Sat,May04,2024
ಕನ್ನಡ / English

ಧಾರವಾಡದಲ್ಲಿ ವಿಧಿ ವಿಜ್ಞಾನ​ ವಿವಿಗೆ ಶಂಕುಸ್ಥಾಪನೆ, ಭಾರತವನ್ನು ವಿಶ್ವದ ನಂ. 1 ದೇಶವನ್ನಾಗಿ ಮಾಡಿ: ಅಮಿತ್ ಶಾ ಕರೆ | JANATA NEWS

28 Jan 2023
1017

ಧಾರವಾಡ : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ನೂತನ ಕ್ಯಾಂಪಸ್ ನಿರ್ಮಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿನ ಕೃಷಿ ವಿಶ್ವವಿದ್ಯಾಲಯ ಮಾಲಿಕತ್ವದ ಪ್ರದೇಶದಲ್ಲಿ ಭೂಮಿ ಪೂಜೆ ನೆರವೇರಿಸಿದರು.

ಧಾರವಾಡದಲ್ಲಿ ಭರ್ಜರಿ ರೋಡ್​ ಶೋ ನಡೆಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶದಲ್ಲಿ ಭಯೋತ್ಪಾದನೆ ಮಟ್ಟಹಾಕಿದೆ. ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ. ರಾಜ್ಯದಲ್ಲಿ ಬಹುಮತದಿಂದ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಗುರಿ ಹೊಂದಬೇಕಿದೆ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿಗೆ ಬೆಂಬಲ ನೀಡುವಂತೆ ಮನವಿ ರಾಜ್ಯದ ಜನರಿಗೆ ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದರು.

ದೆಹಲಿ ಬಿಟ್ಟರೆ ಫಾರೆನ್ಸಿಕ್​ ವಿಭಾಗದಲ್ಲಿ ಕರ್ನಾಟಕ ಇದೆ. ಶಿಕ್ಷಣದಲ್ಲಿ ಮುಂದಿರುವ ಧಾರವಾಡಕ್ಕೆ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಕ್ಯಾಂಪಸ್​ ಸೇರಿಕೊಂಡಿದೆ. ಇಂತಹ ವಿಶ್ವವಿದ್ಯಾಲಯಗಳಿಂದ ಭವಿಷ್ಯದಲ್ಲಿ ಅತಿ ಹೆಚ್ಚು ಫಾರೆನ್ಸಿಕ್ ತಜ್ಞರನ್ನು ಹೊಂದಿರುವ ದೇಶವಾಗಲಿದೆ ಎಂದು ಭವಿಷ್ಯ ಹೇಳಿದ್ದಾರೆ.

ಭಾರತದಲ್ಲಿ ಮಾತ್ರ ವಿಧಿ ವಿಜ್ಞಾನ ವಿವಿಯಿದೆ. ಇಲ್ಲಿ ಓದಿದ ಎಲ್ಲರಿಗೂ ನೌಕರಿ ಸಿಕ್ಕುತ್ತದೆ. ಅಲ್ಲದೆ, ನಕಲಿ ನೊಟು, ಸೈಬರ್ ಅಪರಾಧ ಅಧಿಕವಾಗುತ್ತಿವೆ. ಹೀಗಾಗಿ ಅಪರಾಧಿಗಳಿಗಿಂತ ಪೊಲೀಸರು ಒಂದು ಹೆಜ್ಜೆ ಮುಂದಿಡಬೇಕು. ಅದಕ್ಕೆ ಇದು ಅಗತ್ಯ ಸಹಾಯ ಮಾಡಲಿದೆ. ಅಪರಾದ ಪತ್ತೆ ಮತ್ತು ಅಪರಾಧಿಗಳ ಸಾಕ್ಷ್ಯ ಪುರಾವೆ ಒದಗಿಸಲು ಈ ವಿವಿ ಸಹಾಯ ಮಾಡಲಿದೆ. ಸಾಕ್ಷ್ಯಗಳ ಸಲುವಾಗಿ ಕಾನೂನು ಬದಲಾಗಿದೆ ಎಂದರು.

ಚಂಡೀಗಢ, ಪುಣೆ, ಗುವಾಹಟಿ, ಕೋಲ್ಕತ್ತಾದಲ್ಲಿ ಪೋರೆನ್ಸಿಕ್ ಕ್ಯಾಂಪಸ್ ತೆರೆಯಲಾಗಿದೆ. ಧಾರವಾಡದಲ್ಲಿ ಆಗಿರುವ ಈ ಕ್ಯಾಂಪಸ್ ನಿಂದ ನೌಕರಿ ಸಿಗುತ್ತದೆ‌. ಈ ಭಾಗದಲ್ಲಿ ಅಪರಾಧ ತಡೆಗೆ ಸಹಾಯ ಮಾಡುತ್ತದೆ ಎಂದರು.

ಧಾರವಾಡದಲ್ಲಿಯೇ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಕ್ಯಾಂಪಸ್ ಮಾಡಿಕೊಡಬೇಕು ಎಂದು ಪ್ರಹ್ಲಾದ್​ ಜೋಶಿ ಬೆನ್ನು ಬಿದ್ದಿದ್ದರು. ನಾನು ಕಾಡಿಸಬೇಕು ಅಂತಾನೆ ಜಾಗವೇ ಇಲ್ಲ, ಇಲ್ಲಿ ಹೇಗೆ ಮಂಜೂರು ಮಾಡಲಿ ಎಂದು ಹೇಳಿದ್ದೆ. ಆದರೆ ಒಂದೇ ದಿನದಲ್ಲಿ ಐವತ್ತು ಎಕರೆ ಜಾಗವನ್ನೆ ಹುಡುಕಿ ಕೊಟ್ಟರು. ಆಗ ನನಗೆ ಬೇರೆ ದಾರಿಯೇ ಇಲ್ಲದೇ ಕ್ಯಾಂಪಸ್ ಮಂಜೂರು ಮಾಡಿದೆ ಎಂದು ಅಮಿತ್​ ಶಾ ಹೇಳಿದ್ದಾರೆ.

RELATED TOPICS:
English summary :Forensic Science University laid foundation stone in Dharwad, making India world no. Make it 1 country: Amit Shah calls

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...