Sun,Apr28,2024
ಕನ್ನಡ / English

ನಾನು ರಾಜ್ಯ ರಾಜಕಾರಣಕ್ಕೆ ಬರುವ ಚಿಂತನೆಯೇ ಇಲ್ಲ: ಪ್ರಲ್ಹಾದ್ ಜೋಶಿ | JANATA NEWS

18 Feb 2023
2145

ಹುಬ್ಬಳ್ಳಿ : ನಾನು ರಾಜ್ಯ ರಾಜಕಾರಣಕ್ಕೆ ಬರುವ ಚಿಂತನೆಯೇ ಇಲ್ಲದಿರುವಾಗ ನಾನು ಮುಖ್ಯಮಂತ್ರಿಯಾಗುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ನಗರದಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಇಡೀ ದೇಶದಲ್ಲಿ ಕಾಂಗ್ರೆಸ್ ಜನರಿಂದ ತಿರಸ್ಕೃತಗೊಂಡಿದ್ದು ಅಷ್ಟಿದ್ದರೂ ಕಾಂಗ್ರೆಸ್ ನವರು ಬಜೆಟ್ ಮಂಡನೆ ವೇಳೆ ಕಿವಿಯಲ್ಲಿ ಹೂವಿಟ್ಟುಕೊಂಡು ಸದನಕ್ಕೆ ಬಂದಿದ್ದಾರೆ.

ಎಲ್ಲ ಕಡೆ ಜನ ಈಗಾಗಲೇ ಹೂವಿಟ್ಟಿದ್ದು ಇನ್ನು ಮುಂದು ತಾವಾಗಿಯೇ ಹೂವಿಟ್ಟುಕೊಂಡು ಅಡ್ಡಾಡೋ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದರು. ಜವಾಹರಲಾಲ್ ನೆಹರೂ ನಿಧನದ ನಂತರ ಅವರ ಹೆಸರಲ್ಲಿ ಇಂದಿರಾ ಅಧಿಕಾರಕ್ಕೆ ಬಂದರು. ಇಂದಿರಾಗಾಂಧಿ ಸಾವಿನ‌ ನಂತರ ಅವರ ಹೆಸರಲ್ಲಿ ಗದ್ದುಗೆ ಹಿಡಿದರು ಹೀಗೇ ನೋಡಿದರೆ ಸ್ವಂತ ಶಕ್ತಿಯ ಮೇಲೆ ಎಂದೂ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ ಈಗ ಅದು ಅಧಿಕಾರ ಕಳೆದುಕೊಂಡು ಪರಿತಪಿಸ್ತಾ ಹೀಗೆ ಮಾಡ್ತಿದೆ ಜೋಶಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಪೇಶ್ವೆ ಮೂಲದವರನ್ನು ಬಿಜೆಪಿ ಸಿಎಂ ಮಾಡಲು ಹೊರಟಿದೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ಪ್ರಧಾನಿ ನರೇಂದ್ರ ಮೋದಿ ಶತಮಾನಕ್ಕೊಬ್ಬ ನಾಯಕನ ಕೈ ಕೆಳಗೆ ಕೆಲಸ ಮಾಡುವುದಕ್ಕೆ ನನಗೆ ಖುಷಿ ಇದೆ.ಅದು ನನ್ನ ಪಾಲಿನ ಸೌಭಗ್ಯವೆಂದು ಭಾವಿಸಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ಅಗತ್ಯವಿಲ್ಲ ಎಂದರು.

ಟಿಪ್ಪು ಸುಲ್ತಾನ ರೀತಿ ಸಿದ್ಧರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಅಶ್ವತ್ಥನಾರಾಯಣ ಅವರೇ ವಿಷಾದ ವ್ಯಕ್ತಪಡಿಸಿದ್ದಾರೆ. ಆ ಅರ್ಥದಲ್ಲಿ ಹೇಳಿಲ್ಲವೆಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮುಗಿಸಬೇಕೆಂದು ಹೇಳಿದ್ದಾರೆ. ಹೀಗಾಗಿ ಅದನ್ನು ಬೆಳೆಸಿಕೊಂಡು ಹೋಗುವುದು ಸರಿಯಲ್ಲ. ಬಾಯಿ ತಪ್ಪಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಹಲವಾರು ಬಾರಿ ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರ ಮೇಲೆ ಬಾಯಿಗೆ ಬಂದಂತೆ ಮಾತಾಡಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆರೋಪ, ಪ್ರತ್ಯಾರೋಪ ತಾರಕಕ್ಕೇರಿವೆ. ಈ ಮಟ್ಟಕ್ಕಿಳಿದು ಮಾತನಾಡೋದು ಯಾರಿಗೂ ತರವಲ್ಲ ಎಂದರು.

RELATED TOPICS:
English summary :I have no thought of joining state politics: Pralhad Joshi

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...