Mon,May06,2024
ಕನ್ನಡ / English

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್​ ರಿಲೀಫ್, ರೋಹಿಣಿ-ರೂಪಾ ಇಬ್ಬರೂ ಪರಸ್ಪರ ಮಾತನಾಡದಂತೆ ತಡೆಯಾಜ್ಞೆ! | JANATA NEWS

23 Feb 2023
1691

ಬೆಂಗಳೂರು : ಐಪಿಎಸ್‌ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಜಟಾಪಟಿಗೆ ಕೋರ್ಟ್‌ ಬ್ರೇಕ್​ ಹಾಕಿದೆ.

ಐಪಿಎಸ್​ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿನ ನಡುವಿನ ಕಿತ್ತಾಟಕ್ಕೆ 74ನೇ ಸಿಸಿಹೆಚ್​​ ಕೋರ್ಟ್ ಬ್ರೇಕ್ ನೀಡಿದೆ. ಡಿ.ರೂಪಾ ಅವರು ತಮ್ಮ ಮೇಲೆ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳ ಮೂಲಕ ತೇಜೋವಧೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಮಾತಾಡದಂತೆ ನಿರ್ಬಂಧಕಾಜ್ಞೆ ನೀಡಬೇಕು ಅಂತಾ ಕೋರಿ ಸಿಂಧೂರಿ ಕೋರ್ಟ್​ ಮೆಟ್ಟಿಲೇರಿದ್ದರು.

ನಿನ್ನೆ ವಿಚಾರಣೆ ನಡೆಸಿದ್ದ ಕೋರ್ಟ್​, ಇವತ್ತಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ಮಧ್ಯಾಹ್ನದ ವೇಳೆಗೆ ಕೋರ್ಟ್​ ತೀರ್ಪು ಪ್ರಕಟಿಸಿದ್ದು, ಸೋಶಿಯಲ್ ಮೀಡಿಯಾ ಹಾಗೂ ಕೆಲ ಮಾಧ್ಯಮಗಳಿಗೆ ಸಿಂಧೂರಿ ಹಾಗೂ ರೂಪಾ ನಡುವಿನ ಕಿತ್ತಾಟದ ಸುದ್ದಿಯನ್ನು ಪ್ರಸಾರ ಮಾಡದಂತೆ ತಡೆ ನೀಡಿದೆ.

ಇಂದು ಅರ್ಜಿಯ ವಿಚಾರಣೆ ಕೈಗೆತ್ತಕೊಂಡ ಕೋರ್ಟ್​, ಡಿ ರೂಪಾ ಸೇರಿದಂತೆ ಎಲ್ಲಾ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಅರ್ಜಿದಾರರ ವಿಚಾರವನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ನೀಡಿದೆ.

ಅಲ್ಲದೆ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಪರ ವಕೀಲರ ವಾದ ಆಲಿಸಿದ್ದ ಕೋರ್ಟ್​, ತಡೆಯಾಜ್ಞೆ ನೀಡುವ ಮುನ್ನ ಡಿ ರೂಪಾ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಅರ್ಜಿಯ ವಿಚಾರಣೆಯನ್ನು ಮಾರ್ಚ್​ 7ಕ್ಕೆ ಮುಂದೂಡಿದೆ. ಎರಡು ಕಡೆ ವಾದ ಆಲಿಸಿದ ಬಳಿಕ ಕೋರ್ಟ್​ ಅಂತಿಮ ಆದೇಶವನ್ನು ನೀಡಲಿದೆ.

RELATED TOPICS:
English summary :Big relief for IAS officer Rohini Sindhuri, Rohini-Rupa restrained from talking to each other!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...