Sun,Apr28,2024
ಕನ್ನಡ / English

ಇಂಧನ ಸಪ್ತಾಹಕ್ಕೆ ಪ್ರಧಾನಿ ಮೋದಿ ಚಾಲನೆ, ಇಂಧನ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ: ನರೇಂದ್ರ ಮೋದಿ | JANATA NEWS

06 Feb 2023
1311

ಬೆಂಗಳೂರು : ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವತಿಯಿಂದ ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ 'ಇಂಡಿಯನ್ ಎನರ್ಜಿ ವೀಕ್-2023'ಅನ್ನು ಉದ್ಘಾಟಿಸಿದ್ದಾರೆ.

ಬೆಂಗಳೂರಿನ ಎಚ್​ಎಎಲ್​​ನಿಂದ ಮಾದಾವರದಲ್ಲಿರುವ ಬಿಐಇಸಿ (ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ)ಕ್ಕೆ ಸೇನಾ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಆಗಮಿಸಿದರು. ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಸ್ವಾಗತ ಕೋರಿದರು.

ಇಂಧನ ಸಪ್ತಾಹ ಉದ್ಘಾಟಿಸಿದ ಪ್ರಧಾನಿ ಮೋದಿ, ಜಾಗತಿಕ ತೈಲ ಮತ್ತು ಗ್ಯಾಸ್ ಕಂಪನಿಗಳ ಸಿಇಓಗಳ ರೌಂಟ್ ಟೇಬಲ್ ಚರ್ಚೆಯಲ್ಲಿ ಭಾಗಿಯಾಗಲಿದ್ದಾರೆ. ಇದಾದ ಬಳಿಕ ದೇಶದ 11 ರಾಜ್ಯಗಳ 84 ಎಥನಾಲ್ ಮಿಶ್ರಿತ ಪೆಟ್ರೋಲ್ ಬಂಕ್‌ಗಳ ಉದ್ಘಾಟನೆ ಮಾಡಲಿದ್ದಾರೆ.

ಪೆಟ್ರೋಲ್, ಡೀಸೆಲ್​ನಲ್ಲಿ ಶೇ.20ರಷ್ಟು ಎಥನಾಲ್ ಮಿಶ್ರಣದ ಬಂಕ್​ಗಳು ಇದಾಗಲಿದೆ. ಹಸಿರು ಇಂಧನದಲ್ಲಿ ಚಲಿಸುವ ವಾಹನಗಳ ಉದ್ಘಾಟನೆ ಮಾಡಲಿದ್ದಾರೆ. ಹಸಿರು ಇಂಧನ ಜಾಗೃತಿ ಕಾರ್ಯಕ್ರಮದಲ್ಲಿ ಎಲ್​ಪಿಜಿ ಡೆಲಿವರಿ, ಪೆಟ್ರೋಲ್ ಸಿಬ್ಬಂದಿಗೆ ಏಕಬಳಕೆಯ ಪ್ಲಾಸ್ಟಿಕ್​ನಿಂದ ತಯಾರಿಸಿದ ಸಮವಸ್ತ್ರದ ಅನಾವರಣವನ್ನು ಮಾಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಟರ್ಕಿ ಮತ್ತು ಸುತ್ತಮುತ್ತಲ ದೇಶಗಳಲ್ಲಿ ಸಾವು ಮತ್ತು ವಿನಾಶಕ್ಕೆ ಸಂತಾಪ ಸೂಚಿಸುವ ಮೂಲಕ ಭಾಷಣ ಆರಂಭಿಸಿದ ಪ್ರಧಾನಿ ಮೋದಿ "ವಿಪತ್ತಿನ ಸಂದರ್ಭದಲ್ಲಿ ಸಾಧ್ಯವಿರುವ ಯಾವುದೇ ನೆರವು ನೀಡಲು ಭಾರತ ಸಿದ್ಧವಿದೆ" ಎಂದು ತಿಳಿಸಿದರು. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಅತ್ಯಂತ ಮುಂದುವರೆದ ರಾಷ್ಟ್ರಗಳ ಪೈಕಿ ಒಂದಾಗಿದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಇಂಧನದ ಬೇಡಿಕೆ ಹೆಚ್ಚಾಗುತ್ತಿದೆ.

