Fri,May10,2024
ಕನ್ನಡ / English

ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ | JANATA NEWS

02 Mar 2023
2767

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಢದಲ್ಲಿ ನಿರ್ಮಾಣವಾಗಿರುವ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಮಾಡಿದರು.

ನಂತರ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ನೆರವೇರಿಸಿ ತುಂಬಾ ಸಂತೋಷವಾಗಿದೆ. ಪ್ರವಾಸೋದ್ಯಮಕ್ಕೆ ನಮ್ಮ ಸರ್ಕಾರ ಹೆಚ್ಚಿನ ಉತ್ತೇಜನ ನೀಡಿದೆ.

ಸಿದ್ದರಾಮಯ್ಯ ಅವರು 2013- 2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರೂ ನಾಳೆ ಅವರನ್ನೇ ಕರೆತಂದು ಶಿವಾಜಿ ಮೂರ್ತಿ ಉದ್ಘಾಟನೆ ಮಾಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು.

ಹೊಯ್ಸಳರು, ಕದಂಬರು ಹಾಗೂ ಮೂಲ ಶಿಲ್ಪಕಲೆ ಇರುವಂತಹ ಸ್ಥಳಗಳನ್ನು ನಾವು ರಕ್ಷಣೆ ಮಾಡುತ್ತೇವೆ. ಜೊತೆಗೆ ಕಾರಿಡಾರ್ ನಿರ್ಮಾಣ ಮಾಡಲು ವಿಶೇಷ ಅನುದಾನವನ್ನು ಬಜೆಟ್​ನಲ್ಲಿ ಮೀಸಲಿಡಲಾಗಿದೆ ಎಂದು ಸಿಎಂ ಇದೇ ವೇಳೆ ತಿಳಿಸಿದರು.

ನಮ್ಮ ಸರಕಾರದ ಅವಧಿಯಲ್ಲಿ ಇಲ್ಲಿನ ಕೋಟೆ ಅಭಿವೃದ್ಧಿಗೆ 5. ಕೋಟಿ ರೂ. ಮೂರ್ತಿ ಪ್ರತಿಷ್ಠಾಪನೆಗೆ 50 ಲಕ್ಷ ರೂ. ಕೊಟ್ಟಿದ್ದೇವೆ‌ ಎಂದು ಹೇಳಿದರು. ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 2008 ರಲ್ಲಿ ಸಿಎಂ ಯಡಿಯೂರಪ್ಪ ಅವರು 14 ಕೋಟಿ ರೂಪಾಯಿ ಮಂಜೂರು ಮಾಡಿದರು. ಜನಾರ್ದನ ರೆಡ್ಡಿ ಅವರು ಅಂದಿನ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದರು. ಶಾಸಕ ಸಂಜಯ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೋಟೆಯ ಆವರಣದಲ್ಲಿ ಮೂಲಸೌಕರ್ಯ ಒದಗಿಸಲು ಅನುದಾನ ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಕೋಟೆ ಅಭಿವೃದ್ದಿಗೆ ನಿಗದಿಯಾಗಿರುವ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 5 ಕೋಟಿ ಅನುದಾನ ನೀಡಲಾಗುವದು ಎಂದು ಪ್ರಕಟಿಸಿದರು.

ಇನ್ನೂ ಮಾರ್ಚ್ 5 ರಂದು ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತ್ತೊಮ್ಮೆ ಶಿವಾಜಿ ಮೂರ್ತಿ ಉದ್ಘಾಟಿಸುತ್ತಿರುವ ಕುರಿತು ಮಾತನಾಡಿ, ಇದು ಸರಕಾರಿ ಕಾರ್ಯಕ್ರಮ, ಹಾಗಾಗಿ ಉದ್ಘಾಟನೆಯ ದಿನವನ್ನು ನಾವು ನಿರ್ಧಾರ ಮಾಡುತ್ತೇವೆ. ಇಂದು ಉದ್ಘಾಟನೆಯಾಗಿದೆ. ಮತ್ತೊಮ್ಮೆ ಉದ್ಘಾಟನೆ ಮಾಡಲು ಬರುವುದಿಲ್ಲ. ಅವರ ಪಕ್ಷದ ಕಾರ್ಯಕ್ರಮ ಬೇಕಿದ್ದರೆ ಮಾಡಿಕೊಳ್ಳಲಿ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ ಜಾರಕಿಹೊಳಿ, ಅನೀಲ ಬೆನಕೆ, ಅಭಯ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಎಂ.ಜಿ ಹಿರೇಮಠ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ಉಪಸ್ಥಿತರಿದ್ದರು.

RELATED TOPICS:
English summary :CM Bommai unveiled Chhatrapati Shivaji statue at Rajahansagad

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...