Tue,May07,2024
ಕನ್ನಡ / English

ಡಿ.ರೂಪಾ ಕೇಳಿರುವ ಪ್ರಶ್ನೆಗಳು ನೈತಿಕವಾಗಿವೆ, ಸಂಬಂಧಪಟ್ಟವರು ಉತ್ತರ ನೀಡಲಿ: ಪ್ರತಾಪ್‌ ಸಿಂಹ | JANATA NEWS

20 Feb 2023
2270

ಮೈಸೂರು : ಐಪಿಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಜಿಪಿ ಡಿ.ರೂಪ ಅವರು ಕೇಳಿರುವ ಪ್ರಶ್ನೆಗಳು ನೈತಿಕವಾಗಿವೆ. ಇದಕ್ಕೆ ರೋಹಿಣಿ ಸಿಂಧೂರಿ ಮತ್ತು ಸಂಬಂಧಪಟ್ಟವರು ಉತ್ತರ ಕೊಡಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದರು.

ಐಪಿಎಸ್ ಅಧಿಕಾರಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಟಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಡಿ. ರೂಪಾ ಎತ್ತಿರುವ ಪ್ರಶ್ನೆಗಳು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿವೆ.

ಹೀಗಾಗಿ ಆರೋಪಗಳಿಗೆ ಸಂಬಂಧಿಸಿದಂತೆ ವಾಸ್ತವ ಏನು ನಡೆದಿದೆ ಎಂಬುದರ ಬಗ್ಗೆ ಪತ್ರಕರ್ತರು ಸತ್ಯಶೋಧನೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಐಎಎಸ್, ಐಪಿಎಸ್ ಅಧಿಕಾರಗಳ ಮೇಲೆ ರಾಜ್ಯ ಸರ್ಕಾರಕ್ಕೆ ನಿಯಂತ್ರಣ ಇಲ್ಲ ಎಂಬ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಹೇಳಿಕೆ ಬಗ್ಗೆ ಮಾತನಾಡಿದ ಪ್ರತಾಪ್‌ ಸಿಂಹ, ಹಾಸನದಲ್ಲಿ ಮಹಾಮಸ್ತಕಾಭಿಷೇಕ ಆದಾಗ ಯಾರ ಸರ್ಕಾರವಿತ್ತು? ರೋಹಿಣಿ ಸಿಂಧೂರಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎ.ಮಂಜು ಅವರೊಂದಿಗೆ ಬೀದಿ ರಂಪ ಆಗಿತ್ತು.

ಮೈಸೂರಿನ ರಶ್ಮಿ ಮಹೇಶ್ ಮೇಲೆ ಹಲ್ಲೆ ಮಾಡಿದಾಗ, ಜಿಲ್ಲಾಧಿಕಾರಿ ಶಿಖಾ ಅವರನ್ನು ನಿಂದಿಸಿದಾಗ, ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ರಾಜ್ಯದಲ್ಲಿ ಅಧಿಕಾರಿಗಳ ಸ್ಥಿತಿ ಏನಾಗಿತ್ತು? ರೋಹಿಣಿ ಸಿಂಧೂರಿ ಅವರನ್ನು ತಲೆ ಮೇಲೆ ಕೂರಿಸಿಕೊಂಡವರು ಯಾರು? ರೂಪ ಎತ್ತಿರುವ ನೈತಿಕ, ಕಾನೂನಾತ್ಮಕ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕು. ಪತ್ರಕರ್ತರು ಸತ್ಯಶೋಧ ಮಾಡಬೇಕು ಎಂದು ಹೇಳಿದರು.

ಅಧಿಕಾರಿಗಳ ಬಗ್ಗೆ ಹೇಳುವ ಕಾಂಗ್ರೆಸ್ಸಿಗರು ಮೈಸೂರಿನ ಎಟಿಐನಲ್ಲಿ ರಶ್ಮಿ ಮಹೇಶ್ ಮೇಲೆ ಆಕ್ರಮಣವಾಗಿತ್ತು. ಅವತ್ತು ಅಧಿಕಾರಿಗಳ ಪರಿಸ್ಥಿತಿ ಏನಾಗಿತ್ತು? ಐಎಎಸ್ ಸಿ.ಶಿಖಾ ಅವರ ಮೇಲೆ ಕೆ.ಮರೀಗೌಡ ಅವಾಚ್ಯ ಶಬ್ದ ಬಳಸಿದಾಗ ಸಿದ್ದರಾಮಯ್ಯ ಸರ್ಕಾರ ಏನು ಮಾಡಿತ್ತು? ಮಲ್ಲಿಕಾರ್ಜುನ ಬಂಡೆಯನ್ನು ಡ್ರಾಗಾರ್​ನಲ್ಲಿ ಕೊಂದಿದ್ದಾಗ ಯಾವ ಸರ್ಕಾರವಿತ್ತು? ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆಯಾದಾಗ ಅಧಿಕಾರಿಗಳ ಸ್ಥಿತಿ ಏನಾಗಿತ್ತು? ಎಂದು ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಅವರಿಗೆ ಮರು ಪ್ರಶ್ನೆ ಹಾಕಿದ್ದಾರೆ.

RELATED TOPICS:
English summary :Questions asked by D. Rupa are ethical, let the concerned answer: Pratap Singh

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...