Thu,May09,2024
ಕನ್ನಡ / English

ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದ ಸರ್ಕಾರ | JANATA NEWS

20 Feb 2023
1747

ಬೆಂಗಳೂರು : ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಸರ್ಕಾರ ಆದೇಶ ಹೊರಡಿಸಿದೆ.

ಬಿಲ್ಲವ/ಈಡಿಗ, ಗಾಣಿಗ ಸಮುದಾಯಗಳ ಬಹುಕಾಲದ ಬೇಡಿಕೆ ಈಡೇರಿದೆ. ಎರಡೂ ಸಮುದಾಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಸರ್ಕಾರ ಆದೇಶ ಮಾಡಿದೆ.

ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿ ಹೊರಡಿಸಲಾಗಿರುತ್ತದೆ.

ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪ್ರವರ್ಗ 2'ಎ'ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಡಿಗ-ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿರುವುದಾಗಿ ತಿಳಿಸಿದೆ.

ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಹಾಗೂ ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಫೋಸ್ಟ್ ಮಾಡಿದ್ದಾರೆ.

ಸಚಿವ ಸುನಿಲ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬುದು ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಸಮುದಾಯದ ಕನಸನ್ನು ನನಸು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Govt issued order to set up Narayan Guru Development Corporation

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...