Fri,May03,2024
ಕನ್ನಡ / English

ಯುವಕನ ಕಿಡ್ನಾಪ್, ಕೊಲೆ ಪ್ರಕರಣ: 9 ತಿಂಗಳ ಬಳಿಕ ಚಾರ್ಮಾಡಿ ಘಾಟ್​​ನಲ್ಲಿ ಪೊಲೀಸರಿಂದ ಶವ ಹುಡುಕಾಟ | JANATA NEWS

04 Jan 2023
1611

ಬೆಂಗಳೂರು : ಕಳೆದ 9 ತಿಂಗಳುಗಳ ಹಿಂದೆ ಹತ್ಯೆಗೊಳಗಾಗಿದ್ದ ನಗರದ ಕೋಣನಕುಂಟೆ ನಿವಾಸಿ ಶರತ್ ಶವ ಪತ್ತೆಗಾಗಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಚಾರ್ಮಾಡಿ ಘಾಟ್​​ನಲ್ಲಿ ಶೋಧ ನಡೆಸುತ್ತಿದ್ದಾರೆ.

ಘಟನೆ ಹಿನ್ನೆಲೆ -
ಬೆಂಗಳೂರಿನ ಕೋಣನಕುಂಟೆ ನಿವಾಸಿ ಶರತ್ ಎಂಬಾತ ಸಾಲ ಪಡೆದು ಹಿಂತಿರುಗಿಸದೆ ಓಡಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಗ್ಯಾಂಗ್ ಶರತ್ ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು. ಕೊಲೆಯಾದ ಎಚ್. ಶರತ್ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಸಬ್ಸಿಡಿ ದರದಲ್ಲಿ ವಾಹನ ಕೊಡಿಸುವುದಾಗಿ ನಂಬಿಸಿದ್ದ. ಆದರೆ ಕಾರು ಕೊಡಿಸದೆ ಅಲ್ಲಿನ‌ ಜನರಿಗೆ ವಂಚಿಸಿದ್ದ.ಇದರಿಂದ ಹಣ ಕೊಟ್ಟು ಜನ ಎಚ್. ಶರತ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು.

ಚಿಕ್ಕಬಳ್ಳಾಪುರ ಮೂಲದ ಶ್ರವಣ್ ಈ ಕೊಲೆ ಮಾಡಿದ ಆರೋಪಿಯಾಗಿದ್ದು,​​ ಇವನ ತಂದೆ ವೆಂಕಟಚಲಪತಿ ಚಿಕ್ಕಬಳ್ಳಾಪುರದಲ್ಲಿ ಸಂಘಟನೆಯೊಂದರ ಅಧ್ಯಕ್ಷನಾಗಿದ್ದ. ಅಲ್ಲದೆ, ಪ್ರಿಂಟಿಂಗ್ ಪ್ರೆಸ್​​ವೊಂದರ ಮಾಲೀಕನಾಗಿದ್ದಾನೆ. ಫೈನಾನ್ಸ್ ವ್ಯವಹಾರವೂ ನಡೆಸುತ್ತಿದ್ದ ಮುಖಂಡನ ಮಗ ಶ್ರವಣ್ ಕೊಲೆಗೀಡಾದ ಶರತ್​ಗೆ ಕಳೆದ ವರ್ಷ 20 ಲಕ್ಷ ರೂಪಾಯಿ ಸಾಲ‌ ಕೊಟ್ಟಿದ್ದ ಎನ್ನಲಾಗಿದೆ.‌ ಕೊಟ್ಟಿದ್ದ ಹಣ ಹಿಂತಿರುಗಿಸಲು ಆರೋಪಿಯು ಸತಾಯಿಸುತ್ತಿದ್ದ‌. ಹೀಗಾಗಿ ಕಳೆದ ಜನವರಿಯಲ್ಲಿ ಶರತ್​ನನ್ನು ಅಪಹರಿಸಿ ಹಣ ನೀಡುವಂತೆ ಆರೋಪಿಯು ಪೀಡಿಸಿದ್ದ. ಆಗ ಕೆಲವೇ ದಿನಗಳಲ್ಲಿ ಹಣ ಕೊಡುವುದಾಗಿ ಶರತ್​​ ಹೇಳಿದ್ದ.‌ ಆದರೆ ನುಡಿದಂತೆ ನಡೆದುಕೊಳ್ಳದ ಕಾರಣ ಮಾರ್ಚ್ 23ರಂದು ಆರೋಪಿಗಳು ಬನಶಂಕರಿಯಲ್ಲಿ ಕಿಡ್ನಾಪ್‌ ಮಾಡಿ, ಫಾರ್ಮ್‌ ಹೌಸ್​​ವೊಂದದಕ್ಕೆ ಶರತ್ ಹಾಗೂ ಆತನ ಸಹಚರರು ಕರೆದೊಯ್ದು ಮನಬಂದಂತೆ ಹಲ್ಲೆ ಮಾಡಿದ್ದರು ಸಹ ಎನ್ನಲಾಗಿದೆ

