Sat,May18,2024
ಕನ್ನಡ / English

ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ | JANATA NEWS

29 Jan 2023
2374

ಮೈಸೂರು : ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಿದ್ದು, ಈ ಸ್ಮಾರಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಲೋಕಾರ್ಪಣೆಗೊಳಿಸಿದರು.

ಮೈಸೂರಿನ ಉದ್ದೂರು ಗೇಟ್ ಬಳಿಯ ಹಾಲಾಳು ಗ್ರಾಮದಲ್ಲಿ 5 ಹೆಕ್ಟೇರ್‌ ಜಾಗದಲ್ಲಿ 11 ಕೋಟಿ ರೂಪಾಯಿ ವೆಚ್ಚದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಇಂದು ಸ್ಮಾರಕವನ್ನು ಉದ್ಘಾಟನೆ ಮಾಡಲಾಗಿದ್ದು, ಸಮಾರಂಭದಲ್ಲಿ ನಟಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್, ಸಂಸದ ಪ್ರತಾಪ್‌ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ ಹಾಗೂ ಎಲ್.ನಾಗೇಂದ್ರ ಭಾಗವಹಿಸಿದ್ದರು.

ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ವಿಷ್ಣುವರ್ಧನ್ ಅವ್ರ ಕಲೆ, ಸಾಹಸ, ಚಿತ್ರರಂಗದಲ್ಲಿ ಮಾಡಿರೋ ಸಾಧನೆ ನಮ್ಮ ಕಣ್ಣ ಮುಂದೆ ಇದೆ. ನಾನು ಒಬ್ಬ ವಿಷ್ಣುವರ್ಧನ್ ಅಭಿಮಾನಿಯಾಗಿ ಇಲ್ಲಿ ಬಂದಿದ್ದೇನೆ. 70 ರ ದಶಕದಲ್ಲಿ ನಾಗರಹಾವಿನ ಮೂಲಕ ನಾಯಕ ನಟನಾಗಿ ಚಿತ್ರರಂಗೆ ಬಂದ್ರು. ಅವರನ್ನು ಮೊದಲ ಸಲಾ ನೋಡಿದವ್ರು ಖಂಡಿತವಾಗಿ ಫ್ಯಾನ್ ಆಗ್ತಾ ಇದ್ರು. ನಾಗರಹಾವು ಚಿತ್ರದ ಮೂಲಕ ನಾಡಿನ ಜನಮನ ಗೆದ್ದವ್ರು ಡಾ. ವಿಷ್ಣುವರ್ಧನ್ ಎಲ್ಲಾ ರೀತಿಯ ಪಾತ್ರಗಳನ್ನ ಮಾಡಿ ಸಾಹಸ ಸಿಂಹನಾಗಿ ಕರ್ನಾಟಕದಲ್ಲಿ ಮೆರೆದವರು ಎಂದು ವಿಷ್ಣು ಅವರ ಸಾಧನೆಯನ್ನು ನೆನೆದರು.

janata

11 ಕೋಟಿ ರೂಪಾಯಿ ವೆಚ್ಚದಲ್ಲಿ ವಿಷ್ಣು ಅವರ ಸ್ಮಾರಕ ನಿರ್ಮಾಣವಾಗಿದೆ‌. ವಿಷ್ಣುವರ್ಧನ್ ಅವರ ಕುಟುಂಬ ಬಯಸಿದಂತೆ ಎಲ್ಲವೂ ಆಗಿದೆ. ಎಲ್ಲರೂ ಸೇರಿ ಸಂತೋಷದಿಂದ ಸ್ಮಾರಕ ಲೋಕಾರ್ಪಣೆ ಮಾಡಿದ್ದೇವೆ ಎಂದು ತಿಳಿಸಿದರು.

ವಿಷ್ಣುವರ್ಧನ್ ಭಾವುಕ ಜೀವಿ, ಮಾನವೀಯತೆಯಿಂದ ಮೆರೆದವರು. ಅವ್ರ ಪಾತ್ರದಲ್ಲಿಯೂ ಮಾನವೀಯತೆ ಎದ್ದು ಣುತ್ತಿತ್ತು. ಸ್ಮಾರಕ ವಿಚಾರದಲ್ಲಿ ಸ್ಥಳದ ಕುರಿತು ಹಲವು ವಿವಾದಗಳು ಎದ್ದವು. ಅವ್ರು ಮೈಸೂರಿನವ್ರು, ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣ ಆಗಬೇಕು ಎಂದು ಗಟ್ಟಿಯಾಗಿ ನಿಂತರು. ಯಡಿಯೂರಪ್ಪ ಅವರು 11 ಕೋಟಿ ರೂ. ನೀಡಿದ್ದರು. ಇದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ವಿಷ್ಣುವರ್ಧನ್‌ ಅವರಿಗೆ ʼಕರ್ನಾಟಕ ರತ್ನʼ ನೀಡುವಂತೆ ಅಭಿಮಾನಿಗಳ ಒತ್ತಾಯದ ಹಿನ್ನಲೆ. ಅಭಿಮಾನಿಗಳ ಭಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ರತ್ನ ನೀಡೋ ಬಗ್ಗೆ ತೀರ್ಮಾನ ಮಾಡ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು .

RELATED TOPICS:
English summary :Dr. Vishnuvardhan memorial was dedicated by CM Basavaraj Bommai

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...