Fri,May03,2024
ಕನ್ನಡ / English

ರಾಜ್ಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರ ಸಹಾಯಧನ 1000 ರೂ.ಗೆ ಹೆಚ್ಚಳ | JANATA NEWS

23 Feb 2023
1931

ಬೆಂಗಳೂರು : ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ 1000 ಸಹಾಯಧನ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ 1000 ರೂ. ಸಹಾಯಧನ ನೀಡಲು ತಿರ್ಮಾನಿಸಿರುವುದಾಗಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕಳೆದ ಫೆ.17ರಂದು ರಾಜ್ಯ ಬಜೆಟ್​ನಲ್ಲಿ ಮಹಿಳಾ ಕೃಷಿ ಕಾರ್ಮಿಕರಿಗೆ 500 ರೂ. ಘೋಷಣೆ ಮಾಡಿದ್ದರು. ಇದೀಗ ಮೊತ್ತವನ್ನು ಪರಿಷ್ಕರಿಸಿ ಸಾವಿರ ರೂ. ನೀಡುವುದಾಗಿ ಹೇಳಿದ್ದಾರೆ.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಿದೆ. ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ 1000 ಸಹಾಯಧನ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಚುನಾವಣೆಯ ಒತ್ತಡಕ್ಕೆ ಮಣಿಯದೆ ವಾಸ್ತವಕ್ಕೆ ಹತ್ತಿರವಾದ ಬಜೆಟ್ ಮಂಡನೆ ಮಾಡಿದ್ದೇನೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ನೀಡುವ ಪ್ರಯತ್ನ ನನ್ನದಾಗಿತ್ತು. ನಾವು ಸಂಪೂರ್ಣ ಭ್ರಷ್ಟಾಚಾರ ತೆಗೆದಿದ್ದೇವೆ ಎಂಬ ನೈತಿಕ ಶಕ್ತಿ ಇಲ್ಲ. ಆದರೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ ತೆಗೆದುಕೊಂಡಿದ್ದೇವೆ. ಮದ್ಯವರ್ತಿಗಳ ಕೈಬಿಸಿ ಮಾಡುವುದನ್ನು ತಪ್ಪಿಸಿದ್ದೇನೆ. ಇದಕ್ಕಾಗಿ ಇನ್ನಷ್ಟು ಗ್ರಾಮ ಒನ್ ಕೇಂದ್ರ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಜೆಟ್‍ ನಲ್ಲಿ ಘೋಷಿಸಲಾಗಿದ್ದ ಒಂದು ಸಾವಿರ ಬಸ್‍ಗಳನ್ನು 2,000ಕ್ಕೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದರು.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ನಾಲ್ಕು ಸಾವಿರ ಶಿಶು ವಿಹಾರಗಳನ್ನು ಪ್ರಾರಂಭಿಸಲು ಬಜೆಟ್‍ನಲ್ಲಿ ಅನುದಾನ ಮೀಸಲಿಡಲಾಗಿದೆ. ನಿರುದ್ಯೋಗಿಗಳಿಗೆ ಬದುಕುವ ದಾರಿ ಕಲ್ಪಿಸಲಾಗಿದ್ದು, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಹಾಯಕರ ಗೌರವಧನವನ್ನು ಒಂದು ಸಾವಿರ ರೂ. ಗಳಿಗೆ ಹೆಚ್ಚಿಸಲಾಗಿದೆ. ಇ-ಕಾಮರ್ಸ್ ನಲ್ಲಿ ತೊಡಗಿರುವವರ ವಾಹನಗಳಿಗೆ 2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆಯನ್ನು ಮೊದಲ ಬಾರಿಗೆ ಘೋಷಿಸಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿರುವ ಎಲ್ಲಾ ಯೋಜನೆಗಳು ನಮ್ಮ ಸರ್ಕಾರದ ಸೂಕ್ಷ್ಮತೆಯನ್ನು ಬಿಂಬಿಸುತ್ತದೆ ಎಂದರು.

ಮುಖ್ಯಮಂತ್ರಿ ಹಿತಾಸಕ್ತಿ ಯೋಜನೆ ಮೂಲಕ ವಿದ್ಯಾವಾಹಿನಿ ಹೆಸರಿನಲ್ಲಿ ಶಾಲೆಗೆ ಹೋಗುವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡುತ್ತಿದ್ದೇವೆ. ಅನೇಕ ವಿದ್ಯಾರ್ಥಿಗಳಿಗೆ ಪಿಯುಸಿ, ಡಿಗ್ರಿ ಫೀಸ್ ಕಟ್ಟಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಮನಗಂಡು ಹೈಸ್ಕೂಲ್ ವರೆಗಿದ್ದ ಉಚಿತ ಶಿಕ್ಷಣವನ್ನು ಪದವಿ ವರೆಗೆ ವಿಸ್ತರಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

RELATED TOPICS:
English summary :1000 increase in subsidy for landless women agricultural workers in the state

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...