Fri,May10,2024
ಕನ್ನಡ / English

ಬೆಳಗಾವಿಯಲ್ಲಿ ಪಿಎಂ ಕಿಸಾನ್ 13ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ | JANATA NEWS

27 Feb 2023
2367

ಬೆಳಗಾವಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಕುಂದಾನಗರಿಯ ಮಾಲಿನಿ ಸಿಟಿಯಲ್ಲಿ ನಡೆದ ಸಮಾವೇಶದಲ್ಲಿ ಪಿಎಂ ಕಿಸಾನ್ ಯೋಜನೆಯೆ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದರು.

ಪಿಎಂ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ 49 ಲಕ್ಷ ಸೇರಿ ದೇಶದ 8 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 16,800 ಕೋಟಿ ರೂಪಾಯಿಗಳನ್ನ ಜಮಾ ಮಾಡಿದರು. ಇದರೊಂದಿಗೆ 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ.

ನರೇಂದ್ರ ಮೋದಿ ಅವರು ಮಾತನಾಡಿ, ದೇಶದ ಎಲ್ಲಾ ಫಲಾನುಭವಿ ರೈತರ ಖಾತೆಗಳಿಗೆ ಒಂದು ಕ್ಲಿಕ್ ಮೂಲಕ ಹಣ ವರ್ಗಾವಣೆ ಆಗಿದೆ. ಮಧ್ಯವರ್ತಿಗಳ ಕಾಟ ಇಲ್ಲದೇ ನೇರವಾಗಿ ಹಣ ರೈತರನ್ನು ತಲುಪಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಕೋಟಿ ಹಣ ಬಿಡುಗಡೆ ಮಾಡಿದರೆ ಪೂರ್ಣವಾಗಿ ಯಾರ ಕೈಗೂ ತಲುಪುತ್ತಿರಲಿಲ್ಲ. ದಶಕಗಳವರೆಗೂ ಕಾಂಗ್ರೆಸ್ಸಿಗರು ರೈತರನ್ನು ಕಡೆಗಣಿಸಿದ್ದರು ಎಂದರು.

ಪ್ರಧಾನಿ ಮೋದಿ ಪುನರ್ ಅಭಿವೃದ್ಧಿ ಪಡಿಸಿದ ಬೆಳಗಾವಿ ರೈಲ್ವೇ ನಿಲ್ದಾಣ, ಲೋಂಟ, ಬೆಳಗಾವಿ, ಘಟಪ್ರಭಾ ಮಾರ್ಗದ ಡಬ್ಲಿಂಗ್​ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದರು. ಜತೆಗೆ ಜಲ ಜೀವನ್ ಮಿಷನ್ ಅಡಿ ಬೆಳಗಾವಿ ಜಿಲ್ಲೆಯ ಬಹು ಹಳ್ಳಿ ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಿದರು.

ಭಾರತದ ಭವಿಷ್ಯದ ದೃಷ್ಟಿಯಿಂದ ಕೃಷಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದೇವೆ. ಬಜೆಟ್​ನಲ್ಲಿ ಈ ಕ್ಷೇತ್ರಕ್ಕೆ 1 ಲಕ್ಷ ಕೋಟಿಗೂ ಹೆಚ್ಚು ಅನುದಾನ ಮೀಸಲಿಡಲಾಗಿದೆ. ರೈತರಿಗೆ ಪಿಎಂ ಪ್ರಮಾಣ್ ಸೇರಿದಂತೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದೇವೆ ಎಂದು ಪ್ರಧಾನಿಗಳು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಸೇರಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಜೋಶಿ, ಸಚಿವ ಗೋವಿಂದ ಕಾರಜೋಳ ಭಾಗಿಯಾಗಿದ್ದರು.

RELATED TOPICS:
English summary :PM Modi Releases PM Kisan 13th Installment fund in Belagavi on 27 February

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...