ಕೊಲೆಯಾದ ಶರತ್‌ ನ ಶವನನ್ನು ಚಾರ್ಮಾಡಿ ಘಾಟ್‌ನಲ್ಲಿ ಎಸೆದು ಯಾರಿಗೂ ಶವದ ಸುಳಿವು ಸಿಗದಂತೆ ಮಾಡಿದ್ದರು. ಕೊಲೆಯಾಗಿ ತಿಂಗಳು ಕಳೆದ್ರೂ ಯಾರಿಗೂ ಗೊತ್ತಿರಲಿಲ್ಲ. ಅಲ್ಲದೆ ಕೊಲೆಯಾದವನ ಮೊಬೈಲ್‍ ನಿಂದಲೇ ಪೋಷಕರಿಗೆ ಸಂದೇಶ ರವಾನಿಸಲಾಗಿದೆ. ನಾನು ದುಡಿಯಲು ಹೋಗುತ್ತಿದ್ದೇನೆ ಹುಡುಕಬೇಡಿ ಎಂದು ಆರೋಪಿಗಳೇ ಶರತ್ ಪೋಷಕರಿಗೆ ಮೆಸೇಜ್ ಮಾಡಿದ್ದರು. ಬಳಿಕ ಮೊಬೈಲ್ ಅನ್ನು ಲಾರಿ ಮೇಲೆ ಎಸೆದಿದ್ದರು.

ಸದ್ಯ ಕಬ್ಬನ್ ಪಾರ್ಕ್ ಪೊಲೀಸರು ಸಮೊಟೋ ಪ್ರಕರಣವನ್ನು ದಾಖಲಿಸಿ 10 ಮಂದಿ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಕೊಲೆ ಪ್ರಕರಣ ಎಫ್‌ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಚಾರಣೆಯ ವೇಳೆ ಕೊಲೆ‌ ಮಾಡಿ ಶವವನ್ನು ಚಾರ್ಮಾಡಿ ಘಾಟ್‌ನಲ್ಲಿ‌ ಬಿಸಾಕಿರುವ ಬಗ್ಗೆ ಆರೋಪಿಗಳು ಹೇಳಿಕೆ ನೀಡಿದ್ದರು. ಇದರ ಆಧಾರದ ಮೇಲೆ ಕಬ್ಬನ್ ಪಾರ್ಕ್‌ ಪೊಲೀಸರು ಆರೋಪಿಗಳೊಂದಿಗೆ ಚಾರ್ಮಾಡಿ ಘಾಟ್​​ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಲೆ ಆರೋಪಿಗಳು ದಿನಕ್ಕೊಂದು ಜಾಗ ತೋರಿಸುತ್ತಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ ಆಳವಾದ ಕಂದಕಗಳು, ದಟ್ಟವಾದ ಪೂದೆಗಳ ಜಾಗಗಳನ್ನು ತೋರಿಸಿದ್ದಾರೆ. ಹೀಗಾಗಿ ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಶರತ್ ಮೃತದೇಹ ಮಾತ್ರ ಸಿಗುತ್ತಿಲ್ಲ. ರಾತ್ರಿ ವೇಳೆ ಶವ ಎಸೆದಿದ್ದರಿಂದ ಆರೋಪಿಗಳೂ ಸಹ ಗೊಂದಲದ ಹೇಳಿಕೆ ನೀಡಿದ್ದಾರೆ.

RELATED TOPICS:
English summary :Kidnapping, murder case of youth: After 9 months, police search for body in Charmadi Ghat

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...