Fri,May03,2024
ಕನ್ನಡ / English

ಸಿ.ಟಿ.ರವಿ ಕೃತ್ಯದಿಂದ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ: ಸಿದ್ದರಾಮಯ್ಯ | JANATA NEWS

23 Feb 2023
2474

ಬೆಂಗಳೂರು : ಸಿ.ಟಿ.ರವಿ ಕೃತ್ಯದಿಂದ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಸಿ.ಟಿ.ರವಿಗೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಸಿ.ಟಿ.ರವಿ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಭೇಟಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಮಾಂಸ ಸೇವನೆ, ದೇವಸ್ಥಾನ ಭೇಟಿ ವಿಚಾರ ವೈಯಕ್ತಿಕ ಆಯ್ಕೆಗಳು. ಇಂಥಹ ವಿಚಾರಗಳು ರಾಜಕೀಯ ಚರ್ಚೆಯ ವಸ್ತು ಆಗಬಾರದು. ನಾಯಕರು ಜನ ಕಲ್ಯಾಣ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕು. ಪರರನ್ನು ಟೀಕಿಸುವ ಸಿ.ಟಿ.ರವಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಸಿ.ಟಿ.ರವಿಗೆ ಟಾಂಗ್ ನೀಡಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ 'ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ' ಎಂಬ ಸಿಟಿ ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

'ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ' ಎಂದೂ ಸಿದ್ದರಾಮಯ್ಯ ಟೀಕಿಸಿದ್ದಾರೆ.

'ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ' ಎಂದೂ ಹೇಳಿದ್ದಾರೆ.

ಹೀಗೆ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ.ರವಿ ಕೃತ್ಯದಿಂದ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ. ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ. ರಾಜ್ಯದ ಕೆಲವು ಮಠಾಧೀಶರು ಈ ಬಗ್ಗೆ ಮೌನವಾಗಿದ್ದಾರೆ. ಇದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, 'ರಾಜ್ಯ ಬಿಜೆಪಿ ನಾಯಕರು ಹೇಳುವ ಸುಳ್ಳಿಗೆ ಸತ್ಯ ಅನ್ನೋದು ಸೂಸೈಡ್ ಮಾಡಿಕೊಂಡು ಸಮಾಧಿಯಾಗುತ್ತದೆ. ಮಾಂಸ ತಿಂದಿದ್ದು ನಿಜ, ಆದರೆ ದೇವಸ್ಥಾನಕ್ಕೆ ಹೋಗಿಲ್ಲ, ರೊಡಲ್ಲೇ ನಿಂತಿದ್ದೇನೆ ಎನ್ನುವ ಸುಳ್ಳು ಏಕೆ ಸಿಟಿ ರವಿ ಅವರೇ? ರೊಡಲ್ಲಿ ಘಂಟೆಗಳು ನೇತಾಡುತ್ತಿರುತ್ತವೆಯೇ? ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕುತ್ತಿರುವುದು ಸುಳ್ಳೇ?' ಎಂದು ಪ್ರಶ್ನೆ ಮಾಡಿದೆ.

RELATED TOPICS:
English summary :CT Ravi act made him eat his own vomit: Siddaramaiah

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...