Sat,May04,2024
ಕನ್ನಡ / English

ಪೊಲೀಸರಿಂದಲೇ ದಂಪತಿಗಳ ದರೋಡೆ: ಇಬ್ಬರು ಹೊಯ್ಸಳ ಗಸ್ತು ಪೊಲೀಸ್ ಅಮಾನತು | JANATA NEWS

11 Dec 2022
2289

ಬೆಂಗಳೂರು : ನಿನ್ನೆ ಮಧ್ಯರಾತ್ರಿ ನಗರದ ಮಾನ್ಯತಾ ಟೆಕ್​ ಪಾರ್ಕ್​ ಬಳಿ ದಂಪತಿಯನ್ನು ತಡೆದು ಹಣ ವಸೂಲಿ ಮಾಡಿರುವ ಆರೋಪ ಹೊಯ್ಸಳ ಪೊಲೀಸರ ವಿರುದ್ಧ ಕೇಳಿಬಂದಿದ್ದು, ಮೇಲ್ನೋಟಕ್ಕೆ ಆರೋಪ ಸಾಬೀತಾದ ಬೆನ್ನಲ್ಲೇ ಇಬ್ಬರು ಪೊಲೀಸ್​ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಹೆಡ್ ಕಾನ್ ಸ್ಟೆಬಲ್ ರಾಜೇಶ್ ಹಾಗೂ ಕಾನ್ ಸ್ಟೆಬಲ್ ನಾಗೇಶ್ ಅಮಾನತುಗೊಂಡವರು. ಈ ಘಟನೆಗೆ ಕಾರಣರಾದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳನ್ನು ಗುರ್ತಿಸಿ ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣಾ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ತನ್ನ ಸಿಬ್ಬಂದಿಗಳಿಂದ ಇಂತಹ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮಾನ್ಯತಾ ಟೆಕ್ ಪಾರ್ಕ್ ಬಳಿ ವಾಸಿಸುತ್ತಿರುವ ಕಾರ್ತಿಕ್ ಪಾತ್ರಿ ಎಂಬುವರು ಟ್ವೀಟ್ ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಅನೂಪ್ ಶೆಟ್ಟಿ ತಿಳಿಸಿದ್ದಾರೆ.

ಡಿಸೆಂಬರ್ 8 ರಂದು ರಾತ್ರಿ 12-30 ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸ್ಸಾಗುವಾಗ ನಮ್ಮನ್ನು ತಡೆದ ಪೊಲೀಸರು ಐಡಿ ಕಾರ್ಡ್ ಕೇಳಿದರು. ಆಧಾರ್ ಕಾರ್ಡ್ ತೋರಿಸಿದ್ದೇವು. ಈ ವೇಳೆ ದಂಪತಿಯನ್ನು ತಡೆದ ಹೊಯ್ಸಳ ಸಿಬ್ಬಂದಿ 3000 ರೂಪಾಯಿ ಬೇಡಿಕೆ ಇಟ್ಟಿದ್ದಾರೆ.

ದಂಪತಿ ಹಣ ಕೊಡುವುದಿಲ್ಲ ಎಂದಾಗ ಪೊಲೀಸರು ಬೆದರಿಸಿದ್ದಾರೆ. ಬಳಿಕ ದಂಪತಿ 1000 ರೂ. ಡಿಜಿಟಲ್ ಪೇಮೆಂಟ್​ ಮಾಡಿದಾಗ ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಇದರಿಂದ ನೊಂದ ಕಾರ್ತಿಕ್​ ಟ್ವೀಟ್ ಮೂಲಕ ಬೇಸರ ಹೊರ ಹಾಕಿದ್ದರು.

RELATED TOPICS:
English summary :Couple robbed by police: Two Hoysala patrolmen suspended by police

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...