ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿ ಆಸ್ಪತ್ರೆಗೆ ದಾಖಲು | JANATA NEWS
ನವದೆಹಲಿ : ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಜ್ವರ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಐಸಿಸಿ ವಕ್ತಾರರು ತಿಳಿಸಿದ್ದಾರೆ.
ಆಸ್ಪತ್ರೆಯ ಟ್ರಸ್ಟ್ ಸೊಸೈಟಿ ಅಧ್ಯಕ್ಷ ಡಿ.ಎಸ್ ರಾಣಾ, ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಸಲಹೆಗಾರ ಅರೂಪ್ ಬಸು ಅವರ ತಂಡವು ಸೋನಿಯಾ ಗಾಂಧಿ ಅವರ ಆರೋಗ್ಯ ಮೇಲ್ವಿಚಾರಣೆ ನಡೆಸುತ್ತಿದೆ.
ಸೋನಿಯಾ ಗಾಂಧಿ ಅವರನ್ನು ನಿಗಾವಣೆಯಲ್ಲಿ ಇರಿಸಲಾಗಿದ್ದು, ಅವರಿಗೆ ಅನೇಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
ಈ ವರ್ಷ ಅವರು ಆಸ್ಪತ್ರೆಗೆ ದಾಖಲಾಗುತ್ತಿರುವುದು ಎರಡನೇ ಬಾರಿಯಾಗಿದೆ. ಜನವರಿಯಲ್ಲಿಯೂ ಅವರು ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ದಿಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.