Thu,May09,2024
ಕನ್ನಡ / English

ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್​: ಸಿದ್ದರಾಮಯ್ಯ | JANATA NEWS

17 Feb 2023
1764

ಬೆಂಗಳೂರು : ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್​ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟೀಕಾ ಪ್ರಹಾರ ನಡೆಸಿದರು.

ಬಜೆಟ್​ ಮಂಡನೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಇನ್ನು ಎರಡು ತಿಂಗಳಲ್ಲಿ ಚುನಾವಣೆ ಮುಗಿಯುತ್ತದೆ. ಇದು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್. ಈ ಬಾರಿ ಬಜೆಟ್ ಗಾತ್ರ 3 ಲಕ್ಷ ರೂ. ದಾಟಿದೆ.

ಕಳೆದ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದ ಕಾರ್ಯಕ್ರಮಗಳ ಪೈಕಿ 57 ಅನ್ನು ಸರ್ಕಾರ ಅನುಷ್ಠಾನಗೊಳಿಸಲಿಲ್ಲ. ಹಾಗೆಯೇ, 2018ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಆದರೆ ಅವುಗಳಲ್ಲಿ ಶೇಕಡ 90 ರಷ್ಟು ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ಪುನಃ ಸುಳ್ಳು ಭರವಸೆಗಳ ಬಜೆಟ್ ಮಂಡಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸರ್ವಜ್ಞ ವಚನದ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ ಜನರನ್ನು ಕನಸಿನ ಲೋಕದಲ್ಲಿ ತೇಲಾಡಿಸಿದೆ ಹೊರತು ಏನೂ ಮಾಡಿಲ್ಲ ಎಂದರು. ಸಾಲ 5,64,896 ಕೋಟಿ ಸಾಲ‌ ಆಗಿದೆ ಎಂದಿದ್ದಾರೆ, 2,47,000 ಕೋಟಿ ನನ್ನ ಕೊನೆಯ ಅವಧಿಯಲ್ಲಿ ‌ಇತ್ತು. 3,22,000 ಕೋಟಿ ಸಾಲ ಹೆಚ್ಚಾಗಿದೆ. 41916 ಕೋಟಿ ಸಮ್ಮಿಶ್ರ ಸರ್ಕಾರದಲ್ಲಿ ಸಾಲ ಆದರೆ 2,54, 760 ಕೋಟಿ ಬಿಜೆಪಿ ಅವಧಿ ಸಾಲ ಮಾಡಲಾಗಿದೆ. ನಮ್ಮ ಐದು ವರ್ಷದ ಅವಧಿಯಲ್ಲಿ 1,16,512 ಕೋಟಿ ಸಾಲ ಆಗಿತ್ತು. ಈ ಮೂಲಕ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ‌. ಯದ್ವಾ ತದ್ವಾ ಸಾಲ ಮಾಡಿ ರಾಜ್ಯದ ಜನರನ್ನು ಸಾಲಗಾರರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದರು. ಹೀಗಾದರೆ ಇದನ್ನು ಅಭಿವೃದ್ಧಿ ಪರ ಬಜೆಟ್ ಎಂದು ಹೇಗೆ ಕರೆಯಲು ಸಾಧ್ಯ ಎಂದು ಪ್ರಶ್ನಿಸಿದರು.

ಒಟ್ಟಾರೆಯಾಗಿ ಇದೊಂದು ನಿರಾಶಾದಾಯಕ, ಚುನಾವಣಾ ಬಜೆಟ್ ಆಗಿದೆ. ಬಜೆಟ್ ನಲ್ಲಿ ಬದ್ಧ ವೆಚ್ಚಗಳ ಬಗ್ಗೆ ಉಲ್ಲೇಖ ಮಾಡಿಲ್ಲ. ಬದ್ಧ ವೆಚ್ಚ ಕಡಿಮೆ ಮಾಡಲು ಯಾವ ಪ್ರಯತ್ನ ಮಾಡಿಲ್ಲ. ಅನಗತ್ಯ ವೆಚ್ಚ ತಡೆಯಲು ಕ್ರಮ ಕೈಗೊಂಡಿಲ್ಲ. ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ, ಸಾಲದ ಸುಳಿಗೆ ಸಿಲುಕಿಸಿದ್ದಾರೆ ಎಂದು ಆರೋಪಿಸಿದರು.

RELATED TOPICS:
English summary :This is BJP government election budget: Siddaramaiah

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...