೋಗುತ್ತಿದ್ದಂತೆ ಅಜ್ಜಿಯನ್ನು ತನ್ನ ಮನೆಗೆ ಮಹಿಳೆ ಆಹ್ವಾನಿಸಿದ್ದಳು. ಇದಾದ ಬಳಿಕೆ ಅಜ್ಜಿಯ ಪತ್ತೆಯಾಗಿರಲಿಲ್ಲ.

ಅಂದಿನಿಂದ ಪಾರ್ವತಮ್ಮ ಕುಟುಂಬಸ್ಥರು ಪಾರ್ವತಮ್ಮಳನ್ನು ಹುಡುಕಲು ಶುರು ಮಾಡಿದ್ದರು. ಆದರೆ ಪಾರ್ವತಮ್ಮ ಮಾತ್ರ ಸಿಕ್ಕಿರಲಿಲ್ಲ. ಇನ್ನೂ ಇತ್ತ ಮುಸ್ಲಿಂ ಮಹಿಳೆ ಕೂಡ ನಾಪತ್ತೆಯಾಗಿದ್ದರಿಂದ ಕುಟುಂಬಸ್ಥರು ಅನುಮಾನಗೊಂಡಿದ್ದರು.

ನಂತರ ಪಾರ್ವತಮ್ಮ ಕುಟುಂಬಸ್ಥರು ಮುಸ್ಲಿಂ ಮಹಿಳೆಯ ಮನೆ ಬೀಗ ತೆಗೆಸಿದ್ದರು. ನಂತರ ಮನೆಯನ್ನು ಪರಿಶೀಲಿಸಿದಾಗ ಕಬೋರ್ಡ್​​ನಲ್ಲಿ ಅಜ್ಜಿಯ ಮೃತದೇಹವನ್ನು ಪ್ಯಾಕ್ ಮಾಡಿ ಇಡಲಾಗಿರುವುದು ಗಮನಕ್ಕೆ ಬಂದಿದೆ.

ಮಹಿಳೆ ವೃದ್ಧೆಯನ್ನು ಕೊಂದು ಶವ ಪ್ಯಾಕ್​ ಮಾಡಿ ಬೀರುವಿನಲ್ಲಿಟ್ಟು ಪರಾರಿಯಾಗಿದ್ದಾಳೆ. ಅಜ್ಜಿಯ ಮೈ ಮೇಲೆ ಸಾಕಷ್ಟು ಚಿನ್ನವಿದ್ದ ಕಾರಣ ಕೊಲೆ ಮಾಡಿ ಚಿನ್ನದ ಸಮೇತ ಪರಾರಿಯಾಗಿರುವ ಶಂಕೆ ಮೂಡಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :The woman who killed the old woman and kept her in the cupboard escaped!

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...