Sat,Apr27,2024
ಕನ್ನಡ / English

ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ, ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ಇವರು | JANATA NEWS

16 Feb 2023
2485

ಹುಬ್ಬಳ್ಳಿ : ಟಿಪ್ಪು ಸುಲ್ತಾನ್​ನನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ. ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ಇವರು. ಆರ್​ಎಸ್​ಎಸ್​ನವರು ಸಚಿವ ಅಶ್ವತ್ಥನಾರಾಯಣ್​ ಬಾಯಿಯಿಂದ ಹೀಗೆ ಹೇಳಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಡಾ ಅಶ್ವತ್ಥನಾರಾಯಣ್​ ಅವರ ಹೇಳಿಕೆ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಚರ್ಚೆಯಾಗಬೇಕಿರುವುದು ಅಭಿವೃದ್ಧಿ ವಿಚಾರ. ರೈತರ, ಬಡವರ ದಲಿತರು ಅಲ್ಪಸಂಖ್ಯಾತರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು. ಅದನ್ನು ಬಿಟ್ಟು ಇಂತಹ ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಹುಟ್ಟಿಸುತ್ತಿದ್ದಾರೆ. ಇವರು ಚುನಾವಣಾ ಪ್ರಣಾಳಿಕೆಯಲ್ಲಿ ಬೇಕಿದ್ದರೆ, ಈ ಚುನಾವಣೆ ಟಿಪ್ಪು ವರ್ಸಸ್ ಸಾವರ್ಕರ್ ನಡುವೆ ಎಂದು ಬರೆದುಕೊಳ್ಳಲಿ. ಈ ಬಗ್ಗೆ ಜನ ತೀರ್ಮಾನ ಮಾಡಲಿ. ಜನ ಇಂತಹದಕ್ಕೆಲ್ಲ ಪ್ರೋತ್ಸಾಹ ಕೊಡೋಕೆ ಆಗುತ್ತಾ..? ಎಂದು ಪ್ರಶ್ನಿಸಿದ್ದಾರೆ.

"ಸಿದ್ಧರಾಮಯ್ಯನನ್ನು ಮುಗಿಸಲಿ ಎಂದರೆ ಏನರ್ಥ, ಎಲ್ಲರೂ ಇದನ್ನು ಖಂಡಿಸಬೇಕು. ಒಬ್ಬ ಸಚಿವನಾಗಿ ಈ ರೀತಿ ಹೇಳಿಕೆ ಕೊಡೋದು ಎಷ್ಟರ ಮಟ್ಟಿಗೆ ಸರಿ? ಪ್ರಜೆಗಳಿಗೆ ರಕ್ಷಣೆ ಕೊಡೋದು ಸಚಿವರು ಹಾಗೂ ಸರ್ಕಾರದ ಜವಾಬ್ದಾರಿ. ಟಿಪ್ಪುವನ್ನು ಮುಗಿಸಿದ ಹಾಗೆ ಸಿದ್ಧರಾಮಯ್ಯನನ್ನು ಮುಗಿಸಿ ಎಂದರೆ ಏನರ್ಥ. ಪೊಲೀಸರು ಇದನ್ನು ಸ್ವ ಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು. ಪ್ರಧಾನಿ, ಅಮಿತ್ ಶಾ ಹೇಳಲಿ ಇದು ಸರೀನಾ ಅಂತಾ. ಸಿದ್ಧರಾಮಯ್ಯನನ್ನು ರಕ್ಷಿಸಬೇಕಾದವರೇ ಮುಗಿಸಿ ಅಂತಾ ಕರೆ ಕೊಟ್ಟರೆ ಏನರ್ಥ? ನಾನು ದೂರು ಕೊಡೋಕೆ ಹೋಗಲ್ಲ ಎಲ್ಲ ಸರ್ಕಾರಕ್ಕೆ ಬಿಟ್ಟಿದ್ದೇನೆ" ಎಂದರು.

ಸರಣಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ.. ನನ್ನನ್ನು ಕೊಲ್ಲಬೇಕು ಎಂದು ಮನವಿ ಮಾಡಿರುವ ಮಾನಸಿಕ ಅಸ್ವಸ್ಥ ಅಶ್ವಥ್ ನಾರಾಯಣ್ ವಿರುದ್ಧ ಕನ್ನಡಿಗರಿಗೆ ಕೋಪ ಬಂದಿದೆ ಅಂತಾ ನನಗೆ ಗೊತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಅವರನ್ನು ವಜಾ ಮಾಡಬೇಕು. ಕೂಡಲೇ ಕರ್ನಾಟಕ ಸರ್ಕಾರ ಅಶ್ವಥ್ ನಾರಾಯಣ್​​ರನ್ನು ಬಂಧಿಸಬೇಕು. ಒಂದು ವೇಳೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅಶ್ವಥ್ ನಾರಾಯಣ್​​ ಮಾತಿಗೆ ಬಿಜೆಪಿಯ ಸಹಮತ ಇದೆ ಎಂದರ್ಥ. ಅಥವಾ ಅಶ್ವಥ್ ನಾರಾಯಣ್ ಮಾನಸಿಕವಾಗಿ ಸರಿ ಇಲ್ಲ ಎಂದು. ಯಾಕೆ ನೀವು ಜನರನ್ನು ಪ್ರಚೋದಿಸುತ್ತೀರಿ. ನೀವು ಗನ್ ತೆಗೆದುಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Hodi, Badi, Kadi, BJP culture, they are the ones who killed Mahatma Gandhi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...