Wed,May08,2024
ಕನ್ನಡ / English

ಪ್ರಹ್ಲಾದ್ ಜೋಶಿ ಕಚೇರಿಯಲ್ಲಿ ಲಂಚ ಸ್ವೀಕಾರ, ಭೋಜೇಗೌಡ ಆರೋಪ: ಮಾನನಷ್ಟ ಮೊಕದ್ದಮೆ ಹೂಡುವೆ | JANATA NEWS

08 Feb 2023
2261

ಬೆಂಗಳೂರು : ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಎಂಎಲ್ ಸಿ ಎಸ್‌ಎಲ್,ಭೋಜೇಗೌಡ ಆರೋಪಿಸಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎನ್ಎಂಸಿ ಸದಸ್ಯರನ್ನಾಗಿ ನೇಮಿಸಲು ಶಿವಮೊಗ್ಗದ ವೈದ್ಯರೊಬ್ಬರಿಂದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಚೇರಿಯಲ್ಲಿ ಲಂಚ ಪಡೆಯಲಾಗಿದೆ. ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಹರೀಶ್ ಅಯ್ಯಣ್ಣ ಎಂಬುವವರನ್ನು ಎನ್ಎಂಸಿ ಸದಸ್ಯರನ್ನಾಗಿ ನೇಮಿಸುವುದಕ್ಕಾಗಿ ಪ್ರಲ್ಹಾದ ಜೋಶಿಯವರ ಕಚೇರಿಯ ಸಿಬ್ಬಂದಿಗೆ 2.5 ಕೋಟಿ ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಎರಡು ಬಾರಿ ನಿರ್ದಿಷ್ಟ ಬ್ಯಾಂಕ್ ಖಾತೆಗೆ 2.5 ಕೋಟಿ ರೂ. ವರ್ಗಾವಣೆಯಾಗಿದ್ದು, 2021ರ ಜುಲೈನಲ್ಲಿ 2 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಉಳಿದ 50 ಲಕ್ಷ ರೂ. ನಗದು ರೂಪದಲ್ಲಿ ನೀಡಲಾಗಿದೆ. ಹಣ ವರ್ಗಾವಣೆ, ಶಿಫಾರಸು ಪತ್ರ, ಹಣ ಯಾರಿಗೆ ಸಿಕ್ಕಿದೆ ಎಂಬುದಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಯಬೇಕಿದೆ ಎಂದು ಒತ್ತಾಯಿಸಿದರು.

ಇದೇ ವೇಳೆ ಹರೀಶ್ ಅಯ್ಯಣ್ಣ ಅವರನ್ನು ಎನ್‌ಎಂಸಿ ಸದಸ್ಯರನ್ನಾಗಿ ನೇಮಕ ಮಾಡಬೇಕೆಂಬ ಕೋರಿಕೆಯನ್ನು ಪರಿಗಣಿಸುವುದಾಗಿ ಆಗ ಕೇಂದ್ರ ಆರೋಗ್ಯ ಸಚಿವರಾಗಿದ್ದ ಡಾ. ಹರ್ಷವರ್ಧನ್ ಅವರು ಪ್ರಲ್ಹಾದ ಜೋಶಿಯವರಿಗೆ ಪತ್ರವನ್ನೂ ಬರೆದಿದ್ದರು ಎಂದು ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಕೇಂದ್ರ ಸಚಿವರ ಪತ್ರಗಳನ್ನು ತೋರಿಸಿದರು. ಅಕ್ರಮಗಳಿಗೆ ಸಂಬಂಧಿಸಿದ ಹಲವಾರು ದಾಖಲೆಗಳು ಇನ್ನೂ ನನ್ನ ಬಳಿ ಇವೆ, ಅದನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆಂದು ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಮ್ಮ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರ ಕುಟುಂಬದ ಕುರಿತು ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಆದರೆ, ಅವರ ಕಚೇರಿಯಲ್ಲೇ ಲಂಚದ ಕಳ್ಳ ವ್ಯವಹಾರ ನಡೆದಿರುವ ಕುರಿತು ಏನು ಹೇಳುತ್ತಾರೆ? ಅವರ ಕಚೇರಿಯಲ್ಲಿ ಏನು ನಡೆಯುತ್ತಿದೆ ಎನ್ನುವುದು ರಾಜ್ಯಕ್ಕೆ ಗೊತ್ತಾಗಬೇಕು. ಪರಿಶುದ್ಧರು ಎಂದು ಹೇಳುವ ಅವರ ಭ್ರಷ್ಟಾಚಾರ ಇಲ್ಲಿದೆ. ಹಣಕ್ಕಾಗಿ ಕೇಂದ್ರ ಸಚಿವರ ಕಚೇರಿಯನ್ನು ಬಿಕರಿಗೆ ಇಡಲಾಗಿದೆ ಎಂದು ಆರೋಪ ಮಾಡಿದರು.

ಈ ಆರೋಪಕ್ಕೆ ಟ್ವಿಟ್ಟರ್​​ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು,"ಸಾರ್ವಜನಿಕರನ್ನು ದಾರಿ ತಪ್ಪಿಸಲಾಗುತ್ತಿದೆ. ಮೊದಲನೆಯದಾಗಿ, ಈ ಪತ್ರವನ್ನು ವೈದ್ಯರಿಗೆ ಬರೆಯಲಾಗಿದೆ ಮತ್ತು ನಾನು ಖಂಡಿತವಾಗಿಯೂ ವೈದ್ಯನಲ್ಲ. ನನ್ನ ಕಚೇರಿಯಲ್ಲಿ ಅಂತಹ ಉದ್ಯೋಗಿ ಇಲ್ಲ. ನಿಮಗೆ ತುಂಬಾ ವಿಶ್ವಾಸವಿದ್ದರೆ, ಈ ಪತ್ರದ ಹೆಸರು ಮತ್ತು ವಿಷಯವನ್ನು ಏಕೆ ಮಸುಕುಗೊಳಿಸಿದ್ದೀರಿ?" ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :Bhoje Gowda accused of taking bribe in Prahlad Joshi office: defamation suit filed

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...