Sun,May19,2024
ಕನ್ನಡ / English

ಖ್ಯಾತ ಉದ್ಯಮಿ ತನ್ನ ಪುತ್ರನನ್ನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ | JANATA NEWS

05 Dec 2022
2655

ಹುಬ್ಬಳ್ಳಿ : ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ.

ಅಖಿಲ್ ಭರತ ಮಹಾಜನ ಶೇಠ್ (26) ಎಂಬಾತ ಕೊಲೆಯಾಗಿದ್ದು, ಇಲ್ಲಿನ ಕೇಶ್ವಾಪುರ ಅರಿಹಂತ ನಗರದಲ್ಲಿ ಜುವೆಲರಿ ಅಂಗಡಿ ಮಾಲೀಕ ಭರತ್ ಸುಪಾರಿ ಕೊಟ್ಟು ಮಗನನ್ನು ಕೊಲೆ ಮಾಡಿಸಿದ್ದಾನೆ ಎನ್ನಲಾಗಿದೆ.

ಉದ್ಯಮಿ ಭರತ್ ಜೈನ್‌ ಪುತ್ರ ಅಖಿಲ್ ಜೈನ್ ಕಳೆದ ಡಿಸೆಂಬರ್ 1 ರಿಂದ ನಾಪತ್ತೆಯಾಗಿದ್ದಾನೆಂದು ಕುಟುಂಬಸ್ಥರು ಕೇಶ್ವಾಪುರ ಪೊಲೀಸರಿಗೆ ದೂರು ನೀಡಿದ್ದರು. ಅಖಿಲ್ ಕುರಿತು ಮಾಹಿತಿ ಕಲೆ ಹಾಕಿದ ಪೊಲೀಸರಿಗೆ ಹಲವು ಅಚ್ಚರಿಯ ವಿಚಾರಗಳು ಗೊತ್ತಾಗಿದ್ದವು. ದುಷ್ಟಚಟಗಳ ದಾಸನಾಗಿದ್ದ ಅಖಿಲ್ ಬಗ್ಗೆ ಮನೆಯವರೇ ರೋಸಿ ಹೋಗಿದ್ದರು ಅನ್ನೋ ವಿಷಯ ಪೊಲೀಸರಿಗೆ ತಿಳಿದಿದೆ.

ಭರತ್ ಜೈನ್​ರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಮಗನ ಹತ್ಯೆಗೆ ಸ್ಥಳೀಯ ಹಂತಕರಿಗೆ ಸುಪಾರಿ ನೀಡಿದ್ದಾಗಿ ತಂದೆ ಬಾಯ್ಬಿಟ್ಟಿದ್ದಾರೆ. ಇವರ ಹೇಳಿಕೆ ಆಧರಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹುಬ್ಬಳ್ಳಿ ತಾಲೂಕಿನ ದೇವರಗಿಡಿಹಾಳ ಗ್ರಾಮದಲ್ಲಿ ಭರತ್ ಜೈನ್​ಗೆ ಸೇರಿದ ತೋಟದ ಮನೆಯಲ್ಲಿ ಮಗನ ಮೃತದೇಹ ಪತ್ತೆಯಾಗಿದೆ.

ಕಟ್ಟಡ ಸಾಮಗ್ರಿಗಳ ವ್ಯವಹಾರ ಮಾಡಿಕೊಂಡಿದ್ದ ಅಖಿಲ ಮತ್ತು ಕೊಪ್ಪಿಕರ ರಸ್ತೆಯಲ್ಲಿ ಜುವೆಲರಿ ವ್ಯಾಪಾರ ಮಾಡಿಕೊಂಡಿದ್ದ ತಂದೆ ಭರತ ನಡುವೆ ಆಗಾಗ ಕೆಲವೊಂದು ವಿಷಯಗಳಿಗೆ ವಾಗ್ವಾದ ನಡೆಯುತ್ತಿತ್ತು. ಇದರಿಂದ ಬೇಸತ್ತಿದ್ದ ಭರತ್ ಅವರು ಮಗನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಲು ಮುಂದಾಗಿದ್ದಾರೆ. ಮಗನನ್ನು ತಾನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದಾಗಿ ಭರತ್ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

RELATED TOPICS:
English summary :A famous businessman killed his own son by giving betel nut

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...