Sun,Apr28,2024
ಕನ್ನಡ / English

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ! | JANATA NEWS

21 Feb 2023
2145

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದರು. ಭಾಷಣ ಮಧ್ಯೆ ಅನಿತಾಕುಮಾಸ್ವಾಮಿ ಗರಂ ಆಗಿದ್ದು, ಅವೆಲ್ಲವೂ ಕುಮಾರಸ್ವಾಮಿ ಅವರ ಕಾಲದಲ್ಲಿಯೇ ಆಗಿತ್ತು ಎಂದು ಹೇಳಿದ್ದಾರೆ.

ರಾಮನಗರ ‌ಜಿಲ್ಲೆಯ ಹಾರೋಹಳ್ಳಿ ನೂತನ ತಾಲೂಕು ನಿರ್ಮಾಣ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಭಾರತ್ ಮಾತಾಕಿ ಘೋಷಣೆ ‌ಕೂಗಿದ ಸಚಿವ ಅಶ್ವತ್ಥನಾರಾಯಣ ಅವರು, ತಾಲೂಕು ರಚನೆಗೆ ಬಿಜೆಪಿಯಿಂದ ಸಾಕಷ್ಟು ಶ್ರಮ ವಹಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ. ಕುಮಾರಸ್ವಾಮಿ ಸಿಎಂ ಆದಾಗ ತಾತ್ವಿಕ ಅನುಮೋದನೆ ಕೊಟ್ಟಿದ್ದರು ಎಂದು ಹೇಳಿದರು.

ಶಾಸಕಿ ಅನಿತಾ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ ಅವರ ಮೇಲೆ ಗರಂ ಆಗಿ ಭಾಷಣ ಮಾಡಿದ ಘಟನೆ ನಡೆದಿದೆ. ತಾಲೂಕು ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಗೆ ನನ್ನ ಹೆಸರು ಹಾಕಲಾಗಿದೆ. ಆದರೆ, ನಾನು ಬರುವುದಕ್ಕೂ ಮುನ್ನವೇ ಉದ್ಘಾಟನೆ ಮಾಡಲಾಗಿದೆ. ಕಾಟಾಚಾರಕ್ಕೆ ನನ್ನನ್ನು ಕರೆದಿರುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ಆದರೆ, ಅವರ ಟೀಕೆಗಳಿಗೆ, ಪ್ರಶ್ನೆಗಳಿಗೆ ಉತ್ತರ ಕೊಡಲು ಅಶ್ವತ್ಥ ನಾರಾಯಣ ಕಾರ್ಯಕ್ರಮದಲ್ಲಿ ಇರಲೇ ಇಲ್ಲ. ವಿಧಾನಸಭೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಅವರು ಕಾರ್ಯಕ್ರಮ ನೆರವೇರಿಸಿ ಹೊರಟು ಹೋಗಿದ್ದರು. ಆದರೆ, ಅನಿತಾ ಅವರು ಸುಮ್ಮನಾಗಲಿಲ್ಲ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಭಾಷಣದುದ್ದಕ್ಕೂ ಸಚಿವರ ವಿರುದ್ಧ ಟೀಕೆಗಳನ್ನು ಮಾಡಿದರು.

2019ರಲ್ಲಿ ಹಾರೋಹಳ್ಳಿ ನೂತನ ತಾಲೂಕಾಗಿ ಘೋಷಣೆ ಆಗಿತ್ತು. ಈ ತಾಲೂಕು ರಚನೆಗೆ ನನ್ನ ಶ್ರಮ ಇದೆ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನೂತನ ತಾಲೂಕಿಗೆ ಅನುಮೋದನೆ ಪಡೆದಿದ್ದೇನೆ. ಉಸ್ತುವಾರಿ ಸಚಿವರು ಈಗ ಹೇಳಿದ ನೀರಾವರಿ ಯೋಜನೆ ಆಗಿದ್ದೂ ಕುಮಾರಸ್ವಾಮಿ ಕಾಲದಲ್ಲಿ. ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯಲ್ಲಿದ್ದಾರೆ. ಅವರು ಬಂದಿದ್ರೆ ಬೇರೆ ಯಾರೂ ಮಾತನಾಡ್ತಿರಲಿಲ್ಲ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ನಮ್ಮ ಸರ್ಕಾರ ಬಂದ ಮೇಲೆ ಅದಾಯ್ತು, ಇದಾಯ್ತು ಅಂತಾರೆ. ಬರೀ ಬುರುಡೆ ಬಿಡೋದಷ್ಟೇ ಮಾತ್ರ ಇವರಿಗೆ ಗೊತ್ತು. ಸಚಿವರು ಮಲ್ಲೇಶ್ವರಂಗೆ ಹೋಗಿ ಅಭಿವೃದ್ಧಿ ಮಾಡಲಿ. ನಾನು ಶಿವನ ಭಕ್ತೆ. ಮಲ್ಲೇಶ್ವರಂನ ಕಾಡುಮಲ್ಲೇಶ್ಚರ ದೇವಸ್ಥಾನಕ್ಕೆ ಹೋಗ್ತಿರ್ತಿನಿ. ಅಲ್ಲಿಯ ಅಭಿವೃದ್ಧಿಯನ್ನೂ ನೋಡಿದ್ದೇನೆ ಎನ್ನುತ್ತಾ ಭಾಷಣದುದ್ದಕ್ಕೂ ಅಶ್ವತ್ಥ್ ನಾರಾಯಣ್ ವಿರುದ್ಧ ಅನಿತಾ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Aswathnarayan Vs Anita Kumaraswamy on stage in Ramanagara!

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...