Fri,May03,2024
ಕನ್ನಡ / English

ಸುಪಾರಿ ಕೊಟ್ಟು ಹೆತ್ತ ತಂದೆಯನ್ನೇ ಕೊಲೆ ಮಾಡಿಸಿದ ಪಾಪಿಪುತ್ರ? | JANATA NEWS

15 Feb 2023
3394

ಬೆಂಗಳೂರು : ಆಸ್ತಿ ವಿಚಾರಕ್ಕೆ ಮಗನೇ ಸುಪಾರಿ ನೀಡಿ ತಂದೆಯನ್ನು ಕೊಲೆ ಮಾಡಿಸಿರುವ ಭೀಕರ ಘಟನೆ ಮಾರತ್ತಹಳ್ಳಿ ಸಮೀಪದ ಪಣತ್ತೂರಿನ ಕಾವೇರಪ್ಪ ಲೇಔಟ್‌ನಲ್ಲಿ ನಡೆದಿದೆ..

ಮೊದಲ ಪತ್ನಿಯನ್ನು ಕೊಂದು ಜೈಲು ಸೇರಿದ್ದ ಮಗ, ಎರಡನೇ ಪತ್ನಿಗೂ ವಂಚಿಸಿದ್ದ. ಸೊಸೆ ಮತ್ತು ಮೊಮ್ಮಗಳ ಜೀವನಕ್ಕಾಗಿ ಸೈಟ್​ ಬರೆದುಕೊಡಲು ಮುಂದಾದ ಅಪ್ಪನನ್ನೇ ಮಗ, ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ನಾರಾಯಣಸ್ವಾಮಿ (70) ಕೊಲೆಯಾದ ದುರ್ದೈವಿ ತಂದೆ. ಪುತ್ರ ಮಣಿಕಂಠ (37) ಎಂಬಾತನಿಂದ ಸುಪಾರಿ ಶಂಕೆ ವ್ಯಕ್ತವಾಗಿದೆ. ಕಳೆದ ಫೆಬ್ರವರಿ 13 ರ ಬೆಳಗ್ಗೆ 10 ಗಂಟೆಗೆ ಪಣತ್ತೂರಿನ ಕಾವೇರಪ್ಪ ಲೇಔಟ್‌ನಲ್ಲಿ ನಾರಾಯಣಸ್ವಾಮಿ ಅವರ ಹತ್ಯೆ ನಡೆದಿತ್ತು. ಕೊಲೆ ಬಳಿಕ ಮಗ ಮಣಿಕಂಠ ಏನೂ ಗೊತ್ತಿಲ್ಲದಂತೆ ತಂದೆಯ ಅಂತ್ಯಕ್ರಿಯೆ ಮಾಡಿದ್ದಾನೆ. ಪುತ್ರನ ಕೌಟುಂಬಿಕ ಕಲಹವೇ ಈ ಕೊಲೆಗೆ ಕಾರಣ ಎನ್ನಲಾಗಿದೆ.

ಆರೋಪಿ ಮಣಿಕಂಠ ಈ ಹಿಂದೆ ತನ್ನ ಮೊದಲ‌ ಪತ್ನಿಯನ್ನು ಕೊಂದು ಜೈಲು ಸೇರಿದ್ದ. ಜೈಲಿನಿಂದ ಹೊರಬಂದು ಮೊದಲ ವಿವಾಹ ಮುಚ್ಚಿಟ್ಟು ಎರಡನೇ ವಿವಾಹವಾಗಿದ್ದ. ಆದರೂ ಬೇರೊಬ್ಬ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನಂತೆ.

ಈ ವಿಚಾರ ಎರಡನೇ ಪತ್ನಿಗೆ ಗೊತ್ತಾಗಿ ಪತಿಯಿಂದ ದೂರವಿದ್ದಳು. ಡಿವೋರ್ಸ್ ವಿಚಾರವಾಗಿಯೂ ಮಾತುಕತೆ ನಡೆಯುತ್ತಿತ್ತು.

ಎರಡನೇ ಪತ್ನಿಗೆ ಒಂದು ಹೆಣ್ಣು ಮಗಳಿದ್ದಳು. ಆದರೆ, ಡಿವೋರ್ಸ್ ಕೊಡುವುದು ಬೇಡ ಅಂತಾ ಮಾವ ನಾರಾಯಣಸ್ವಾಮಿ ಕೇಳಿಕೊಂಡಿದ್ದ. ಡಿವೋರ್ಸ್ ಬಳಿಕ ಸೊಸೆ ಹಾಗೂ ಮೊಮ್ಮಗಳ ಜೀವನ ನಿರ್ವಹಣೆ ಕಷ್ಟ ಆಗುತ್ತದೆ ಅಂತಾ ಸೈಟ್​ ಒಂದನ್ನು ಅವರ ಹೆಸರಿಗೆ ಮಾಡಲು‌ ಮುಂದಾಗಿದ್ದ. ಆದರೆ ಇದು ಮಣಿಕಂಠನಿಗೆ ಇಷ್ಟವಿರಲಿಲ್ಲ. ಹಾಗಾಗಿ ತಂದೆ ಕೊಲೆಗೆ ಮಣಿಕಂಠನೇ ಸುಪಾರಿ ನೀಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಸುಪಾರಿ ಪಡೆದು ಬಂದವರು ನಾರಾಯಣಸ್ವಾಮಿ ಅವರನ್ನ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮಾರತ್ತಹಳ್ಳಿ ಪೊಲೀಸರು ಮಣಿಕಂಠನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

RELATED TOPICS:
English summary :Sinful son who killed his father by giving betel nut?

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...