Mon,May20,2024
ಕನ್ನಡ / English

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ 7 ದೂರು ದಾಖಲೆ! | JANATA NEWS

02 Feb 2023
2503

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ, ಕೆ. ಜೆ. ಜಾರ್ಜ್, ಕೃಷ್ಣ ಭೈರೇಗೌಡ, ರಾಬರ್ಟ್ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್. ಆರ್. ರಮೇಶ್ 10 ದೂರುಗಳನ್ನು ದಾಖಲಿಸಿದ್ದಾರೆ.

ಖುದ್ದು ಸಿದ್ದರಾಮಯ್ಯ ವಿರುದ್ಧವೇ 07 ದೂರುಗಳು ದಾಖಲು ಮಾಡಲಾಗಿದೆ. ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ.

ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ 10 ವಿವಿಧ ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ, ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಲಾಗಿದೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.

2013-2018 ರ ವರೆಗಿನ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿರುವ 10 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಒಟ್ಟು 3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತವಾಗಿ ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಿದ್ದಾರೆ.

ಲೋಕಾಯುಕ್ತಕ್ಕೆ 3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತ 10 ದೂರುಗಳನ್ನು ಸಲ್ಲಿಸಲಾಗಿದೆ. 62 ಗಂಟೆಗಳ ಅವಧಿಯ ವಿಡಿಯೋ ತುಣುಕುಗಳು ಮತ್ತು 900 ಕ್ಕೂ ಹೆಚ್ಚು ಛಾಯಾಚಿತ್ರಗಳನ್ನೊಳಗೊಂಡ ಎರಡು ಡಿವಿಡಿಯನ್ನು ಸಲ್ಲಿಸಲಾಗಿದೆ.

ಭ್ರಷ್ಟಾಚಾರ, ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಮತ್ತು ಸರ್ಕಾರಿ ಭೂ ಕಬಳಿಕೆ ಪ್ರಕರಣಗಳು ದಾಖಲಾಗಿದೆ.

ಸಿದ್ದರಾಮಯ್ಯ ವಿರುದ್ಧ 07 ದೂರುಗಳು, ಮಾಜಿ ಸಚಿವ ಕೆ. ಜೆ. ಜಾರ್ಜ್ ವಿರುದ್ಧ 04 ದೂರುಗಳು, ಮಾಜಿ ಸಚಿವ ಯು. ಟಿ. ಖಾದರ್, ಜಮೀರ್ ಅಹಮದ್ ಹಾಗೂ ಕೃಷ್ಣ ಭೈರೇಗೌಡ ವಿರುದ್ಧ ತಲಾ 02 ದೂರುಗಳು, ಮಾಜಿ ಸಚಿವ ಎಂ. ಬಿ. ಪಾಟೀಲ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ, ಶಾಸಕರಾದ ಎನ್. ಎ. ಹ್ಯಾರೀಸ್ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ರವರುಗಳ ವಿರುದ್ಧ ತಲಾ 01 ದೂರುಗಳು ದಾಖಲಾಗಿವೆ.

RELATED TOPICS:
English summary :7 complaints record against Siddaramaiah in Lokayukta!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...