Thu,May02,2024
ಕನ್ನಡ / English

ಡಂಬೆಲ್ಸ್​ನಿಂದ ಹೊಡೆದು ಹೆಂಡತಿಯನ್ನು ಕೊಂದ ಗಂಡ! | JANATA NEWS

02 Feb 2023
2599

ಬೆಂಗಳೂರು : ತನ್ನ ಪತ್ನಿಯನ್ನು ಡಂಬಲ್ಸ್‌ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೊರೀಸ್ ಎಂಬಾತ, ತನ್ನ ಪತ್ನಿಯಾದ ಲೈದಿಯಾಳನ್ನು(44) ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಪತಿಯೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಆರೋಪಿಯು ರಾಮಮೂರ್ತಿನಗರ ಪೊಲೀಸರೆದುರು ಶರಣಾಗಿದ್ದಾನೆ.

18 ವರ್ಷಗಳ ಹಿಂದೆ ಲೈದಿಯಾಳನ್ನ ಮದುವೆ ಮಾಡಿಕೊಂಡಿದ್ದ. ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ. ಮೊರೀಸ್ ಮೊಬೈಲ್‌ ನೆಟ್​​ವರ್ಕ್ ಕಂಪೆನಿಯೊಂದರಲ್ಲಿ ಕೆಲಸ‌ ಮಾಡುತ್ತಿದ್ದ.‌

ಪರಪುರುಷನೊಂದಿಗೆ ಸಂಬಂಧವಿದೆ ಎಂದು‌ ಶಂಕಿಸಿ ಹೆಂಡತಿಯೊಂದಿಗೆ ಆಗಾಗ ಗಲಾಟೆ ಮಾಡುತ್ತಿದ್ದ. ಅದೇ ರೀತಿ ಇಂದು ಬೆಳಗ್ಗೆ ಮಕ್ಕಳು‌ ಶಾಲೆಗೆ ಹೋದ‌‌‌ ಮೇಲೆ ಪತ್ನಿ ಜೊತೆ ಕ್ಯಾತೆ ತೆಗೆದಿದ್ದಾನೆ. ನೋಡ ನೋಡುತ್ತಿದ್ದಂತೆ ಗಲಾಟೆ ತಾರಕ್ಕಕ್ಕೇರಿದೆ. ಮನೆಯಲ್ಲಿದ್ದ ಸುಮಾರು ಎರಡೂವರೆ‌ ಕೆ.ಜಿ ತೂಕದ ಡಂಬಲ್ಸ್​ನಿಂದ ಐದಾರು ಬಾರಿ ಪತ್ನಿಯ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಕೃತ್ಯವೆಸಗಿದ ಬಳಿಕ ಪೊಲೀಸ್ ಕಂಟ್ರೋಲ್‌ ರೂಮ್​ಗೆ ಕರೆ ಮಾಡಿ ಮನೆಯಲ್ಲಿ ಕೌಟುಂಬಿಕ ಕಾರಣಕ್ಕಾಗಿ ಜಗಳ ನಡೆದಿದೆ ಎಂದು ಹೇಳಿದ್ದಾನೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಲೈದಿಯಾಳ ಶವ ಕ್ರೂರವಾಗಿ ಹತ್ಯೆಯಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ‌‌.‌ ಈ ಸಂಬಂಧ ಮೋರಿಸ್​ನನ್ನು ಬಂಧಿಸಲಾಗಿದೆ.

RELATED TOPICS:
English summary :The husband killed his wife by beating her with dumbbells!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...