Mon,May06,2024
ಕನ್ನಡ / English

ಉದ್ಯಮಿ ಪ್ರದೀಪ್ ಆತ್ಮಹತ್ಯೆ, ಅರವಿಂದ ಲಿಂಬಾವಳಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು: ಸಿದ್ದರಾಮಯ್ಯ | JANATA NEWS

03 Jan 2023
1839

ಬೆಂಗಳೂರು : ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಆರೋಪಿಗಳ ಬಂಧನವಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತ ಹಾಗೂ ಉದ್ಯಮಿ ಪ್ರದೀಪ್ ನಿವಾಸಕ್ಕೆ ಸುರ್ಜೆವಾಲ ಹಾಗೂ ಸಿದ್ದರಾಮಯ್ಯ ಭೇಟಿ ನೀಡಿದ್ದು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

ಸಿದ್ದರಾಮಯ್ಯ ಮಾತನಾಡಿ ಇದು ನಡೆಯಬಾರದ ಘಟನೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪ್ರದೀಪ್ ಪತ್ನಿಯವರು ಪ್ರದೀಪ್​ಗೆ ನ್ಯಾಯ ಕೊಡಿಸಿ ಅಂತ ಕೇಳಿದ್ದಾರೆ. 1.5 ಕೋಟಿ ನಾವು ಇನ್ವೆಸ್ಟ್ ಮಾಡಿದ್ದೆವು. ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಅನ್ನೋದು ಇವರ ವಾದ.

ಲಿಂಬಾವಳಿ ಈ ಭಾಗದ ಶಾಸಕರು. ಸೆಟ್ಲಮೆಂಟ್​ಗೆ ಪ್ರಯತ್ನ ಮಾಡಿದ್ದಾರೆ. ಡೆತ್​ನೋಟ್ ನಲ್ಲಿ 6 ಜನರ ಹೆಸರು ಇದ್ದು ಅದರಲ್ಲಿ ಲಿಂಬಾವಳಿ ಹೆಸರು ಕೂಡ ಇದೆ. ಈಗಾಗಲೇ FIR ಆಗಿದೆ. ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು. ಕೂಡಲೇ ಎಲ್ಲ‌ರನ್ನು ಅರೆಸ್ಟ್ ಮಾಡಬೇಕು.

ತಾವು ನಂಬಿದ್ದ ಸ್ನೇಹಿತರಿಂದ ಹಣಕಾಸಿನ ವಿಚಾರದಲ್ಲಿ ಮೋಸಹೋಗಿ ಹಣಕಳೆದುಕೊಂಡು ಹತಾಷರಾಗಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಪ್ರದೀಪ್ ಅವರು ತಮ್ಮ ಡೆತ್ ನೋಟ್ ನಲ್ಲಿ ಮಾಜಿ ಶಾಸಕ ಮತ್ತು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಹೆಸರನ್ನು ಕೂಡ ಪ್ರಸ್ತಾಪಿಸಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ಸರ್ಕಾರದಲ್ಲಿ ಅನೇಕ ಜನ ಸಾಯೋದು, ದಯಾ ಮರಣ ಕೋರೋದು ಆಗ್ತಿದೆ.‌ ಇದಕ್ಕೆ ಭ್ರಷ್ಟಾಚಾರ ಕಾರಣ. ಭ್ರಷ್ಟಾಚಾರದ ವಿರುದ್ದ ಕ್ರಮ ಆಗದೆ ಇರೋದಕ್ಕೆ ಹೀಗೆ ಅಗ್ತಿದೆ. ಈ ಕೇಸ್ ನಲ್ಲಿ ಪ್ರದೀಪ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.

ಪೊಲೀಸರು ಅವರ ಮನೆಯವರ ಮೊಬೈಲ್ ಕೇಳ್ತಿದ್ದಾರೆ ಅಂತೆ. ಹೀಗೆಲ್ಲ ಮಾಡೋದು ಸರಿಯಲ್ಲ. ಗುತ್ತಿಗೆದಾರ ಸಂತೋಷ್ ‌ಪಾಟೀಲ್ ನನ್ನ ಸಾವಿಗೆ ಈಶ್ವರಪ್ಪ ಕಾರಣ ಅಂತ ಹೇಳಿದ್ರು.‌3 ತಿಂಗಳಲ್ಲಿ ಬಿ ರಿಪೋರ್ಟ್ ಕೊಟ್ರು. ಇದೇ ಪರಿಸ್ಥಿತಿ ಈ ಕೇಸ್​ನಲ್ಲಿ ಆಗಬಾರದು. ಸರ್ಕಾರ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು.

RELATED TOPICS:
English summary :Businessman Pradeep committed suicide, Arvind Limbavali should be arrested and interrogated: Siddaramaiah

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...