ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು! | JANATA NEWS
ಬೆಂಗಳೂರು : ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಅನಾರೋಗ್ಯದಿಂದ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಹೇಳಿವೆ.
ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಬಂದಿದ್ದಾರೆ ಎಂದು ಹೇಳಲಾಗಿದೆ. ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಸಂಬಂಧ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
RELATED TOPICS:
English summary :Congress leader Sonia Gandhi admitted to hospital