Fri,May03,2024
ಕನ್ನಡ / English

3.5 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ, ಹತ್ಯೆ! | JANATA NEWS

01 Feb 2023
1979

ಬೆಂಗಳೂರು : ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮೂರೂವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಕಾಮುಕನನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಮೂಲದ ಮಹಿಳೆ ಕಾಮಾಕ್ಷಿಪಾಳ್ಯದ ಕಾವೇರಿ ನಗರದಲ್ಲಿ ತನ್ನ ಮಗುವಿನೊಂದಿಗೆ ವಾಸವಾಗಿದ್ದಳು. ಗಾರ್ಮೆಂಟ್ಸ್ ವೊಂದರಲ್ಲಿ ಕೆಲಸ‌ ಮಾಡುತ್ತಿದ್ದರು. ಆರೋಪಿ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದ ಮಗುವಿನ ತಾಯಿ, ಕಳೆದ ಒಂದು ವರ್ಷದಿಂದ ಆತನ ಜೊತೆ ವಾಸವಿದ್ದಳು.

ಆರೋಪಿಯು ಕುಡಿತದ ದಾಸನಾಗಿದ್ದ. ಮೊನ್ನೆ ರಾತ್ರಿ ನಶೆಯಲ್ಲಿ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಎಂದಿನಂತೆ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ತಾಯಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡು ಗಾಬರಿಯಾಗಿದ್ದಾರೆ. ತಕ್ಷಣ ಸಮೀಪದ ಆಸ್ಪತ್ರೆಗೆ ಹೋಗಿದ್ದಾರೆ. ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮಗುವಿನ ಮುಖದ‌ ಮೇಲೆ ಗಾಯಗಳಿರುವುದನ್ನು ಕಂಡು ಮಹಿಳೆ ಗಲಾಟೆ ಶುರು ಮಾಡಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

RELATED TOPICS:
English summary :3.5 year old child sexually assaulted, killed!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...