Sun,Apr28,2024
ಕನ್ನಡ / English

ಬೆಂಗಳೂರು ಡಬಲ್ ಮರ್ಡರ್ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್ | JANATA NEWS

20 Dec 2022
3003

ಬೆಂಗಳೂರು : ನಗರದ ಕೋರಮಂಗಲದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪ್ರಕರಣ ವರದಿಯಾದ 48 ಗಂಟೆಗಳಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಡಿಸೆಂಬರ್ 17ರ ರಾತ್ರಿ ಕೋರಮಂಗಲ ಆರನೇ ಹಂತದಲ್ಲಿರುವ ಕಾಂಟ್ರಾಕ್ಟರ್ ಗೋಪಾಲರೆಡ್ಡಿ ಎಂಬುವವರ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ದಿಲ್ ಬಹದ್ದೂರ್ ಹಾಗೂ ಮನೆ ಕೆಲಸಗಾರ ಕರಿಯಪ್ಪ ಎಂಬಾತನನ್ನು ಉಸಿರುಗಟ್ಟಿಸಿ ಕೊಲೆಗೈದಿದ್ದ ಆರೋಪಿಗಳು ಐದು ಲಕ್ಷ ನಗದು ಹಾಗೂ ನೂರು ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು

ಜಗದೀಶ ಹಾಗೂ ಸುನೀಲ ಎಂಬ ಆರೋಪಿಗಳನ್ನು ಬ್ಯಾಡರಹಳ್ಳಿ ಬಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಜಗದೀಶ ಮನೆ ಮಾಲೀಕ ಗೋಪಾಲರೆಡ್ಡಿ ಅವರ ಮಾಜಿ ಕಾರು ಚಾಲಕನಾಗಿದ್ದನು. ಬೆಲೆಬಾಳುವ ಕಾರನ್ನ ಶೋಕಿಗಾಗಿ ಒಬ್ಬನೇ ತೆಗೆದುಕೊಂಡು ಹೋಗಿ ಅಪಘಾತ ಮಾಡಿದ್ದನು. ಈ ವಿಚಾರದಲ್ಲಿ ಗೋಪಾಲರೆಡ್ಡಿ ಜಗದೀಶನ ಕೆನ್ನೆಗೆ ಹೊಡೆದಿದ್ದರು. ಅಂದಿನಿಂದ ರೆಡ್ಡಿ ಮೇಲೆ ಜಗದೀಶನಿಗೆ ಸಿಟ್ಟು ಇತ್ತು ಎಂಬುದು ತಿಳಿದುಬಂದಿದೆ.

ಘಟನೆ ನಂತರ ಗೋಪಾಲ ರೆಡ್ಡಿಯವರು ಜಗದೀಶನನ್ನು ಕೆಲಸದಿಂದ ತೆಗೆದು ಬೇರೊಬ್ಬರನ್ನು ನೇಮಿಸಿದ್ದರು. ಆದರೆ ಜಗದೀಶ ಗೋಪಾಲರೆಡ್ಡಿಯ ಹೊಸ ಚಾಲಕನ ಜೊತೆ ಮಾತುಕತೆ ಮುಂದುವರಿಸಿದ್ದ. ಅಲ್ಲದೆ ಮನೆಗೆಲಸ ಮಾಡುತ್ತಿದ್ದ ಕರಿಯಪ್ಪನ ಜೊತೆ ಫೋನ್ ಸಂಪರ್ಕದಲ್ಲಿದ್ದನು. ಹೀಗೆ ಡಿ.17 ರಂದು ಜಗದೀಶ ಕರಿಯಪ್ಪನಿಗೆ ಕರೆ ಮಾಡಿದ್ದಾಗ ಗೋಪಾಲರೆಡ್ಡಿ ಆಂದ್ರಪ್ರದೇಶದ ಮದುವೆ ಸಮಾರಂಭಕ್ಕೆ ಹೋಗಿದ್ದಾರೆ ಎಂದಿದ್ದಾನೆ.

ಸೇಡು ತೀರಿಸಿಕೊಳ್ಳಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದ ಜಗದೀಶ್ ತನ್ನ ಸ್ನೇಹಿತ ಲಗ್ಗೆರೆಯ ಕಿರಣ್ ಹಾಗೂ ಆತನ ಸಹೋದರ ಅಭಿಷೇಕ್ ಜೊತೆ ಸೇರಿ ಗೋಪಾಲರೆಡ್ಡಿಯ ಮನೆಗೆ ಬಂದಿದ್ದನು. ಗೋಪಾಲರೆಡ್ಡಿಯ ಮನೆಯ ಬಗ್ಗೆ ಸಂಪೂರ್ಣ ತಿಳಿದಿದ್ದ ಜಗದೀಶ್ ಮೊದಲು ಸ್ಟೂಲ್ ಬಳಸಿ ಮನೆಯ ಹಿಂಭಾಗದ ಕಂಪೌಂಡ್ ಜಿಗಿದು ಒಳಬಂದಿದ್ದನು.

ಬಳಿಕ ಸಿಸಿ ಕ್ಯಾಮರಾಗಳ ವೈರ್ ಕತ್ತರಿಸಿ ಸೆಕ್ಯೂರಿಟಿ ರೂಂನಲ್ಲಿದ್ದ ದಿಲ್ ಬಹದ್ದೂರ್​ನನ್ನು ಉಸಿರುಗಟ್ಟಿಸಿ ಮೈ ಕೈಗೆ ಟೇಪನ್ನು ಸುತ್ತಿ ಸಂಪ್​ಗೆ ಎಸೆದಿದ್ದನು. ನಂತರ ಕಿರಣ್ ಹಾಗೂ ಅಭಿಷೇಕನನ್ನು ಮನೆಯ ಕಾಂಪೌಂಡಿನೊಳಗೆ ಕರೆಸಿಕೊಂಡಿದ್ದನು.

ಮೂವರೂ ಸೇರಿ ಇಡೀ ರಾತ್ರಿ ಮನೆಯ ಬಾಗಿಲ ಬಳಿ ಕಾದು ಕುಳಿತಿದ್ದರು. ಡಿಸೆಂಬರ್ 17ರ ಬೆಳಗ್ಗೆ ಮನೆಗೆಲಸದ ಕರಿಯಪ್ಪ ಮನೆ ಬಾಗಿಲು ತೆರೆಯುತ್ತಿದ್ದಂತೆ ಆತನನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಬಂದ ಆಟೋದಲ್ಲೇ ಪರಾರಿಯಾಗಿದ್ದರು.

RELATED TOPICS:
English summary :Bangalore double murder case: Two accused arrested

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...