Fri,May10,2024
ಕನ್ನಡ / English

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡ್ರೈವರ್‌ ಆತ್ಮಹತ್ಯೆಗೆ ಯತ್ನ | JANATA NEWS

31 Jan 2023
1310

ಬೆಂಗಳೂರು : ಕೆಂಗೇರಿ ಘಟಕದ ಅಧಿಕಾರಿಗಳ ಕಿರುಕುಳ ಸಹಿಲಾಗುತ್ತಿಲ್ಲ ಎಂದು ಬಸ್‌ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದುರ್ಘಟನೆ ನಡೆದಿದೆ.

ಚಾಲಕ ಶ್ರೀನಿವಾಸ್ ಬಿಎಂಟಿಸಿ ಘಟಕ 37 ಕೆಂಗೇರಿ ಡಿಪೋದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟಕ ಎಟಿಎಸ್ ಕೋಮಲ, ಡಿಎಂ ದಯಾನಂದ ಹಾಗೂ ಎಟಿಐ ಮಹಾಲಿಂಗಪ್ಪ ಅವರು ತೀವ್ರವಾಗಿ ಕಿರುಕುಳ ನೀಡುತ್ತಿದ್ದಾರೆ.

ಇವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ವಿಷ ಸೇವನೆ ಮಾಡಿದ್ದಾರೆ. ಶ್ರೀನಿವಾಸ್ ನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗ ಸದ್ಯ ಚಾಲಕನಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ.

ಎರಡು ಪುಟದ ಡೆತ್‌ನೋಟ್‌ನಲ್ಲೇನಿದೆ..?
ಕಳೆದ ನಾಲ್ಕು ವರ್ಷಗಳಿಂದ ನಾನು ಕೆಲಸಕ್ಕೆ ಯಾವತ್ತೂ ಗೈರು ಹಾಜರಾಗದೇ ಬಿಎಂಟಿಸಿ ಘಟಕ -೩೭ ಕೆಂಗೇರಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನನ್ನ ಕೆಲಸದಲ್ಲಿ ಪ್ರಾಮಾಣಿಕತೆ ಮತ್ತು ನಿಷಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ. ಆದರೆ, ಸರಿಯಾದ ಸಮಯಕ್ಕೆ ಪ್ರತಿದಿನ ಕೆಲಸಕ್ಕೆ ಬಂದರೂ ಎಟಿಎಸ್‌ ಕೋಮಲ ಅವರು ನನಗೆ ಕರ್ತವ್ಯಕ್ಕೆ ಹೋಗಲು ಡ್ಯೂಟಿಯನ್ನು ಹಾಕಿಕೊಡದೇ ಮನೆಗೆ ಹೋಗುವಂತೆ ಮಾಡುತ್ತಿದ್ದಾರೆ.

ನನಗೆ ಬೇಕಾಬಿಟ್ಟಿಯಾಗಿ ಕರ್ತವ್ಯಕ್ಕೆ ಹಾಕುತ್ತಿದ್ದರು. ಇದರಿಂದ ನಾನು ಜಿಗುಪ್ಸೆಗೊಂಡಿದ್ದೇನೆ. ಒಂದೊಂದು ಬಾರಿ ನಮ್ಮ ಘಟಕದಲ್ಲಿ ಡ್ಯೂಟಿ ಸಿಗದಿದ್ದ ಪಕ್ಷದಲ್ಲಿ ಬೇರೊಂದು ಘಟಕದಲ್ಲಿ ಡ್ಯೂಟಿ ಮಾಡಿಕೊಮಡು ಹೋಗುತ್ತಿದ್ದೆನು. ಆದರೂ ಕೂಡ ಬೇರೆ ಘಟಕದ ಹಾಜರಾತಿಯನ್ನು ನಿನಗೆ ನಾನು ನೀಡುವುದಿಲ್ಲ ಎಂದು ಬೆದರಿಕೆ ಹಾಕಿ ತಿಂಗಳ ಕೊನೆಯಲ್ಲಿ ಸತಾಯಿಸಿ ಅವರ ಮನಸ್ಸಿಗೆ ತೋಚಿದಂತೆ ಹಾಜರಾತಿ ಕೊಡುತ್ತಿದ್ದರು.

ಈ ಬಗ್ಗೆ ನಾನು ಪ್ರಶ್ನೆ ಮಾಡಿದಾಗ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ನೀನು ಇನ್ನುಮುಂದೆ ಕರ್ತವ್ಯಕ್ಕೆ ಬರಬೇಡ ಎಂದು ಹೇಳಿದ್ದರು. ಪುನಃ ನಿನ್ನೆ ಬೆಳಗ್ಗೆ 10.20ಕ್ಕೆ ನಾನು ಕೆಲಸಕ್ಕೆ ಬಂದರೂ ನಿನಗೆ ಯಾವುದೇ ಕರ್ತವ್ಯ ಇಲ್ಲವೆಂದು ನಿರ್ಲಕ್ಷ್ಯದಿಂದ ಮಾತನಾಡಿ ನಮ್ಮ ಸಹ ಕಾರ್ಮಿಕರ ಎದುರು ಅವಮಾನ ಮಾಡಿದ್ದಾರೆ.

ಇನ್ನು ನಾನು ಘಟಕದ ವ್ಯವಸ್ಥಾಪಕರಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಆದ್ದರಿಂದ ನಾನು ಕರ್ತವ್ಯ ಮಾಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ನೊಂದುಕೊಂಡು ಶಾಂತಿನಗರದ ಬಿಎಂಟಿಸಿ ವ್ಯವಸ್ಥಾಪಕರಿಗೆ ಸಲ್ಲಿಕೆ ಆಗುವಂತೆ ಡೆತ್‌ ನೋಟ್‌ ಬರೆದಿದ್ದಾರೆ.

RELATED TOPICS:
English summary :Tired of being harassed by the authorities, the driver attempted suicide

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...