Sun,Apr28,2024
ಕನ್ನಡ / English

ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅಶ್ವಥ್ ನಾರಾಯಣ | JANATA NEWS

16 Feb 2023
2222

ಬೆಂಗಳೂರು : ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಗುರಿಯಾಗಿದೆ.

ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಟಿಪ್ಪು ಸುಲ್ತಾನ್ ಅವರನ್ನು ನಿಂದಿಸುವ ಬರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ನಾನು ಆ ಮಾತುಗಳನ್ನು ವ್ಯಕ್ತಿಗತವಾಗಿ ಹೇಳಿರುವಂತದ್ದಲ್ಲ. ರಾಜಕೀಯವಾಗಿ ಹಾಗೂ ಸೈದ್ಧಾಂತಿಕವಾಗಿ ಹೇಳಿರುವ ಮಾತುಗಳು ಅವು. ನನಗೆ ಸಿದ್ದರಾಮಯ್ಯ ಅವರ ಮೇಲೆ ಯಾವುದೇ ವೈಯ್ಯಕ್ತಿಕ ದ್ವೇಷವಿಲ್ಲ. ನಾನು ಹೇಳಿರುವ ಮಾತುಗಳನ್ನು ತಿರುಚಿ ಬಿತ್ತರಿಸುವುದು ಸಿದ್ದರಾಮಯ್ಯ ಅವರಿಗೆ ನಿಮಿಷದ ಕೆಲಸ. ನಾನು ಹೇಳಿದ ಮಾತುಗಳಿಂದ ಸಿದ್ದರಾಮಯ್ಯ ಅವರ ಮನಸ್ಸಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ ಎಂದು ಸಚಿವ ಡಾ ಅಶ್ವತ್ಥನಾರಾಯಣ್​ ಅವರು ಮರು ಹೇಳಿಕೆ ನೀಡಿದ್ದಾರೆ.

ಈ ಬಾರಿ ಕಾಂಗ್ರೆಸ್​ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಬೇಕು ಎಂಬರ್ಥದಲ್ಲಿ ಹೇಳಿದ ಮಾತಿಗೆ 'ಕೋವಿ ಹಿಡಿದು ಬನ್ನಿ' ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ನಮಗೆ ಮತಯಂತ್ರವೇ ಕೋವಿ, ಮತದಾರರು ಕಾಂಗ್ರೆಸ್ ವಿರುದ್ದ ಒತ್ತುವ ಒಂದೊಂದು ಮತಗಳೂ ಒಂದೊಂದು ಬುಲೆಟ್‌ಗಳೇ. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅಂತಿಮ ಮೊಳೆ ಹೊಡೆಯಲು ಜನತೆಯೇ ತೀರ್ಮಾನಿಸಿದ್ದಾರೆ.

ಟಿಪ್ಪುವನ್ನು ಯಾವ ರೀತಿ ವಿಜೃಂಭಣೆ ಮಾಡುತ್ತಿದ್ದಾರೆ, ಅವರ ಜಯಂತಿಯನ್ನು ಯಾವ ರೀತಿ ಕಾಂಗ್ರೆಸ್​ ಪಕ್ಷದವರು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಅದನ್ನು ಖಂಡಿಸುವಂತಹದ್ದು ಆಗಬೇಕು. ಅದರ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುವಂತಹದ್ದಾಗಬೇಕು. ಬರುವಂತಹ ಚುನಾವಣೆಯಲ್ಲಿ ಜನರ ಬೆಂಬಲವನ್ನು ನಮ್ಮ ಪರವಾಗಿ ಪಡೆದುಕೊಳ್ಳಬೇಕು. ಕಾಂಗ್ರೆಸ್​ ಪಕ್ಷವನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇನೆ. ನಾವಿವತ್ತು ಪ್ರಜಾಪ್ರಭುತ್ವದಲ್ಲಿದ್ದೇವೆ.

ಯಾವುದೋ ಯುದ್ಧದ ಕಾಲದಲ್ಲಿ ಇಲ್ಲ ನಾವು.ಆ ಕಾಲದಲ್ಲಿ ಯುದ್ಧದಲ್ಲಿ ಗೆದ್ದು ಆಡಳಿತ ಮಾಡಬೇಕಿತ್ತು. ಇವತ್ತು ಚುನಾವಣೆಯಲ್ಲಿ ಗೆದ್ದರೆ ಮಾತ್ರ ನಾವು ಆಡಳಿತ ಮಾಡೋದಕ್ಕಾಗುತ್ತದೆ. ಈ ಹಿನ್ನೆಲೆಯಲ್ಲಿ ನಾನು ಮಾತನಾಡಿರುವಂತಹದ್ದು, ಒಂದು ಆಡುಭಾಷೆಯಲ್ಲಿ ಮಾತನಾಡಿದ್ದೇನೆ ಹೊರತು, ವ್ಯಕ್ತಿಗತವಾಗಿ ಮಾತನಾಡಿಲ್ಲ.

ಇಡೀ ಕಾಂಗ್ರೆಸ್​ ಪಕ್ಷವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡಿರುವಂತಹದ್ದು. ಇವರು ಅದನ್ನು ತಿರುಚುವಂತಹ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಸಂಪೂರ್ಣವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

RELATED TOPICS:
English summary :Siddaramaiah hit statement: Aswath Narayan regrets his statement

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...