Sat,May18,2024
ಕನ್ನಡ / English

IPS ಹಾಗೂ IAS ಅಧಿಕಾರಿಗಳ ಜಟಾಪಟಿ: ಸರಕಾರ ಇದೆಯಾ? ಇಲ್ಲವಾ? ಎನ್ನುವ ಅನುಮಾನ ಉಂಟಾಗಿದೆ! | JANATA NEWS

20 Feb 2023
1929

ಬೆಂಗಳೂರು : ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳ ಜಟಾಪಟಿ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರ ಇದೆಯಾ? ಇಲ್ಲವಾ? ಎನ್ನುವ ಅನುಮಾನ ಉಂಟಾಗಿದೆ ಎಂದರು.

ಎಚ್​ಡಿ ಕುಮಾರಸ್ವಾಮಿ ಮಾತನಾಡಿ, ರೋಹಿಣಿ-ರೂಪಾ ಜಟಾಪಟಿ ನೋಡ್ತಿದ್ರೆ ಸರ್ಕಾರ ಇದ್ಯಾ ಇಲ್ವಾ ಅನ್ನಿಸ್ತಿದೆ. ಸರ್ಕಾರದ ಕೆಡರ್ ನಲ್ಲಿ ಇರೋ ಅಧಿಕಾರಿಗಳು ಈ ರೀತಿ ಮಾಡ್ತಾರೆ ಅಂದ್ರೆ ಏನು? ನಾನು ನೋಡಿದ ಹಾಗೇ ಸರ್ಕಾರ ಇಂತಹದ್ದನ್ನು ಗಮನಿಸಬೇಕು.

ಸಿಎಸ್​ಗೆ ಮಾಹಿತಿ ನೀಡಬೇಕು. ಆದ್ರೆ ಇದನ್ನು ನೋಡ್ತಿದ್ರೆ ಅಧಿಕಾರಿಗಳಿಗೆ ಸರ್ಕಾರ ಅಂದ್ರೆ ಭಯವೇ ಇಲ್ಲ ಎಂದೆನಿಸುತ್ತಿದೆ. ಗೃಹ ಸಚಿವರು ಏನ್ಮಾಡ್ತಿದ್ದಾರೆ? ಸರ್ಕಾರಿ ಅಧಿಕಾರಿಗಳನ್ನು ದೇವಮಾನವರು ಅಂತಾರೆ. ಅವ್ರೇನು ದೇವಲೋಕದಿಂದ ಬಂದಿದ್ದಾರಾ? ಇದೆಲ್ಲ ನೋಡ್ತಿದ್ರೆ ನಗಬೇಕೋ ಅಳಬೇಕೋ ಗೊತ್ತಾಗ್ತಿಲ್ಲ ಎಂದು ಸರ್ಕಾರದ ಕಾಲೆಳೆದರು.

ಅಧಿಕಾರಿಗಳಿಗೆ ಒಂದಿಷ್ಟು ಮಾರ್ಗಸೂಚಿಗಳು, ನಿಯಮಾವಳಿಗಳು ಇವೆ. ಅವರು ಜನತೆಗೆ ಉತ್ತರದಾಯಿ ಆಗಿರಬೇಕು. ಅವರು ಸೋಷಿಯಲ್ ಮೀಡಿಯಾದಲ್ಲಿ ಹಾದಿ ರಂಪ ಬೀದಿ ರಂಪ ಮಾಡಿಕೊಳ್ಳುವ ಬದಲು ಮುಖ್ಯ ಕಾರ್ಯದರ್ಶಿ ಬಳಿ ಹೋಗಿ ಸಮಸ್ಯೆ ಪರಿಹಾರ ಮಾಡಿಕೊಳ್ಳಬಹುದಿತ್ತು. ಇದೊಂದೇ ಅಲ್ಲ, ಅನೇಕ ಪ್ರಕರಣಗಳು ನಡೆದಿವೆ. ಅಧಿಕಾರಿಗಳಿಗೆ ಸರ್ಕಾರದ ಮೇಲೆ ಗೌರವ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೃಹ ಸಚಿವರು ಸರಕಾರಿ ಅಧಿಕಾರಿಗಳನ್ನು ದೇವ ಮಾನವರು ಅಂತಾರೆ. ಹಾಗೆಂದರೆ ಏನರ್ಥ? ಅವರೇನು ಇಂದ್ರಲೋಕದಿಂದ ಇಳಿದು ಬಂದವರಾ? ಇದೆಲ್ಲಾ ವಿಚಾರಗಳು ನನಗೆ ಗೊತ್ತಿದೆ. ಸಾರಾ ಮಹೇಶ್ ಅವರ ಮೇಲೆ ಒಬ್ಬ ಮಹಿಳಾ ಅಧಿಕಾರಿ ಆರೋಪ ಮಾಡಿದ್ದು ಗೊತ್ತಿದೆ, ಆ ಅಧಿಕಾರಿ ಎಲ್ಲಿ ಹೋದರೂ ವಿವಾದವೇ. ಯಾಕೆ ಬೇಕು ಇಂಥ ವಿವಾದಗಳು? ನನಗೆ ಗೊತ್ತಿರುವ ಕೆಲ ಮಾಹಿತಿಗಳನ್ನು ಹೊರಗೆ ಇಟ್ಟರೆ ಸರಕಾರಕ್ಕೆ ತಲೆ ಎತ್ತಿ ನಿಲ್ಲಲು ಆಗುವುದಿಲ್ಲ ಎಂದರು.

RELATED TOPICS:
English summary :Jatapati of IPS and IAS officers: Is there a government? or not It is suspected that

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...