ಭಾರತ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಅಭಿವೃದ್ದಿಯನ್ನು ಗಮನಿಸುತ್ತಿದ್ದರೆ ಮುಂಬರುವ ದಿನಗಳಲ್ಲಿ ಭಾರತದಲ್ಲಿ ಹಲವು ಹೊಸ ನಗರಗಳು ರೂಪುಗೊಳ್ಳಲಿವೆ ಎನ್ನುವುದನ್ನು ತೋರಿಸುತ್ತದೆ. ಭಾರತದಲ್ಲಿ ಇಂಧನದ ಬೇಡಿಕೆಯು ವಿಶ್ವದಲ್ಲಿಯೇ ಅತ್ಯಂತ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಹೊಸ ಅವಕಾಶಗಳು ಲಭ್ಯವಾಗಲಿವೆ ಎಂದು ಹೇಳಿದ್ದಾರೆ.

ದೇಶದಲ್ಲಿ 6,00,000 ಕಿಲೋಮೀಟರ್‌ಗಳಷ್ಟು ಆಪ್ಟಿಕಲ್ ಫೈಬರ್‌ಗಳನ್ನು ಹಾಕಲಾಗಿದ್ದು, ಇದರಿಂದ ಪ್ರತಿ ಗ್ರಾಮಕ್ಕೂ ಇಂಟರ್ನೆಟ್ ಸೌಲಭ್ಯ ದೊರೆಯುತ್ತದೆ. ದೇಶದಲ್ಲಿ ಬ್ರಾಡ್‌ಬ್ಯಾಂಡ್ ಬಳಕೆದಾರರ ಸಂಖ್ಯೆ ಹದಿಮೂರು ಪಟ್ಟು ಹೆಚ್ಚಾಗಿದೆ ಮತ್ತು ಇಂಟರ್ನೆಟ್ ಸಂಪರ್ಕಗಳು ಮೂರು ಪಟ್ಟು ಹೆಚ್ಚಾಗಿದೆ. ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ವೇಗವಾಗಿ ಬೆಳೆಯುತ್ತಿದೆ.

ಭಾರತವು ವಿಶ್ವದ 2ನೇ ಅತಿ ದೊಡ್ಡ ಮೊಬೈಲ್ ಫೋನ್ ತಯಾರಕ ರಾಷ್ಟ್ರವಾಗಿ ಮಾರ್ಪಟ್ಟಿದೆ.ಇದು ವಿಶ್ವದ ಅತಿದೊಡ್ಡ ಮಹತ್ವಾಕಾಂಕ್ಷೆಯ ವರ್ಗದ ರಚನೆಗೆ ಕಾರಣವಾಗಿದೆ. ಭಾರತದ ಜನರು ಉತ್ತಮ ಉತ್ಪನ್ನಗಳು, ಉತ್ತಮ ಸೇವೆಗಳು ಮತ್ತು ಉತ್ತಮ ಮೂಲಸೌಕರ್ಯಗಳನ್ನು ಬಯಸುತ್ತಾರೆ. ಭಾರತೀಯ ನಾಗರಿಕರ ಆಕಾಂಕ್ಷೆಗಳನ್ನು ಸಾಕಾರಗೊಳಿಸುವಲ್ಲಿ ಭಾರತ ಸದಾ ನಿರತವಾಗಿರಲಿದೆ" ಎಂದರು.

RELATED TOPICS:
English summary :Prime Minister Modi Drives Energy Week, Unprecedented Achievement in Energy Sector: Narendra Modi

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...