ಎಚ್ಡಿ ದೇವೇಗೌಡರು ಆಸ್ಪತ್ರೆಗೆ ದಾಖಲು | JANATA NEWS
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಮೊಣಕಾಲು ನೋವಿನಿಂದಾಗಿ ಎಚ್.ಡಿ.ದೇವೇಗೌಡ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇವೇಗೌಡರು ಮಂಡಿ ನೋವಿನಿಂದ ಬಳಲುತ್ತಿದ್ದರು. ಮೊಣಕಾಲು ಊದಿಕೊಂಡು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಬೆಳಗ್ಗೆ ಆಸ್ಪತ್ರೆಗೆ ತೆರಳಿದ್ದಾರೆ. ಮೊದಲು ವೈದ್ಯರು ಸಾಮಾನ್ಯ ತಪಾಸಣೆ ನಡೆಸಿದ್ದಾರೆ. ನಂತರ ಫಿಜಿಯೋಥೆರಪಿ ಸಹ ನಡೆಸಿದ್ದಾರೆ.ಸ್ವಲ್ಪ ಕಾಲು ಊತ ಹೆಚ್ಚಿದ್ದರಿಂದ ತಪಾಸಣೆ ಮಾಡಿಸಿಕೊಂಡು ಮನೆಗೆ ತೆರಳಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಒಂದು ವಾರಗಳ ಕಾಲ ವಿಶ್ರಾಂತಿ ಪಡೆದುಕೊಳ್ಳುವಂತೆಯೂ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಸದ್ಯ ಗೌಡರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ದೇವೇಡೌಡರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೆರೆಗೆ ಒಂದು ವಾರ ಕಾಲ ದೇವೇಗೌಡರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವುದಾಗಿ ಮೂಲಗಳು ತಿಳಿಸಿವೆ.