Fri,May03,2024
ಕನ್ನಡ / English

ಮಾಂಡೌಸ್​ ಚಂಡಮಾರುತ, ಬೆಂಗಳೂರಿನಲ್ಲಿ ಮುಂದಿನ 4 ದಿನ ಭಾರಿ ಮಳೆ | JANATA NEWS

09 Dec 2022
2934

ಬೆಂಗಳೂರು : ಮಾಂಡಸ್ ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಇಂದಿನಿಂದ ಡಿ. 13ರವರೆಗೆ ಮಳೆ ಸುರಿಯಲಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಇಂದಿನಿಂದ ಡಿಸೆಂಬರ್ 13ರವರೆಗೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಾಂಡೌಸ್ ಚಂಡಮಾರುತ ಕಳೆದ 6 ಗಂಟೆಗಳಲ್ಲಿ 11 ಕಿಮೀ ವೇಗದಲ್ಲಿ ಸುಮಾರು ಪಶ್ಚಿಮ ವಾಯುವ್ಯಕ್ಕೆ ಚಲಿಸಿದೆ. ಶ್ರೀಹರಿಕೋಟಾದಲ್ಲಿ ಈ ಚಂಡಮಾರುತ ಇಂದು ಮಧ್ಯರಾತ್ರಿ ಗಂಟೆಗೆ 65-75 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ತುಂತುರು ಮಳೆಯಾಗಿದೆ. ಹವಾಮಾನ ಇಲಾಖೆ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡಿಸೆಂಬರ್ 13ರವರೆಗೆ ಹಳದಿ ಅಲರ್ಟ್ ಘೋಷಿಸಿದೆ.

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಾಗಲಕೋಟೆ, ಕಲಬುರಗಿ, ರಾಯಚೂರು,ವಿಜಯಪುರ ಮತ್ತು ಯಾದಗಿರಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.10 ರಿಂದ 14ರವರೆಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಮಾಂಡೌಸ್ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನ ತಾಪಮಾನ ಮತ್ತು ಗಾಳಿಯ ಗುಣಮಟ್ಟದ ಮೇಲೂ ಪರಿಣಾಮ ಉಂಟಾಗಲಿದೆ ಎಂದು ಹವಾಮಾನ ಇಲಾಖೆಯ ಮೂನ್ಸೂಚನೆ ನೀಡಿದೆ.

ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬೆಂಗಳೂರು ಹಾಗೂ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 12ರವರೆಗೆ ವಾರಾಂತ್ಯದಲ್ಲಿ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಮತ್ತು ಮಿಂಚು ಸಹಿತ ಮಳೆ ಸುರಿಯಲಿದೆ.

RELATED TOPICS:
English summary :Cyclone Mandause, heavy rain in Bengaluru for the next 4 days

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...